ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 19 ಫೆಬ್ರವರಿ 2020
ಶಿವಮೊಗ್ಗ ನಗರದ ಖಾಸಗಿ ಆಸ್ಪತ್ರೆ ಬಳಿ ಸಿಕ್ಕ ಹತ್ತು ಸಾವಿರ ರೂಪಾಯಿ ಹಣವನ್ನು ಶಿಕ್ಷಕರೊಬ್ಬರು ಪೊಲೀಸ್ ಠಾಣೆಗೆ ಒಪ್ಪಿಸಿ ಪ್ರಾಮಾಣಿಕತೆ ಮರೆದಿದ್ದಾರೆ. ಶಿಕ್ಷಕರ ಕೆಲಸಕ್ಕೆ ಪ್ರಶಂಸೆ ವ್ಯಕ್ತವಾಗಿದೆ.
ಮಿಳಘಟ್ಟ ಶಾಲೆ ದೈಹಿಕ ಶಿಕ್ಷಕ ಶರಣಪ್ಪ ಅವರಿಗೆ ರಸ್ತೆಯಲ್ಲಿ 10 ಸಾವಿರ ರುಪಾಯಿ ಹಣ ಸಿಕ್ಕಿದೆ. ಇದನ್ನು ಜಯನಗರ ಪೊಲೀಸ್ ಠಾಣೆ ಒಪ್ಪಿಸಿದ್ದಾರೆ.
ಶಿಕ್ಷಕ ಶರಣಪ್ಪ ಅವರು ಶಾಲೆಯ ಕೆಲಸಕ್ಕಾಗಿ ಶಿವಮೊಗ್ಗ ಸಂಸದ ರಾಘವೇಂದ್ರ ಅವರ ಕಚೇರಿಗೆ ಬರುತ್ತಿದ್ದರು. ಈ ವೇಳೆ ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆ ಸಮೀಪ, ರಸ್ತೆಯಲ್ಲಿ 500 ರೂ. ನೋಟಿನ ಕಂತೆ ಬಿದ್ದಿತ್ತು. ಇದನ್ನು ಗಮನಿಸಿದ ಶರಣಪ್ಪ ಅವರು ಬೈಕ್ ನಿಲ್ಲಿಸಿ ಹಣವನ್ನು ಎತ್ತಿಕೊಂಡಿದ್ದಾರೆ.
ಈ ವೇಳೆ ಸ್ಥಳದಲ್ಲಿದ್ದ ಕೆಲವರು ಹಣವನ್ನು ತಮಗೆ ಕೊಡುವಂತೆ ಆಗ್ರಹಿಸಿದ್ದಾರೆ. ಆದರೆ ಆ ಹಣಕ್ಕೂ ಅವರಿಗು ಸಂಬಂಧ ಇಲ್ಲ ಅನ್ನುವುದು ಸ್ಪಷ್ಟವಾಗುತ್ತಿದ್ದಂತೆ ಪೊಲೀಸ್ ಠಾಣೆಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ಜಯನಗರ ಠಾಣೆ ಪೊಲೀಸರು ಹಣವನ್ನು ವಶಕ್ಕೆ ಪಡೆದಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422