BREAKING NEWS | ಶಂಕಿತ ಉಗ್ರ ಸೇರಿ ಇಬ್ಬರು ಆರೋಪಿಗಳು ಶಿವಮೊಗ್ಗ ಪೊಲೀಸ್ ಕಸ್ಟಡಿಗೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 30 ಅಕ್ಟೋಬರ್ 2021

ಉದ್ಯಮಿಯೊಬ್ಬರಿಗೆ ಬೆದರಿಕೆ ಹಾಕಿದ ಪ್ರಕರಣದ ವಿಚಾರಣೆ ಸಂಬಂಧ ಶಂಕಿತ ಉಗ್ರ ಸೇರಿದಂತೆ ಇಬ್ಬರನ್ನು ಆರೋಪಿಗಳನ್ನು ಬಿಗಿ ಭದ್ರತೆಯಲ್ಲಿ ಬೆಂಗಳೂರಿನಿಂದ ಕರೆತರಲಾಗಿದೆ. ಇಬ್ಬರು ಆರೋಪಿಗಳನ್ನು ಶಿವಮೊಗ್ಗ ನ್ಯಾಯಾಲಯ ನವೆಂಬರ್ 2ರವರೆಗೆ ಪೊಲೀಸ್ ಕಸ್ಟಡಿಗೆ ವಹಿಸಿದೆ.

ಬೆಂಗಳೂರಿನ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿದ್ದ ಶಂಕಿತ ಉಗ್ರ ಸದ್ದಾಂ ಹುಸೇನ್ ಮತ್ತು ಪ್ರಕರಣವೊಂದರಲ್ಲಿ ಶಿಕ್ಷೆ ಅನುಭವಿಸುತ್ತಿರುವ ನಾಗೇಂದ್ರ ಎಂಬುವವರನ್ನು ಶಿವಮೊಗ್ಗಕ್ಕೆ ಕರೆತರಲಾಗಿದೆ.

ಪೊಲೀಸ್ ಕಸ್ಟಡಿಗೆ ಆರೋಪಿಗಳು

ಇಬ್ಬರು ಆರೋಪಿಗಳನ್ನು ಪೊಲೀಸರು ಶಿವಮೊಗ್ಗ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಇಬ್ಬರನ್ನು ನವೆಂಬರ್ 2ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಬೆದರಿಕೆ ಪ್ರಕರಣ ಸಂಬಂಧ ಇವತ್ತಿನಿಂದ ವಿಚಾರಣೆ ನಡೆಯಲಿದೆ.

AVvXsEg7D64eppM2Y2YXBDC80Q2TdBmP2uvjR kzBF IPI

ಬಿಗಿ ಪೊಲೀಸ್ ಭದ್ರತೆ

ಶಂಕಿತ ಉಗ್ರ ಸದ್ದಾಂ ಹುಸೇನ್ ಮತ್ತು ನಾಗೇಂದ್ರಾನನ್ನು ಬಿಗಿ ಭದ್ರತೆಯಲ್ಲಿ ಶಿವಮೊಗ್ಗಕ್ಕೆ ಕರೆತರಲಾಯಿತು. ನ್ಯಾಯಾಲಯದ ಆವರಣದಲ್ಲಿಯು ಭದ್ರತೆ ನಿಯೋಜಿಸಲಾಗಿತ್ತು.

ಶಿವಮೊಗ್ಗದ ಉದ್ಯಮಿಯೊಬ್ಬರಿಗೆ ಬೆದರಿಕೆ ಹಾಕಿ ಹಣ ವಸೂಲಿ ಮಾಡಲಾಗಿತ್ತು. ಇದರ ಸಂಪೂರ್ವ ಮಾಹಿತಿ ಇಲ್ಲಿದೆ. ಕ್ಲಿಕ್ ಮಾಡಿ ಶಿವಮೊಗ್ಗ ಪೊಲೀಸರಿಂದ ಶಂಕಿತ ಉಗ್ರನ ಪತ್ನಿ ಅರೆಸ್ಟ್, ಕಾರಣವೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment