ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
[su_highlight background=”#d70000″ color=”#ffffff”]SHIVAMOGGA LIVE NEWS[/su_highlight]
ಶಿವಮೊಗ್ಗ | ಸಾವರ್ಕರ್ (SAVARKAR) ಫೋಟೊ ವಿವಾದ (CONTROVERSY) ಸಂದರ್ಭ ಯುವಕನಿಗೆ ಚಾಕು ಇರಿದ ಆರೋಪಿ ಜಬೀವುಲ್ಲಾನ ಹಿನ್ನೆಲೆ ಭಯಾನಕವಾಗಿದೆ. ಆತನಿಗೆ ಹಲವು ಉಗ್ರ ಗುಂಪಿನೊಂದಿಗೆ (TERROR LINK) ನಂಟು ಇದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಿಳಿಸಿದರು.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಗೃಹ ಸಚಿವ (HOME MINISTER) ಆರಗ ಜ್ಞಾನೇಂದ್ರ ಅವರು, ಜಬೀವುಲ್ಲಾನ ಪ್ರಕರಣ ಅತ್ಯಂತ ಭಯಾನಕವಾಗಿದೆ. ಆತನಿಗೆ ಹಲವು ಉಗ್ರವಾದಿ ಗುಂಪುಗಳ ಜೊತೆ ನಂಟು ಇದೆ ಎಂದು ತಿಳಿಸಿದರು.
ಎನ್ಐಎಗೆ ಪ್ರಕರಣ?
ಶೀಘ್ರದಲ್ಲೇ ಜಬೀವುಲ್ಲಾ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (NIA) ವಹಿಸಲಾಗುತ್ತದೆ. ಇಂತಹವರಿಂದ ದೇಶ ಉಳಿಯುತ್ತದಾ. ಆತನ ಹಿನ್ನೆಲೆ ಭಯಾನಕವಾಗಿ ಇರುವುದರಿಂದ ಎನ್ಐಎಗೆ ಪ್ರಕರಣ ವಹಿಸಲಾಗುತ್ತಿದೆ ಎಂದು ತಿಳಿಸಿದರು.
ಯಾರಿದು ಜಬೀವುಲ್ಲಾ?
ಆಗಸ್ಟ್ 15ರಂದು ಶಿವಮೊಗ್ಗದ ಅಮೀರ್ ಅಹಮದ್ ಸರ್ಕಲ್’ನಲ್ಲಿ ಸಾರ್ವಕರ್ ಫ್ಲೆಕ್ಸ್ ವಿವಾದ ಸಂಬಂಧ ಗಲಾಟೆಯಾಗಿತ್ತು. ಆ ದಿನ ಗಾಂಧಿ ಬಜಾರ್ ಬಳಿ ಪ್ರೇಮ್ ಸಿಂಗ್ ಎಂಬ ಯುವಕನಿಗೆ ಚಾಕು ಇರಿಯಲಾಗಿತ್ತು. ಈ ಪ್ರಕರಣ ಸಂಬಂಧ ಜಬೀವುಲ್ಲಾನ ಪಾತ್ರ ಇರುವುದು ಪೊಲೀಸರಿಗೆ ತಿಳಿದು ಬಂದಿತ್ತು.

ಮಾರ್ನಮಿ ಬೈಲು ನಿವಾಸಿ ಜಬೀವುಲ್ಲಾ ಅಲಿಯಾಸ್ ಚರ್ಬಿ (30) ಎಂಬಾತನನ್ನು ಬಂಧಿಸುವ ವೇಳೆ, ಪೊಲೀಸರ ಮೇಲೆ ಚಾಕುವಿನಿಂದ ದಾಳಿಗೆ ಯತ್ನಿಸಿದ್ದ. ಈ ಸಂದರ್ಭ ಪೊಲೀಸರು ಆತ್ಮರಕ್ಷಣೆಗೆ ಹಾರಿಸಿದ ಗುಂಡು, ಜಬೀವುಲ್ಲಾನ ಕಾಲಿಗೆ ತಗುಲಿತ್ತು. ಗಾಯಗೊಂಡಿದ್ದ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇತ್ತೀಚೆಗಷ್ಟೆ ಜಬೀವುಲ್ಲಾ ಆಸ್ಪತ್ರೆಯಿಂದ ಬಿಡುಗಡೆಯಾಗಿ, ಜೈಲು ಸೇರಿದ್ದ.

ಜಬೀವುಲ್ಲಾ ಮನೆ ಮೇಲೆ ದಾಳಿ
ಜಬೀವುಲ್ಲಾ ಸೇರಿದಂತೆ ಚಾಕು ಇರಿತ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಹಿನ್ನೆಲೆ ಕುರಿತು ಅನುಮಾನ ವ್ಯಕ್ತಪಡಿಸಿದ್ದ ಪೊಲೀಸರು, ಮನೆಗಳ ಮೇಲೆ ದಾಳಿ ನಡೆಸಿದ್ದರು. ರಾತ್ರೋರಾತ್ರಿ ದಾಳಿ ನಡೆಸಿದ್ದ ಪೊಲೀಸರಿಗೆ ಆತನ ನಂಟು ಕುರಿತು ಹಲವು ಮಾಹಿತಿ ಸಂಗ್ರಹಿಸಿದ್ದರು.
.ಇದನ್ನೂ ಓದಿ – ‘ಈಗ ಬಾಲ ಮುದುಡಿಕೊಂಡಿದ್ದಾರೆ, ತಲೆಹರಟೆ ಮಾಡಿದರೆ ಎಲ್ಲಿಡಬೇಕೋ ಅಲ್ಲಿಡುತ್ತೇವೆ’
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















