ಹಾಲ್ ಟಿಕೆಟ್ ನಲ್ಲಿ ಸನ್ನಿ ಲಿಯೋನ್ ಫೋಟೊ, ಶಿವಮೊಗ್ಗದಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ಕೇಸ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 9 NOVEMBER 2022

SHIMOGA | ಪರೀಕ್ಷೆಯ (TET EXAM) ಹಾಲ್ ಟಿಕೆಟ್ ಒಂದರಲ್ಲಿ ಅಭ್ಯರ್ಥಿಯ ಫೋಟೊ ಬದಲು ನಟಿ ಸನ್ನಿ ಲಿಯೋನ್ (sunny leone) ಫೋಟೊ ಪ್ರಕಟವಾಗಿದೆ. ಈ ಪ್ರಕರಣವೀಗ ಶಿವಮೊಗ್ಗದಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆ ಭಾನುವಾರ ನಡೆಸಿದ ಶಿಕ್ಷಕರ ಅರ್ಹತ ಪರೀಕ್ಷೆಯಲ್ಲಿ (TET EXAM) ಈ ಅವಾಂತರವಾಗಿದೆ. ಮಹಿಳಾ ಅಭ್ಯರ್ಥಿಯೊಬ್ಬರ ಫೋಟೊ ಬದಲು ಹಾಲ್ ಟಿಕೆಟ್ ನಲ್ಲಿ ನಟಿ ಸನ್ನಿ ಲಿಯೋನ್ ಫೋಟೋ ಪ್ರಕಟವಾಗಿದೆ.

(TET EXAM)

ಹಾಲ್ ಟಿಕೆಟ್ ನಲ್ಲಿ ಸನ್ನಿ ಲಿಯೋನ್

ಚಿಕ್ಕಮಗಳೂರು ಜಿಲ್ಲೆಯ ಮಹಿಳಾ ಅಭ್ಯರ್ಥಿಯೊಬ್ಬರ ಹಾಲ್ ಟಿಕೆಟ್ ನಲ್ಲಿ ಅವರ ಫೋಟೊ ಬದಲು ನಟಿ ಸನ್ನಿ ಲಯೋನ್ ಫೋಟೋ ಪ್ರಕಟವಾಗಿದೆ. ಶಿವಮೊಗ್ಗದ ಪರೀಕ್ಷಾ ಕೇಂದ್ರವೊಂದರಲ್ಲಿ ಅಭ್ಯರ್ಥಿ ಪರೀಕ್ಷೆಗೆ ಹಾಜರಾಗಿ ಮೇಲ್ವಿಚಾರಕರಿಗೆ ಈ ವಿಷಯ ತಿಳಿಸಿದ್ದಾರೆ. ಈ ವಿಚಾರ ಮಾಧ್ಯಮಗಳಲ್ಲಿ ಸುದ್ದಿಯಾಗಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆ ಪೊಲೀಸ್ ಠಾಣೆ ಮೆಟ್ಟಿಲೇರಿದೆ.

ಕ್ಲಿಕ್ ಮಾಡಿ ಇದನ್ನೂ ಓದಿ INSTAGRAM ಮೆಸೇಜಿನಲ್ಲಿ ಬಂದ ಲಿಂಕ್ ಕ್ಲಿಕ್ ಮಾಡಿದ ಶಿವಮೊಗ್ಗ ವ್ಯಕ್ತಿಗೆ ಮರುದಿನ ಕಾದಿತ್ತು ದೊಡ್ಡ ಶಾಕ್

ಅಭ್ಯರ್ಥಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ತಮ್ಮದೆ ಫೋಟೊ ಅಪ್ ಲೋಡ್ ಮಾಡಲಾಗಿತ್ತು. ಆದರೆ ಹಾಲ್ ಟಿಕೆಟ್ ಬಂದಾಗ ತನ್ನ ಫೋಟೊ ಬದಲು ಸನ್ನಿ ಲಿಯೋನ್ ಫೋಟೊ ಮುದ್ರಣವಾಗಿದೆ ಎಂದು ಆರೋಪಿಸಿದ್ದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.

ಈ ನಡುವೆ ಸಾರ್ವಜನಿಕ ಶಿಕ್ಷಣ ಇಲಾಖೆ, ಇದು ತಮ್ಮ ತಪ್ಪಲ್ಲ. ಫೋಟೊಗಳನ್ನು ಅಪ್ ಲೋಡ್ ಮಾಡಲು ಅಭ್ಯರ್ಥಿಗಳಿಗೆ ಸೂಚಿಸಲಾಗಿರುತ್ತದೆ. ಅವರು ಅಪ್ ಲೋಡ್ ಮಾಡಿದ ಭಾವಿಚಿತ್ರವೆ ಹಾಲ್ ಟಿಕೆಟ್ ನಲ್ಲಿ ಮುದ್ರಣವಾಗಿದೆ ಎಂದು ಹೇಳಿದೆ. ಅಲ್ಲದೆ, ಅಭ್ಯರ್ಥಿಯ ಪರೀಕ್ಷಾ ಕೇಂದ್ರ ಶಿವಮೊಗ್ಗದಲ್ಲಿ ಇದ್ದಿದ್ದರಿಂದ, ಇಲ್ಲಿಯೇ ದೂರು ಸಲ್ಲಿಸಿದೆ.

ವಿಚಾರಣೆ ಆರಂಭಿಸಿದ ಪೊಲೀಸ್

ದೂರು ಸ್ವೀಕರಿಸುತ್ತಿದ್ದಂತೆ ಶಿವಮೊಗ್ಗದ ಸಿಇಎನ್ ಠಾಣೆ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ. ಮಹಿಳಾ ಅಭ್ಯರ್ಥಿ ತನ್ನ ಪರಿಚಿತರಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದರು ಎಂದು ತಿಳಿದು ಬಂದಿದೆ. ಈ ಸಂಬಂಧ ಪರಿಚಿತರನ್ನು ಕರೆಯಿಸಿ ವಿಚಾರಣೆ ನಡೆಸಲಾಗುತ್ತಿದೆ.

Shimoga Nanjappa Hospital

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 9, 2022

Leave a Comment