ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಜುಲೈ 2020
ಎಸ್ಸೆಸ್ಸೆಲ್ಸಿ ಉತ್ತರ ಪತ್ರಿಕೆ ಮೌಲ್ಯಮಾಪನಕ್ಕೆ ಬಂದಿದ್ದ ಶಿಕ್ಷಕರೊಬ್ಬರಿಗೆ ಹೃದಯಾಘಾತ ಸಂಭವಿಸಿ ಕೊನೆಯುಸಿರೆಳೆದಿದ್ದಾರೆ. ಶಿವಮೊಗ್ಗದ ಮೌಲ್ಯಮಾಪನ ಕೇಂದ್ರವೊಂದರಲ್ಲಿ ಘಟನೆ ಸಂಭವಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಭದ್ರಾವತಿಯ ಈಶ್ವರಮ್ಮ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕ ಕುಮಾರ್ (48) ಮೃತರು. ಮಧ್ಯಾಹ್ನ ಊಟ ಮಾಡುವಾಗ ಶಿಕ್ಷಕ ಕುಮಾರ್ ಅವರು ಕುಸಿದು ಬಿದ್ದಿದ್ದಾರೆ. ಕೂಡಲೆ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಷ್ಟು ಹೊತ್ತಿಗಾಗಲೇ ಅವರು ಕೊನೆಯುಸಿರೆಳೆದಿದ್ದಾರೆ.
ಸಂತಾಪ ಸೂಚಿಸಿದ ಶಿಕ್ಷಕರು
ಇನ್ನು, ಶಿವಮೊಗ್ಗದ ಎಲ್ಲಾ ಮೌಲ್ಯಮಾಪನ ಕೇಂದ್ರದಲ್ಲಿ ಶಿಕ್ಷಕರು ಸಂತಾಪ ಸಭೆ ನಡೆಸಿದರು. ಮೌನಾಚರಣೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]