ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 28 DECEMBER 2023
SHIMOGA : ಸೀತಾ ಕಲ್ಯಾಣೋತ್ಸವದ ಅಂಗವಾಗಿ ಶಿವಮೊಗ್ಗ ತುಂಗಾ ನದಿಯಲ್ಲಿ ಶ್ರೀ ಸೀತಾರಾಮಾಂಜನೇಯ ಸ್ವಾಮಿಯ ವೈಭವದ ತೆಪ್ಪೋತ್ಸವ ನಡೆಯಿತು. ದೊಡ್ಡ ಸಂಖ್ಯೆಯ ಭಕ್ತರು ತೆಪ್ಪೋತ್ಸವವನ್ನು ಕಣ್ತುಂಬಿಕೊಂಡು ಪುನೀತರಾದರು.
ಕೋರ್ಪಲಯ್ಯ ಛತ್ರ ಮಂಟಪದ ಬಳಿ ತುಂಗಾ ನದಿಯಲ್ಲಿ ಇವತ್ತು ತೆಪ್ಪೋತ್ಸವ ನೆರವೇರಿತು. ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದ ಮೂರ್ತಿಗಳನ್ನು ತೆಪ್ಪದಲ್ಲಿ ಇರಿಸಿ, ತುಂಗಾ ನದಿಯಲ್ಲಿ ಉತ್ಸವ ನೆರವೇರಿಸಲಾಯಿತು.
ಇದನ್ನೂ ಓದಿ – ಕುಪ್ಪಳಿಯಲ್ಲಿ ರಾಷ್ಟ್ರಕವಿಯ ಜನ್ಮದಿನೋತ್ಸವ, ಬಂಗಾಳಿ ಸಾಹಿತಿಗೆ ಪ್ರಶಸ್ತಿ ಪ್ರದಾನ, ಏನೇನೆಲ್ಲ ಕಾರ್ಯಕ್ರಮಗಳಿವೆ?
ತೆಪ್ಪೋತ್ಸವ ಆರಂಭವಾಗುತ್ತಿದ್ದಂತೆ ಭಕ್ತರು ಶ್ರದ್ಧಾ ಭಕ್ತಿಯಿಂದ ಪ್ರಾರ್ಥನೆ ಸಲ್ಲಿಸಿದರು. ಘೋಷಣೆಗಳನ್ನು ಕೂಗಿದರು. ತೆಪ್ಪೋತ್ಸವದ ಸಂದರ್ಭ ಬಣ್ಣ ಬಣ್ಣದ ಸಿಡಿಮದ್ದುಗಳನ್ನು ಸಿಡಿಸಲಾಯಿತು. ಇದನ್ನು ಕಣ್ತುಂಬಿಕೊಂಡು ಜನರು ಖುಷಿ ಪಟ್ಟರು. ಇನ್ನು, ಹೊಳೆಯಲ್ಲಿ ದೀಪಗಳನ್ನು ತೇಲಿ ಬಿಡಲಾಯಿತು. ಇದು ತೆಪ್ಪೋತ್ಸವದ ಮೆರಗು ಹೆಚ್ಚಿಸಿತು.
ಇಲ್ಲಿದೆ 12 ಫೋಟೊಗಳು












LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು
















