ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 26 APRIL 2023
SHIMOGA : ಚಲಿಸುತ್ತಿದ್ದ ಬೈಕಿಗೆ ಟ್ಯಾಂಕರ್ ಲಾರಿಯೊಂದು (Tanker) ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ಶಿವಮೊಗ್ಗದ ಆಲ್ಕೊಳ ಸರ್ಕಲ್ ಬಳಿ ಘಟನೆ ಸಂಭವಿಸಿದೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಆಕಾಶ್ (18) ಗಾಯಾಳು. ಗಾಡಿಕೊಪ್ಪದಿಂದ ಆಲ್ಕೊಳ ಮೂಲಕ ಲಕ್ಷ್ಮೀ ಟಾಕೀಸ್ ಬಳಿ ಇರುವ ಸ್ನೇಹಿತನ ಭೇಟಿಗೆ ಆಕಾಶ್ ಬೈಕಿನಲ್ಲಿ ತೆರಳುತ್ತಿದ್ದ. ಈ ವೇಳೆ ಆಲ್ಕೊಳ ಸರ್ಕಲ್ ಬಳಿ ಬೈಕಿನ ಹಿಂಬದಿಯಲ್ಲಿ ಬರುತ್ತಿದ್ದ ಟ್ಯಾಂಕರ್ (Tanker) ಲಾರಿ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಆಕಾಶ್ ತಲೆಗೆ ಗಂಭೀರ ಗಾಯವಾಗಿದ್ದು, ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸುವಂತೆ ವೈದ್ಯರು ಸೂಚಿಸಿದ್ದಾರೆ. ಶಿವಮೊಗ್ಗ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಸರ್ಕಲ್ನಲ್ಲಿ ಆಟೋಗೆ ಡಿಕ್ಕಿ ಹೊಡೆದ ಕಾರು
ಕಾರು ಮತ್ತು ಆಟೋ ಮಧ್ಯೆ ಅಪಘಾತ ಸಂಭವಿಸಿ, ಇಬ್ಬರು ಗಾಯಗೊಂಡಿದ್ದಾರೆ. ಕಾರು ಚಾಲಕನ ಅಜಾಗರೂಕತೆ ಚಾಲನೆಯಿಂದ ಅಪಘಾತವಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಆಟೋ ಚಾಲಕ ಶಾಬಾಜ್ ಪಾಷಾ ತನ್ನ ಆಟೋದಲ್ಲಿ ಶರತ್ ಎಂಬ ಪ್ರಯಾಣಿಕನನ್ನು ಶಿವಮೊಗ್ಗದ ಬಸ್ ನಿಲ್ದಾಣದಿಂದ ರೈಲ್ವೆ ನಿಲ್ದಾಣಕ್ಕೆ ಬಿಡಲು ತೆರಳುತ್ತಿದ್ದರು. ಮಹಾವೀರ ಸರ್ಕಲ್ನಲ್ಲಿ ಆಟೋ ತೆರಳುತ್ತಿದ್ದಾಗ ಶಿವಮೂರ್ತಿ ಸರ್ಕಲ್ ಕಡೆಯಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಆಟೋ ಚಾಲಕ ಶಾಬಾಜ್ ಪಾಷ ಮತ್ತು ಪ್ರಯಾಣಿಕ ಶರತ್ ಅವರಿಗೆ ಗಾಯಗಳಾಗಿವೆ. ಇಬ್ಬರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಿವಮೊಗ್ಗದ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಕಾಲೇಜಿನಲ್ಲಿ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, 13 ವಿದ್ಯಾರ್ಥಿಗಳು ಆಸ್ಪತ್ರೆಗೆ