ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 11 ಮಾರ್ಚ್ 2022
ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಬಳಿಕ ಸಾರ್ವಜನಿಕರ ಶಾಂತಿಭಂಗಕ್ಕೆ ಕುತ್ತು ತಂದ ಆರೋಪದ ಅಡಿ 379 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ವಿಚಾರಣೆಗೆ ಹಾಜರಾಗದವರ ಮೇಲೆ ತಹಸೀಲ್ದಾರ್ ಕೋರ್ಟ್‌ನಿಂದ ವಾರಂಟ್ ಜಾರಿ ಮಾಡಲಾಗಿದೆ.
ಮಂಗಳವಾರ ಮತ್ತು ಬುಧವಾರ 309 ಮಂದಿಗೆ ಎರಡನೇ ಸುತ್ತಿನ ವಿಚಾರಣೆಗೆ ಹಾಜರಾಗುವಂತೆ ತಹಸೀಲ್ದಾರ್ ಕೋರ್ಟ್ ನೋಟಿಸ್ ನೀಡಿತ್ತು. ಆದರೆ ಅದರಲ್ಲಿ ಬಹಳಷ್ಟು ಮಂದಿ ಗೈರು ಹಾಜರಾಗಿದ್ದಾರೆ.
ಮಂಗಳವಾರ 209ರಲ್ಲಿ 150 ಮತ್ತು ಬುಧವಾರ 100ರಲ್ಲಿ 90 ಮಂದಿ ಗೈರು ಹಾಜರಾಗಿದ್ದಾರೆ. ಹಾಗಾಗಿ ಗೈರು ಹಾಜರಾದವರಿಗೆ ವಾರಂಟ್ ನೀಡಲಾಗಿದೆ.
ಹರ್ಷನ ಶವಯಾತ್ರೆ ವೇಳೆ ಕಲ್ಲು ತೂರಾಟವಾಗಿತ್ತು. ಈ ವೇಳೆ ದೊಡ್ಡಪೇಟೆ, ಕೋಟೆ ಮತ್ತು ತುಂಗಾನಗರ ಠಾಣಾ ವ್ಯಾಪ್ತಿಯಲ್ಲಿ ಶಾಂತಿಭಂಗ ಉಂಟು ಮಾಡಿದ ಆರೋಪದ ಅಡಿ 379 ಜನರಿಗೆ ನೋಟಿಸ್ ನೀಡಲಾಗಿತ್ತು. ಮೊದಲ ಹಂತದಲ್ಲಿ 70 ಮಂದಿಗೆ ನೋಟಿಸ್ ನೀಡಿದ್ದು ವಿಚಾರಣೆಗೆ ಹಾಜರಾಗಿದ್ದರು.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422