ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
[su_highlight background=”#d70000″ color=”#ffffff”]SHIVAMOGGA LIVE NEWS[/su_highlight]
SHIMOGA | ಸೂರ್ಯಗ್ರಹಣದ ಹಿನ್ನೆಲೆ ಅ.25ರಂದು ಜಿಲ್ಲೆಯ ಬಹುತೇಕ ದೇವಸ್ಥಾನಗಳನ್ನು ಬಂದ್ ಮಾಡಲಾಗುತ್ತಿದೆ. ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದ್ದು, ಗ್ರಹಣ ಕಾಲದ ನಂತರ ವಿಶೇಷ ಪೂಜೆ ನಡೆಸಲಾಗುತ್ತದೆ. (solar eclipse)
ಅ.25ರಂದು ಸೂರ್ಯಗ್ರಹಣ ಸಂಭವಿಸಲಿದೆ. ಭೂಮಿ ಮತ್ತು ಸೂರ್ಯನ ನಡುವೆ ಚಂದ್ರ ಹಾದು ಹೋಗಲಿದ್ದಾನೆ. ಈ ವೇಳೆ ಸೂರ್ಯನ ಬೆಳಕು ಭೂಮಿ ಮೇಲೆ ಬೀಳುವುದನ್ನು ಚಂದ್ರ ತಡೆಯಲಿದ್ದಾನೆ. (solar eclipse)
(solar eclipse)
ಸಿಗಂದೂರಿಗೆ ಭಕ್ತರ ಪ್ರವೇಶವಿಲ್ಲ
ಸೂರ್ಯಗ್ರಹಣದ ಹಿನ್ನೆಲೆ ಅ.25ರಂದು ಸಿಗಂದೂರಿನ (SIGANDUR) ಶ್ರೀ ಚೌಡೇಶ್ವರಿ ಕ್ಷೇತ್ರದಲ್ಲಿ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ‘ಗ್ರಹಣದ ಪ್ರಯುಕ್ತ ಬೆಳಗ್ಗೆ 9 ಗಂಟೆಯಿಂದ ಸಂಜೆವರೆಗೆ ಸಾರ್ವಜನಿಕರಿಗೆ ಯಾವುದೆ ಪೂಜೆ ಮತ್ತು ದರ್ಶನಕ್ಕೆ ಅವಕಾಶ ಇರುವುದಿಲ್ಲ’ ಎಂದು ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
(solar eclipse)
ಗ್ರಹಣದ ನಂತರ ವಿಶೇಷ ಪೂಜೆ
ಶಿವಮೊಗ್ಗದ ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದಲ್ಲಿಯು ಗ್ರಹಣ ಸಂದರ್ಭ ದೇವರ ದರ್ಶನ, ಪೂಜೆಗೆ ಅವಕಾಶವಿಲ್ಲ. ಶಿವಮೊಗ್ಗ ಲೈವ್.ಕಾಂ ಜೊತೆಗೆ ಮಾತನಾಡಿದ ದೇವಸ್ಥಾನದ ಅರ್ಚಕ ರಾಮ ಪ್ರಸಾದ್ ಅವರು, ‘ಗ್ರಹಣದ ಸಮಯದಲ್ಲಿ ದೇವಸ್ಥಾನದ ಬಾಗಿಲು ಹಾಕಲಾಗುತ್ತೆ. ಗ್ರಹಣ ಮುಗಿದ ಮೇಲೆ ದೇವಸ್ಥಾನದ ಆವರಣವನ್ನು ಶುಚಿಗೊಳಿಸಲಾಗುತ್ತದೆ. ಪುಣ್ಯಾಹ ಮಾಡಿ ಬಾಗಿಲು ತೆಗೆದು ಅಂಜನೇಯನಿಗೆ ಪೂಜೆ ಸಲ್ಲಿಸಲಾಗುತ್ತದೆ’ ಎಂದು ತಿಳಿಸಿದರು.
ಎಲ್ಲಾ ದೇಗುಲಗಳು ಬಂದ್
ದೀಪಾವಳಿ ಹಬ್ಬದ ಸಂದರ್ಭ ಮೂರು ದಿನವು ಎಲ್ಲಾ ದೇಗುಲಗಳಲ್ಲಿ ವಿಶೇಷ ಪೂಜೆ ನಡೆಯುತ್ತಿತ್ತು. ಆದರೆ ಗ್ರಹಣದ ಹಿನ್ನೆಲೆ, ಗ್ರಹಣದ ಅವಧಿಯಲ್ಲಿ ಎಲ್ಲಾ ದೇಗುಲಗಳಲ್ಲಿಯು ದೇವರ ಪೂಜೆ, ದರ್ಶನಕ್ಕೆ ನಿರ್ಬಂಧ ವಿಧಿಸಲಾಗಿದೆ. ಆ ಬಳಿಕ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ.
ಕ್ಲಿಕ್ ಮಾಡಿ ಇದನ್ನೂ ಓದಿ | ದುಬಾರಿ ದೀಪಾವಳಿ, ಮಾರುಕಟ್ಟೆಯಲ್ಲಿ ಬಿರುಸಾಯ್ತು ಹಬ್ಬದ ಖರೀದಿ, ಹೇಗಿದೆ ಹೂವು, ಹಣ್ಣಿನ ಬೆಲೆ?
‘ಸೂರ್ಯ ಗ್ರಹಣಕ್ಕೆ ಕೆಲವರು ಹೆದರಿ ಮನೆಯಿಂದ ಹೊರಗೆ ಬರುವುದಿಲ್ಲ. ಇನ್ನೂ ಕೆಲವರು ದೇವಸ್ಥಾನಗಳಿಗೆ ಬಂದು ಜಪ ಮಾಡುತ್ತಾರೆ. ವಿಷ್ಣು ಸಹಸ್ರನಾಮ ಪಾರಾಯಣ ಮಾಡುತ್ತಾರೆ. ಕೆಲವರು ಗ್ರಹಣ ಕಾಲದ ಬಳಿಕ ಸ್ನಾನ ಮುಗಿಸಿ ದೇವಸ್ಥಾನಕ್ಕೆ ಬಂದು ಪೂಜೆ ಸಲ್ಲಿಸುತ್ತಾರೆ’ ಅನ್ನುತ್ತಾರೆ ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದ ಅರ್ಚಕ ರಾಮಪ್ರಸಾದ್.

ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















