ಕೊಳಚೆ ಪ್ರದೇಶದ ನಿವಾಸಿಗಳಿಗೆ ಹಕ್ಕುಪತ್ರ, ಶಿವಮೊಗ್ಗದಲ್ಲಿ ನಾಳೆಯಿಂದಲೆ ಸರ್ವೆ, ಏನೆಲ್ಲ ದಾಖಲೆ ಬೇಕು? ಶುಲ್ಕ ಎಷ್ಟು?

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

131951794 1031215290691714 4061890617426774129 n.jpg? nc cat=108&ccb=2& nc sid=730e14& nc ohc=FkyaIRRMuUEAX9p7CwQ& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 02 JANUARY 2021

ಸರ್ಕಾರಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಮಾಲಿಕತ್ವದಲ್ಲಿರುವ ಘೋಷಿತ ಕೊಳಚೆ ಪ್ರದೇಶಗಳಲ್ಲಿ ವಾಸವಿರುವ ನಿವಾಸಿಗಳಿಗೆ ಸ್ವತ್ತಿನ ಹಕ್ಕುಪತ್ರ ನೀಡಲು ಸರ್ಕಾರ ನಿರ್ಧರಿಸಿದೆ. ಮೊದಲ ಹಂತದಲ್ಲಿ ಶಿವಮೊಗ್ಗ ಜಿಲ್ಲೆಯ 18,700 ಕುಟುಂಬಗಳಿಗೆ ಇದರ ಪ್ರಯೋಜನವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ನಗರದಲ್ಲಿ ಘೋಷಿತ ಸರ್ಕಾರಿ ಮಾಲಿಕತ್ವದ 25 ಹಾಗೂ ಸ್ಥಳೀಯ ಸಂಸ್ಥೆ ಮಾಲಿಕತ್ವದಲ್ಲಿರುವ 10 ಕೊಳಚೆ ಪ್ರದೇಶಗಳು ಸೇರಿ ಒಟ್ಟು 35 ಕೊಳಚೆ ಪ್ರದೇಶಗಳಿವೆ. ಇಲ್ಲಿನ ನಿವಾಸಿಗಳಿಗೆ ಸ್ವತ್ತಿನ ಹಕ್ಕುಪತ್ರ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಮೊದಲಿಗೆ  ಮನೆ ಸಂಖ್ಯೆ ನಮೂದು

ಮೊದಲ ಹಂತದಲ್ಲಿ ಜನವರಿ 3ರಿಂದ ಕೊಳಚೆ ಪ್ರದೇಶದಲ್ಲಿರುವ ಮನೆಗಳಿಗೆ ಮನೆ ಸಂಖ್ಯೆಯನ್ನು ನಮೂದಿಸುವ ಕಾರ್ಯ ಪ್ರಾರಂಭವಾಗಲಿದೆ. ಎರಡನೇ ಹಂತದಲ್ಲಿ ಮನೆಗಳ ಸಮೀಕ್ಷೆ ಕಾರ್ಯ ಜನವರಿ 6ರಿಂದ ಪ್ರಾರಂಭವಾಗಲಿದೆ. ಹಕ್ಕುಪತ್ರ ನೀಡುವ ಪ್ರಕ್ರಿಯೆಯನ್ನು 3-4 ತಿಂಗಳ ಒಳಗಾಗಿ ಪೂರ್ಣಗೊಳಿಸುವ ಗುರಿಯನ್ನು ಹೊಂದಲಾಗಿದೆ ಎಂದು ಈಶ್ವರಪ್ಪ ಹೇಳಿದರು.

135365474 1300999376928146 3772484197555792905 o.jpg? nc cat=107&ccb=2& nc sid=8bfeb9& nc ohc=D7E5VUPZ7RAAX jQfd3& nc ht=scontent.fblr11 1

ದಾಖಲೆ, ಹತ್ತು ಸಾವಿರ ಶುಲ್ಕ

  • ಸರ್ವೆ ಕಾರ್ಯಕ್ಕೆ ಸಿಬ್ಬಂದಿಗಳು ಪ್ರತಿ ಮನೆಗಳಿಗೆ ಭೇಟಿ ನೀಡಲಿದ್ದು, ಅವರಿಗೆ ನಿಖರವಾದ ಮಾಹಿತಿ ಹಾಗೂ ದಾಖಲಾತಿ ನೀಡಿ ಸಹಕರಿಸಬೇಕು.
  • ಆಧಾರ್ ಕಾರ್ಡ್, ರೇಷನ್ ಕಾರ್ಡ್, ಬ್ಯಾಂಕ್ ಖಾತೆ ವಿವರಗಳು ಮತ್ತು ಜಾತಿ ಪ್ರಮಾಣ ಪತ್ರವನ್ನು ಸರ್ವೆ ಸಂದರ್ಭದಲ್ಲಿ ಒದಗಿಸಬೇಕು.
  • 10 ಸಾವಿರ ರೂ. ನೋಂದಣಿ ಶುಲ್ಕವನ್ನು ಭರಿಸಬೇಕು. ಸ್ಥಳೀಯ ಕಾರ್ಪೊರೇಟರ್‍ಗಳು ಸರ್ವೆ ಕಾರ್ಯಕ್ಕೆ ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.

ಖಾಸಗಿ ಜಮೀನಿನಲ್ಲಿರುವವರಿಗೆ ಎರಡನೇ ಹಂತದಲ್ಲಿ

ಕೊಳಚೆ ಪ್ರದೇಶ ನಿವಾಸಿಗಳ ಹಲವು ವರ್ಷಗಳ ಬೇಡಿಕೆ ಈಗ ಕೈಗೂಡುತ್ತಿದ್ದು, ಹಕ್ಕುಪತ್ರ ಲಭಿಸಿದ ಬಳಿಕ ಬ್ಯಾಂಕ್‍ಗಳಿಂದ ಹಣಕಾಸು ನೆರವು ಪಡೆದು ಸ್ವಂತ ಮನೆಯನ್ನು ನಿರ್ಮಿಸಲು ಸಾಧ್ಯವಾಗಲಿದೆ. ಎರಡನೇ ಹಂತದಲ್ಲಿ ಖಾಸಗಿ ಜಮೀನಿನಲ್ಲಿ ನಿರ್ಮಾಣಗೊಂಡಿರುವ ಕೊಳಚೆ ಪ್ರದೇಶದ ನಿವಾಸಿಗಳಿಗೆ ಹಕ್ಕುಪತ್ರ ನೀಡುವ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಸಚಿವರು ಹೇಳಿದರು.

ಜಿಲ್ಲೆಯಲ್ಲಿ ಎಷ್ಟಿವೆ ಕೊಳಚೆ ಪ್ರದೇಶ?

ಜಿಲ್ಲೆಯಲ್ಲಿ ಒಟ್ಟು 163 ಘೋಷಿತ ಕೊಳಚೆ ಪ್ರದೇಶಗಳಿವೆ. ಇದರಲ್ಲಿ ಸರ್ಕಾರಿ 65, ಖಾಸಗಿ 41, ಮಂಡಳಿ 2, ವಿ.ಐ.ಎಸ್.ಎಲ್ 5 ಮತ್ತು ಎಂ.ಪಿ.ಎಂನ 4 ಕೊಳಚೆ ಪ್ರದೇಶಗಳು ಸೇರಿವೆ. ಶಿವಮೊಗ್ಗ ನಗರದಲ್ಲಿ 25ಸರ್ಕಾರಿ, 10 ಮಹಾನಗರ ಪಾಲಿಕೆ ಮಾಲಿಕತ್ವದ ಕೊಳಚೆ ಪ್ರದೇಶಗಳಿದ್ದು, 5700 ಮನೆಗಳಿವೆ.

ಚಾನೆಲ್‍ ಮೇಲೆ ಕಟ್ಟಿದ್ದರೆ ಹಕ್ಕುಪತ್ರ

ಚಾನೆಲ್‍ಗಳ ಮೇಲೆ ಮನೆಗಳನ್ನು ನಿರ್ಮಿಸಿರುವವರಿಗೆ ಸುಪ್ರೀಂಕೋರ್ಟ್ ನಿರ್ದೇಶನದ ಪ್ರಕಾರ ಯಾವುದೇ ಕಾರಣಕ್ಕೂ ಹಕ್ಕುಪತ್ರ ನೀಡಲು ಸಾಧ್ಯವಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಅವರು ಉಪಸ್ಥಿತರಿದ್ದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment