ಶಿವಮೊಗ್ಗದಲ್ಲಿ ಟೆಕ್‌ಝೋನ್‌ ನ್ಯಾಷನಲ್ಸ್‌, ಸಾವಿರ ಸಾವಿರ ವಿದ್ಯಾರ್ಥಿಗಳು ಭಾಗಿ, ಏನಿದು ಕಾರ್ಯಕ್ರಮ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ನಗರದ ಜೆ.ಎನ್.ಎನ್‌ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ನ.10 ಮತ್ತು 11 ರಂದು ಎರಡು ದಿನಗಳ ಕಾಲ ರಾಷ್ಟ್ರಮಟ್ಟದ ತಾಂತ್ರಿಕ ಉತ್ಸವ ‘ಟೆಕ್‌ಝೋನ್‌ ನ್ಯಾಷನಲ್ಸ್‌ 2025’ (tech zone) ಕಾರ್ಯಕ್ರಮ ಆಯೋಜಿಸಲಾಗಿದೆ.

ನ.10ರ ಬೆಳಗ್ಗೆ 9.30 ಕ್ಕೆ ಕಾಲೇಜಿನ ಎಂಬಿಎ-ಎಂಸಿಎ ಸಭಾಂಗಣದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಹೊಸೂರಿನ ಅಧಿಯಮಾನ್‌ ಇಂಜಿನಿಯರಿಂಗ್‌ ಕಾಲೇಜಿನ ನಿರ್ದೇಶಕ ಹಾಗೂ ದಿ ಇನ್ಸ್ಟಿಟ್ಯೂಷನ್‌ ಆಫ್‌ ಇಂಜಿನಿಯರ್ಸ್‌ ಅಧ್ಯಕ್ಷ ಡಾ.ಜಿ.ರಂಗನಾಥ ಉದ್ಘಾಟಿಸಲಿದ್ದಾರೆ. ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್‌ ಅಧ್ಯಕ್ಷತೆ ವಹಿಸಲಿದ್ದು, ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಪ್ರಾಂಶುಪಾಲರಾದ ಡಾ.ವೈ.ವಿಜಯಕುಮಾರ್‌, ಸಂಶೋಧನಾ ಡೀನ್‌ ಡಾ.ಎಸ್.ವಿ.ಸತ್ಯನಾರಾಯಣ, ಸಂಶೋಧಕರಾದ ಡಾ.ಈ.ಬಸವರಾಜ್‌ ಉಪಸ್ಥಿತರಿರಲಿದ್ದಾರೆ.

JNNCE-college-Engineering-Shimoga

ಎರಡು ದಿನಗಳ ಈ ಕಾರ್ಯಕ್ರಮದಲ್ಲಿ ದೇಶದ ವಿವಿಧ ಇಂಜಿನಿಯರಿಂಗ್‌ ಕಾಲೇಜುಗಳ ಸುಮಾರು 1300 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಜೆ.ಎನ್‌.ಎನ್.ಸಿ.ಇ ಕಾಲೇಜಿನ 2000 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ವಿದ್ಯಾರ್ಥಿಗಳು ತಮ್ಮ ತಾಂತ್ರಿಕ ಪರಿಣತಿ, ಯೋಜನೆಗಳ ವಿನ್ಯಾಸ ಕೌಶಲ್ಯತೆ ಹಾಗೂ ನವೀನ ಚಿಂತನೆಗಳನ್ನು ಪ್ರದರ್ಶಿಸಲಿದ್ದಾರೆ.

ವಿದ್ಯಾರ್ಥಿಗಳಲ್ಲಿ ನವೀನತೆ, ಸಂಯೋಜನೆ  ಮತ್ತು ಸೃಜನಾತ್ಮಕತೆಯ ಮೂಲಕ ಸಮಸ್ಯೆಗಳನ್ನು ಪರಿಹರಿಸುವ ಚಿಂತನೆಗೆ ಪ್ರೇರಣೆ ನೀಡುವ ಉದ್ದೇಶವನ್ನು ಈ ಕಾರ್ಯಕ್ರಮ ಹೊಂದಿದೆ. ಈ ಉತ್ಸವದಲ್ಲಿ ಎಲ್ಲಾ ಇಂಜಿನಿಯರಿಂಗ್ ಶಾಖೆಗಳ ಪ್ರತಿನಿಧಿಸುವ ಐದು ಪ್ರಮುಖ ವಿಭಾಗಗಳು ಒಳಗೊಂಡಿವೆ.

ಪಿಯು ವಿದ್ಯಾರ್ಥಿಗಳಿಗೆ ಮುಕ್ತ ಅವಕಾಶ

ಕಾರ್ಯಕ್ರಮದಲ್ಲಿ ಪ್ರಸ್ತುತ ಪಡಿಸುವ ನಾವೀನ್ಯ ಪ್ರಾತ್ಯಕ್ಷಕಿಗಳನ್ನು ವೀಕ್ಷಿಸಲು ಹಾಗೂ ಆಧುನಿಕ ಆವಿಷ್ಕಾರಗಳ ಅರಿವು ಪಡೆಯಲು, ಪಿಯು ವಿದ್ಯಾರ್ಥಿಗಳು ಭಾಗವಹಿಸಲು ಮುಕ್ತ ಅವಕಾಶ ಕಲ್ಪಿಸಲಾಗಿದೆ.

ಇದನ್ನೂ ಓದಿ » ಡಿಸಿ ಕಚೇರಿ ಮುಂದೆ PUC ಉಪನ್ಯಾಸಕ ಹೋರಾಟ, ಸಾಲು ಸಾಲು ಬೇಡಿಕೆ ಈಡೇರಿಕೆಗೆ ಆಗ್ರಹ

tech zone

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 8, 2025

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment