| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್‌ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ ಲೈವ್.ಕಾಂ | SHIMOGA | 19 ಫೆಬ್ರವರಿ 2020

ಶಿವಮೊಗ್ಗ ನಗರದ ಖಾಸಗಿ ಆಸ್ಪತ್ರೆ ಬಳಿ ಸಿಕ್ಕ ಹತ್ತು ಸಾವಿರ ರೂಪಾಯಿ ಹಣವನ್ನು ಶಿಕ್ಷಕರೊಬ್ಬರು ಪೊಲೀಸ್ ಠಾಣೆಗೆ ಒಪ್ಪಿಸಿ ಪ್ರಾಮಾಣಿಕತೆ ಮರೆದಿದ್ದಾರೆ. ಶಿಕ್ಷಕರ ಕೆಲಸಕ್ಕೆ ಪ್ರಶಂಸೆ ವ್ಯಕ್ತವಾಗಿದೆ.
ಮಿಳಘಟ್ಟ ಶಾಲೆ ದೈಹಿಕ ಶಿಕ್ಷಕ ಶರಣಪ್ಪ ಅವರಿಗೆ ರಸ್ತೆಯಲ್ಲಿ 10 ಸಾವಿರ ರುಪಾಯಿ ಹಣ ಸಿಕ್ಕಿದೆ. ಇದನ್ನು ಜಯನಗರ ಪೊಲೀಸ್ ಠಾಣೆ ಒಪ್ಪಿಸಿದ್ದಾರೆ.
ಶಿಕ್ಷಕ ಶರಣಪ್ಪ ಅವರು ಶಾಲೆಯ ಕೆಲಸಕ್ಕಾಗಿ ಶಿವಮೊಗ್ಗ ಸಂಸದ ರಾಘವೇಂದ್ರ ಅವರ ಕಚೇರಿಗೆ ಬರುತ್ತಿದ್ದರು. ಈ ವೇಳೆ ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆ ಸಮೀಪ, ರಸ್ತೆಯಲ್ಲಿ 500 ರೂ. ನೋಟಿನ ಕಂತೆ ಬಿದ್ದಿತ್ತು. ಇದನ್ನು ಗಮನಿಸಿದ ಶರಣಪ್ಪ ಅವರು ಬೈಕ್ ನಿಲ್ಲಿಸಿ ಹಣವನ್ನು ಎತ್ತಿಕೊಂಡಿದ್ದಾರೆ.
ಈ ವೇಳೆ ಸ್ಥಳದಲ್ಲಿದ್ದ ಕೆಲವರು ಹಣವನ್ನು ತಮಗೆ ಕೊಡುವಂತೆ ಆಗ್ರಹಿಸಿದ್ದಾರೆ. ಆದರೆ ಆ ಹಣಕ್ಕೂ ಅವರಿಗು ಸಂಬಂಧ ಇಲ್ಲ ಅನ್ನುವುದು ಸ್ಪಷ್ಟವಾಗುತ್ತಿದ್ದಂತೆ ಪೊಲೀಸ್ ಠಾಣೆಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ಜಯನಗರ ಠಾಣೆ ಪೊಲೀಸರು ಹಣವನ್ನು ವಶಕ್ಕೆ ಪಡೆದಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಶಿವಮೊಗ್ಗದಲ್ಲಿ ಪೊಲೀಸರ ದಾಳಿ, ಸಾಗರದ ವ್ಯಕ್ತಿ ಅರೆಸ್ಟ್, ಕಾರಣವೇನು?
- ದಿನ ಪಂಚಾಂಗ, ಇಂದಿನ ರಾಶಿ ಭವಿಷ್ಯ – ಓದಲು ಇಲ್ಲಿ ಕ್ಲಿಕ್ ಮಾಡಿ
- ಭದ್ರಾವತಿಯಲ್ಲಿ ರೈಲಿನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಶಿವಮೊಗ್ಗದಲ್ಲಿ ಸಾವು
- ಮಹಿಳೆಯರಿಗೆ ಗುಡ್ ನ್ಯೂಸ್, ಶಿವಮೊಗ್ಗದಲ್ಲಿ ನಾಳೆ ಉತ್ಸವ್ ಮೇಳ, ಏನೇನೆಲ್ಲ ಇರುತ್ತೆ?
- ಅಡಿಕೆ ಧಾರಣೆ | 11 ಡಿಸೆಂಬರ್ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?
- ಶಿವಮೊಗ್ಗದಲ್ಲಿ ನಾಳೆ ಕಂದಾಯೋತ್ಸವ, ಎರಡು ದಿನ ಏನೇನು ಕಾರ್ಯಕ್ರಮ ನಡೆಯಲಿದೆ?
- ಮರದಿಂದ ಬಿದ್ದು ಕಾಳಿಂಗ ಸರ್ಪ ಸಾವು, ಎಲ್ಲಿ? ಹೇಗಾಯ್ತು?
- ಭದ್ರಾವತಿ ಆಕಾಶವಾಣಿಯಲ್ಲಿ ಹೆಲ್ತ್ ಹಿಂಟ್ಸ್, ಬದುಕು ಜಟಕಾಬಂಡಿ ಕಾರ್ಯಕ್ರಮ, ಟೈಮಿಂಗ್ ಏನು?
![]()