ಶಿವಮೊಗ್ಗದಲ್ಲಿ ರಕ್ತದ ಮಡುವಿನಲ್ಲಿ ಮಹಿಳೆಯ ಮೃತದೇಹ, ಕೈ ಕೊಯ್ದುಕೊಂಡ ಸ್ಥಿತಿಯಲ್ಲಿ ಪತಿ

 SHIVAMOGGA LIVE NEWS 

SHIMOGA | ಮನೆಯೊಂದರ ಅಡುಗೆ ಮನೆಯಲ್ಲಿ ರಕ್ತದ ಮಡುವಿನಲ್ಲಿ ಮಹಿಳೆಯ ಮೃತದೇಹ (WOMAN DEATH) ಪತ್ತೆಯಾಗಿದೆ. ಆಕೆಯ ಪತಿ ಕೈ ಕೊಯ್ದುಕೊಂಡ ಸ್ಥಿತಿಯಲ್ಲಿ ಸಿಕ್ಕಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

TODAY NEWS PARAGRAPH

ಶಿವಮೊಗ್ಗ ಬೈಪಾಸ್ (SHIMOGA BYPASS) ರಸ್ತೆ ಪಕ್ಕದ ಪ್ರಿಯಾಂಕಾ ಲೇಔಟ್ (PRIYANKA LAYOUT) ಮೂರನೆ ಅಡ್ಡರಸ್ತೆಯಲ್ಲಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ಮೃತ ಮಹಿಳೆಯನ್ನು ಮಂಜುಳಾ ಎಂದು ಗುರುತಿಸಲಾಗಿದೆ.

ರಕ್ತದ ಮಡುವಿನಲ್ಲಿ ಮೃತದೇಹ

ಮಂಜುಳಾ (30) ಮೃತಳು. ಅಡುಗೆ ಮನೆಯಲ್ಲಿ ಮಂಜುಳಾ ಅವರ ಮೃತದೇಹ ರಕ್ತದ ಮಡುವಿನಲ್ಲಿ ಪತ್ತೆಯಾಗಿದೆ. ಕತ್ತು ಕೊಯ್ದ ಸ್ಥಿತಿಯಲ್ಲಿ ಮೃತದೇಹ ಸಿಕ್ಕಿದೆ. ಕಳೆದ ರಾತ್ರಿ ಘಟನೆ ಸಂಭವಿಸಿದ್ದು, ಅಡುಗೆ ಮನೆ ತುಂಬಾ ರಕ್ತ ಹರಡಿಕೊಂಡಿದೆ.

ಕೈ ಕೊಯ್ದುಕೊಂಡ ಸ್ಥಿತಿಯಲ್ಲಿ ಪತಿ

ಇನ್ನು, ಮಂಜುಳಾ ಅವರ ಪತಿ ದಿನೇಶ್ ಕೈ ಕೊಯ್ದಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚಿಕಿತ್ಸೆ ನಡೆಯುತ್ತಿದೆ.

ಕೌಟುಂಬಿಕ ಕಲಹವೆ ಘಟನೆಗೆ ಕಾರಣ ಎಂದು ಶಂಕಿಸಲಾಗಿದೆ. ತುಂಗಾ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Shimoga Nanjappa Hospital

ದನ್ನೂ ಓದಿ – ಆಗುಂಬೆ ಮುಖ್ಯ ರಸ್ತೆಯಲ್ಲಿ ಕಾಡಾನೆ ಸಂಚಾರ, ವಿಡಿಯೋ ವೈರಲ್

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

breaking news graphics

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

Leave a Comment