ಶಿವಮೊಗ್ಗ ಸಿಟಿಯ ವಿವಿಧ ಬಾರ್‌, ವೈನ್ಸ್‌ ಶಾಪ್‌ಗಳಿಗೆ ಪೊಲೀಸರ ದಿಢೀರ್ ಭೇಟಿ, ಪರಿಶೀಲನೆ, ಕಾರಣವೇನು?

ಶಿವಮೊಗ್ಗ: ನಗರದ ವಿವಿಧ ಬಾರ್ ಆ್ಯಂಡ್ ರೆಸ್ಟೋರೆಂಟ್‌ಗಳು ಹಾಗೂ ವೈನ್ ಶಾಪ್‌ಗಳಿಗೆ ದಿಢೀರ್ ಭೇಟಿ ನೀಡಿದ ಪೊಲೀಸ್ ಅಧಿಕಾರಿಗಳು, ಪರಿಶೀಲನೆ ನಡೆಸಿದರು. ಬಳಿಕ ತಿಳಿವಳಿಕೆ ನೊಟೀಸ್‌ ನೀಡಲಾಗಿದೆ. ಸುದ್ದಿಯ ಮುಂದಿನ ಭಾಗ ಕೆಳಗಿದೆ.

21 ವರ್ಷಕ್ಕಿಂತ ಕಡಿಮೆ ವಯಸ್ಸಿನ ಯುವಕರಿಗೆ ಯಾವುದೇ ಕಾರಣಕ್ಕೂ ಮದ್ಯಪಾನ ಮಾಡಲು ಅಥವಾ ಧೂಮಪಾನ ಮಾಡಲು ಅವಕಾಶ ನೀಡಬಾರದು ಎಂದು ಅಂಗಡಿಗಳ ಮಾಲೀಕರಿಗೆ ಹಾಗೂ ವ್ಯವಸ್ಥಾಪಕರಿಗೆ ಸೂಚನೆ ನೀಡಲಾಯಿತು. ಯುವ ಪೀಳಿಗೆಯು ಮಾದಕ ವ್ಯಸನಗಳಿಗೆ ಬಲಿಯಾಗುವುದನ್ನು ತಡೆಯುವ ಮತ್ತು ನಗರದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಯ್ದುಕೊಳ್ಳುವ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಈ ದಿಢೀರ್ ಕಾರ್ಯಾಚರಣೆ ಕೈಗೊಂಡಿದ್ದಾರೆ.

Police-Check-at-Wine-Shops-and-Restaurants-in-Shimoga

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.
Nanjappa Hospital Advertisement
Shivamogga Live Promotion