ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 29 APRIL 2024
SHIMOGA : ವೃತ್ತಿಪರ ಟೈಲರ್‌ಗಳಿಗೆ ಮೂಲ ಸೌಕರ್ಯ ಒದಗಿಸಬೇಕು ಎಂದು ರಾಜ್ಯ ಟೈಲರ್ಸ್ ಅಸೋಸಿಯೇಷನ್ ವತಿಯಿಂದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ ಮನವಿ ಸಲ್ಲಿಸಿದರು.
ಕಲ್ಲಹಳ್ಳಿಯಲ್ಲಿ ಸಚಿವ ಮಧು ಬಂಗಾರಪ್ಪ ಮನೆಗೆ ಸಚಿವ ಸಂತೋಷ್ ಲಾಡ್ ಭೇಟಿ ವೇಳೆ ಮನವಿ ಟೈಲರ್ ಅಸೋಸಿಯೇಷನ್ ಪದಾಧಿಕಾರಿಗಳು ಮನವಿ ಸಲ್ಲಿಸಿದರು. ರಾಜ್ಯದಲ್ಲಿ 10 ಲಕ್ಷ ಟೈಲರ್‌ಗಳಿದ್ದಾರೆ. ಶಿವಮೊಗ್ಗದಲ್ಲಿ 50 ಸಾವಿರ ಟೈಲರಿಂಗ್ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಕಟ್ಟಡ ಕಾರ್ಮಿಕರ ಮಂಡಳಿ ರೀತಿ ವೃತ್ತಿಪರ ಟೈಲರ್‌ಗಳಿಗೆ ಟೈಲರ್ಸ್ ಕ್ಷೇಮಾಭಿವೃದ್ಧಿ ಮಂಡಳಿ ಸ್ಥಾಪಿಸಬೇಕು. 58 ವರ್ಷ ಮೇಲ್ಪಟ್ಟ ವೃತ್ತಿಪರರಿಗೆ ಆರೋಗ್ಯ ವಿಮಾ, ಪಿಂಚಣಿ ಯೋಜನೆ ಜಾರಿಗೊಳಿಸಬೇಕು. ಟೈಲರ್‌ಗಳ ಮಕ್ಕಳಿಗೆ ಶೈಕ್ಷಣಿಕ ಸಾಲ, ವಿದ್ಯಾರ್ಥಿ ವೇತನ ನೀಡಬೇಕು ಎಂದು ಮನವಿ ಸಲ್ಲಿಸಿದರು.
ಅಸೋಸಿಯೇಷನ್ ಅಧ್ಯಕ್ಷ ಜೆ.ಎಸ್.ಸುಬ್ರಹ್ಮಣ್ಯ, ಪ್ರಧಾನ ಕಾರ್ಯದರ್ಶಿ ಪಿ.ರವೀಂದ್ರ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಇನ್ನು ಐದು ದಿನ ಆರೆಂಜ್ ಅಲರ್ಟ್, ಹಲವು ಜಿಲ್ಲೆಗಳಿಗು ವಾರ್ನಿಂಗ್, ಏನಿದು ಎಚ್ಚರಿಕೆ?
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422