ಕೋಟೆ ಆಂಜನೇಯನ ದರ್ಶನ ಪಡೆದು ಪುನೀತರಾದ ಭಕ್ತರು, ಸಿಗಂದೂರು, ಹೊಂಬುಜದಲ್ಲೂ ದೇವಿಯ ದರ್ಶನ ಶುರು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ಜುಲೈ 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಎರಡು ತಿಂಗಳಿಂದ ಬಂದ್ ಆಗಿದ್ದ ದೇವಸ್ಥಾನಗಳು ಇವತ್ತಿನಿಂದ ಬಾಗಿಲು ತೆರೆದಿವೆ. ಬೆಳಗ್ಗೆಯಿಂದ ನಿರಂತರವಾಗಿ ಭಕ್ತರು ದೇವರ ದರ್ಶನಕ್ಕೆ ಭೇಟಿ ನೀಡುತ್ತಿದ್ದಾರೆ.

ಲಾಕ್ ಡೌನ್ ಹಿನ್ನೆಲೆಯಲ್ಲಿ ದೇವಸ್ಥಾನಗಳನ್ನು ಬಂದ್ ಮಾಡಲಾಗಿತ್ತು. ಕೋವಿಡ್ ಪ್ರಕರಣಗಳು ಕಡಿಮೆಯಾದ ಹಿನ್ನೆಲೆ, ಸರ್ಕಾರ ದೇವಸ್ಥಾನಗಳ ಬಾಗಿಲು ತೆಗೆಯಲು ಅವಕಾಶ ನೀಡಿದೆ.

ಶಿವಮೊಗ್ಗ ಸಿಟಿಯಲ್ಲಿ ಹೇಗಿದೆ ವ್ಯವಸ್ಥೆ?

ಸರ್ಕಾರದ ಆದೇಶದ ಹಿನ್ನೆಲೆ ಶಿವಮೊಗ್ಗ ನಗರದ ಪ್ರಮುಖ ದೇವಸ್ಥಾನಗಳ ಬಾಗಿಲು ತೆಗೆಯಲಾಗಿದೆ. ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದಲ್ಲಿ ಬೆಳಗ್ಗೆಯಿಂದ ಭಕ್ತರು ಬರುತ್ತಿದ್ದಾರೆ. ಜನ ಗುಂಪುಗೂಡದಂತೆ ಕ್ರಮ ವಹಿಸಲಾಗಿದೆ. ಪೂಜೆಯನ್ನಷ್ಟೆ ಮಾಡಲಾಗುತ್ತಿದೆ. ಆದರೆ ತೀರ್ಥ ಪ್ರಸಾದ ವಿತರಣೆ ಅವಕಾಶವಿಲ್ಲ ಎಂದು ಸರ್ಕಾರ ಸೂಚಿಸಿದೆ. ಅದರಂತೆ ಕೋವಿಡ್ ನಿಯಮಗಳನ್ನು ಪಾಲಿಸಲಾಗುತ್ತಿದೆ. ಇಲ್ಲಿದೆ ವಿಡಿಯೋ ರಿಪೋರ್ಟ್‍

ಸಿಗಂದೂರಲ್ಲಿ ತಾಯಿಯ ದರ್ಶನ

ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲೂ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ಕೋವಿಡ್ ನಿಯಮ ಪಾಲಿಸಿಕೊಂಡು ಭಕ್ತರು ದೇವಿಯ ದರ್ಶನ ಪಡೆಯಬಹುದಾಗಿದೆ ಎಂದು ಅನುವಂಶಿಯ ಧರ್ಮಾಧಿಕಾರಿ ಅವರು ತಿಳಿಸಿದ್ದಾರೆ.

203044815 1148179448995297 4099900154580379732 n.jpg? nc cat=100&ccb=1 3& nc sid=730e14& nc ohc=EB7AAr6Q0TkAX9CDOlV&tn=XgSJ3kUX1No5RJvs& nc ht=scontent.fblr1 6

ಹೊಂಬುಜದಲ್ಲೂ ದರ್ಶನಕ್ಕೆ ಅವಕಾಶ

ಶ್ರೀ ಕ್ಷೇತ್ರ ಹೊಂಬುಜದಲ್ಲಿ ಬಸದಿಗಳು ಮತ್ತು ಶ್ರೀ ಪದ್ಮಾವತಿ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಪದ್ಮಾವತಿ ತಾಯಿಯ ಬಸದಿ ಜೀರ್ಣೋದ್ದಾರ ಕಾರ್ಯ ಪ್ರಗತಿಯಲ್ಲಿರುವುದರಿಂದ ದರ್ಶನಕ್ಕೆ ಸಮಯ ನಿಗದಿಪಡಿಸಲಾಗಿದೆ. ಬೆಳಗ್ಗೆ 7 ರಿಂದ 9 ಮತ್ತು ಸಂಜೆ 6 ರಿಂದ 8ರವರೆಗೆ ದೇವರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಭಕ್ತರಿಗೆ ಹತ್ತು ನಿಮಿಷ ಮಾತ್ರ ದೇವಸ್ಥಾನದ ಆವರಣದಲ್ಲಿರಲು ಅವಕಾಶವಿದೆ. ಪೂಜೆಗೆ ಹೊರಗಿನಿಂದ ತಂದ ವಸ್ತುಗಳನ್ನು ಸ್ವೀಕರಿಸುವುದಿಲ್ಲ. ಊಟ, ವಸತಿಗೆ ವ್ಯವಸ್ತೆ ಇರುತ್ತದೆ ಎಂದು ಶ್ರೀಮಠದ ಆಡಳಿತಾಧಿಕಾರಿ ತಿಳಿಸಿದ್ದಾರೆ.

ಜಿಲ್ಲಾಯಾದ್ಯಂತ ಇರುವ ಮುಜರಾಯಿ ಮತ್ತು ಖಾಸಗಿ ದೇವಸ್ಥಾನಗಳಲ್ಲಿ ಇವತ್ತು ದೇವರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮೊದಲ ದಿನವಾದ್ದರಿಂದ ಭಕ್ತರ ಸಂಖ್ಯೆ ಕಡಿಮೆಯಿತ್ತು. ನಾಳೆಯಿಂದ ಈ ಸಂಖ್ಯೆ ಹೆಚ್ಚಳವಾಗುವ ನಿರೀಕ್ಷೆಯಿದೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment