ಅಧಿಕಾರ ವಹಿಸಿಕೊಂಡ ಮರುದಿನ ಶಿವಮೊಗ್ಗದಲ್ಲಿ ಸಚಿವರ ಕಾಲಿಗೆ ಬಿದ್ದ ತಹಶೀಲ್ದಾರ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

shivamogga live new logo formate

ಶಿವಮೊಗ್ಗ ಲೈವ್.ಕಾಂ | SHIMOGA | 1 ಮೇ 2020

ಅಧಿಕಾರ ವಹಿಸಿಕೊಂಡು ಕೆಲವೇ ಗಂಟೆಯಲ್ಲಿ ತಹಶೀಲ್ದಾರ್‌ ಅವರು ಗ್ರಾಮೀಣಾಭಿವೃ‍ದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡಿದ್ದಾರೆ.

ಶಿವಮೊಗ್ಗದ ನೂತನ ತಹಶೀಲ್ದಾರ್‌ ನಾಗರಾಜ್‌ ಅವರು ಏಪ್ರಿಲ್‌ 30ರಂದು ಅಧಿಕಾರ ವಹಿಸಿಕೊಂಡಿದ್ದರು. ಇವತ್ತು ಸಾರ್ವಜನಿಕ ಕಾರ್ಯಕ್ರಮ ಒಂದರಲ್ಲಿ ಪಾಲ್ಗೊಂಡು ಹೊರ ಬರುತ್ತಿದ್ದ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ತಹಶೀಲ್ದಾರ್‌ ನಾಗರಾಜ್‌ ಅವರು ಭೇಟಿಯಾದರು.

ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಪರಿಚಯಿಸಿಕೊಂಡ ನೂತನ ತಹಶೀಲ್ದಾರ್‌ ಅವರು, ಮೊದಲಿಗೆ ಕೈ ಮುಗಿಸಿದರು. ಬಳಿಕ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡರು. ಸಾರ್ವಜನಿಕವಾಗಿ ತಹಶೀಲ್ದಾರ್‌ ಅವರು ಸಚಿವರ ಕಾಲಿಗೆ ಬದ್ದಿದ್ದು ಆಕ್ಷೇಪಕ್ಕೆ ಕಾರಣವಾಗಿದೆ.

ಶಿವಮೊಗ್ಗದಲ್ಲಿ ತಹಶೀಲ್ದಾರ್‌ ಆಗಿದ್ದ ಗಿರೀಶ್‌ ಅವರನ್ನು ದಾವಣಗೆರೆಗೆ ವರ್ಗಾವಣೆ ಮಾಡಲಾಗಿದೆ. ದಾವಣಗೆರೆ ಜಿಲ್ಲೆ ಚನ್ನಗರಿಯಲ್ಲಿ ತಹಶೀಲ್ದಾರ್‌ ಅಗಿದ್ದ ನಾಗರಾಜ್‌ಅವರನ್ನು ಶಿವಮೊಗ್ಗಕ್ಕೆ ವರ್ಗಾಯಿಸಲಾಗಿದೆ.

95132241 857973851349193 1704349070090305536 n.jpg? nc cat=109& nc sid=dd9801& nc ohc=P I5w 5gfgcAX 79J3x& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 1, 2020

Leave a Comment