SHIVAMOGGA LIVE NEWS | AIRPORT | 30 ಏಪ್ರಿಲ್ 2022
ಶಿವಮೊಗ್ಗದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೆಸರನ್ನು ಇಡಬೇಕು. ಈ ನಿರ್ಧಾರದಿಂದ ರಾಜ್ಯ ಸರ್ಕಾರ ಯಾವುದೆ ಕಾರಣಕ್ಕೂ ಹಿಂದೆ ಸರಿಯಬಾರದು ಎಂದು ಮಲೆನಾಡು ವೀರಶೈವ, ಲಿಂಗಾಯತ ಮಠಾಧೀಶರ ಪರಿಷತ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಣಯಿಸಲಾಯಿತು.
![]() |
ನಗರದ ಬೆಕ್ಕಿನಕಲ್ಮಠದಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.
‘ಯಾರೂ ವಿರೋಧ ಮಾಡಿಲ್ಲ’
ಸಭೆಯ ಸಾನ್ನಿಧ್ಯ ವಹಿಸಿದ್ದ ಮಲೆನಾಡು ವೀರಶೈವ, ಲಿಂಗಾಯ ಮಠಾಧೀಶರ ಪರಿಷತ್ ಅಧ್ಯಕ್ಷರು, ಬೆಕ್ಕಿನಕಲ್ಮಠದ ಶ್ರೀ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಅವರು, ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಅವರ ಹೆಸರು ಇಡುತ್ತಿರುವ ಕುರಿತು ಮುಖ್ಯಮಂತ್ರಿ ಅವರು ಘೋಷಿಸಿದರು. ಆಗ ಯಾರೂ ವಿರೋಧ ಮಾಡಲಿಲ್ಲ. ಯಡಿಯೂರಪ್ಪ ಅವರು ಪತ್ರ ಬರೆದ ಬಳಿಕ ಹಲವು ಹೆಸರುಗಳು ಕೇಳಿ ಬಂದಿವೆ. ಅವರ ಮೇಲಿನ ಪ್ರೀತಿಗೆ ಅವರ ಹೆಸರನ್ನು ನಾಮಕರಣ ಮಾಡಬೇಕಿದೆ. ಯಡಿಯೂರಪ್ಪ ಅವರು ಶಿವಮೊಗ್ಗ ಜಿಲ್ಲೆಗೆ ನೀಡಿದ ಕೊಡುಗೆ ಅಪಾರ. ಅದನ್ನು ಮುಂದಿನ ಪೀಳಿಗೆಗೆ ತಿಳಿಸುವ ಅಗತ್ಯವಿದೆ ಎಂದು ತಿಳಿಸಿದರು.
ಯಾರೆಲ್ಲ ಏನು ಹೇಳಿದರು?
ಸೂಡಾ ಮಾಜಿ ಅಧ್ಯಕ್ ಎಸ್.ಎಸ್.ಜ್ಯೋತಿಪ್ರಕಾಶ್ ಅವರು, ಯಡಿಯೂರಪ್ಪ ಅವರ ಪ್ರಯತ್ನದ ಫಲವಾಗಿ ಶಿವಮೊಗ್ಗ ಜಿಲ್ಲೆ ದೇಶದಲ್ಲೇ ಗುರುತಿಸಲ್ಪಡುತ್ತಿದೆ. ಸಾವಿರಾರು ಕೋಟಿ ರೂ. ಅನುದಾನ ತಂದು ಜಿಲ್ಲೆಯ ಅಭಿವೃದ್ಧಿ ಮಾಡಿದ್ದಾರೆ. ವಿಮಾನ ನಿಲ್ದಾಣಕ್ಕೆ ಅವರ ಹೆಸರು ಇಡುವುದು ಸೂಕ್ತ ಎಂದು ತಿಳಿಸಿದರು.
ಮಹಾನಗರ ಪಾಲಿಕೆ ಸದಸ್ಯ ಹೆಚ್.ಸಿ.ಯೋಗೇಶ್ ಅವರು ಮಾತನಾಡಿ, ವಿಮಾನ ನಿಲ್ದಾಣ ಕಾಮಗಾರಿ ಆರಂಭದಿಂದ ಮುಕ್ತಾಯದವರೆಗೂ ಯಡಿಯೂರಪ್ಪ ಅವರು ವಿಶೇಷ ನಿಗಾ ವಹಿಸಿದ್ದಾರೆ. ಯಡಿಯೂರಪ್ಪ ಅವರ ಹೆಸರು ಇಡುವ ಸರ್ಕಾರದ ನಿರ್ಧಾರ ಸರಿಯಾಗಿದೆ. ಯಡಿಯೂರಪ್ಪ ಅವರಿಂದ ಆರಂಭವಾದ ಜಿಲ್ಲೆಯ ಅಭಿವೃದ್ಧಿ ಪರ್ವವಯನ್ನು ಸಂಸದ ರಾಘವೇಂದ್ರ ಅವರು ಮುಂದುವರೆಸಿದ್ದಾರೆ ಎಂದರು.
ಯಡಿಯೂರಪ್ಪ ಹೆಸರು ಸೂಕ್ತ
ಸಭೆಯಲ್ಲಿ ಸಮಾಜದ ಪ್ರಮುಖರು ಮಾತನಾಡಿದರು. ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಅವರ ಹೆಸರನ್ನೆ ಇಡಬೇಕು. ಬದುಕಿರುವ ವ್ಯಕ್ತಿಯ ಹೆಸರನ್ನು ಯೋಜನೆಗಳಿಗೆ ಇಡಬಾರದು ಎಂಬ ಅಭಿಪ್ರಾಯ ರೂಪಿಸಲಾಗಿದೆ. ಆದರೆ ಸರ್. ಎಂ.ವಿಶ್ವೇಶ್ವರಯ್ಯ ಅವರು ಬದುಕಿದ್ದಾಗಲೆ ಒಂದು ಯೋಜನೆಗೆ ಅವರ ಹೆಸರನ್ನು ಇಡಲಾಗಿತ್ತು. ಸ್ಟೇಡಿಯಂ ಒಂದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರನ್ನು ಇಡಲಾಗಿದೆ ಎಂಬ ಅಭಿಪ್ರಾಯ ವ್ಯಕ್ತವಾಯಿತು.
ಬಿಳಕಿ ಮಠದ ಶ್ರೀ ರಾಚೋಟೇಶ್ವರ ಸ್ವಾಮೀಜಿ, ಜಡೆ ಮಠದ ಶ್ರೀ ಮಹಾಂತ ಸ್ವಾಮೀಜಿ, ಹಾರನಹಳ್ಳಿ ಚೌಕಿ ಮಠದ ಶ್ರೀ ನೀಲಕಂಠ ಸ್ವಾಮೀಜಿ, ಶಾಂತಪುರದ ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ಕಲ್ಮಠ ಗುತ್ತಲದ ಶ್ರೀ ಪ್ರಭು ಸ್ವಾಮೀಜಿ, ಶಿರಾಳಕೊಪ್ಪ ವಿರಕ್ತಮಠದ ಶ್ರೀ ಸಿದ್ದೇಶ್ವರ ಸ್ವಾಮೀಜಿ, ತೊಗರ್ಸಿ ಪಂಚವಣ್ಣಿಗೆ ಮಠದ ಶ್ರೀ ಚನ್ನವೀರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ವೀರಶೈವ ಸಮಾಜದ ಪ್ರಮುಖರಾದ ಎನ್.ಜೆ.ರಾಜಶೇಖರ್, ಗೀತಾ ರವೀಂದ್ರ, ಎಂ.ಆರ್ .ಪ್ರಕಾಶ್, ಪ್ರೊ.ಕಿರಣ ದೇಸಾಯಿ, ಎನ್.ಎಸ್.ಕುಮಾರ್, ಪಿ.ರುದ್ರೇಶ್, ಎಚ್.ವಿ.ಮಹೇಶ್ವರಪ್ಪ ಇ.ವಿಶ್ವಾಸ್ ಮಾತನಾಡಿದರು. ಕುವೆಂಪು ವಿವಿ ಸಿಂಡಿಕೇಟ್ ಸದಸ್ಯ ಬಳ್ಳೇಕೆರೆ ಸಂತೋಷ್, ಬಿಜೆಪಿ ಮುಖಂಡ ಮಾಲತೇಶ್, ಪ್ರಮುಖರಾದ ಕರಿಬಸವಯ್ಯ, ರೇಣುಕಾರಾಧ್ಯ ಇತರರಿದ್ದರು.
ಇದನ್ನೂ ಓದಿ – ಮೂರು ದಿನ ಶಿವಮೊಗ್ಗ, ಶಿಕಾರಿಪುರ ಪ್ರವಾಸ ಕೈಗೊಂಡ ಮಾಜಿ ಸಿಎಂ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200