ಶಿವಮೊಗ್ಗ: ಜವಳಿ ವಲಯದ ರಫ್ತು ಉದ್ದಿಮೆದಾರರಿಗೆ ಪ್ರೋತ್ಸಾಹ ನೀಡಲು ಕೈಮಗ್ಗ ಮತ್ತು ಜವಳಿ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಅಕ್ಟೋಬರ್ 27 ರಂದು ನಗರದಲ್ಲಿ ಒಂದು ದಿನದ ರಫ್ತು ಪ್ರೋತ್ಸಾಹದ ಕಾರ್ಯಾಗಾರ ಆಯೋಜಿಸಲಾಗಿದೆ. (ಈ ಸುದ್ದಿಯನ್ನು ಇನ್ನು 51 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಬೆಳಿಗ್ಗೆ 10:30ಕ್ಕೆ ನಗರದ ಶಿವಪ್ಪನಾಯಕ ಕಾಂಪ್ಲೆಕ್ಸ್ನ 3ನೇ ಮಹಡಿಯಲ್ಲಿರುವ ಜಿಲ್ಲಾ ಕೈಗಾರಿಕಾ ಕೇಂದ್ರದ ಸರ್. ಎಂ. ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಕಾರ್ಯಾಗಾರ ನಡೆಯಲಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕ ಮಂಜುನಾಥ್ ಹೆಚ್. ಅಮ್ರದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾರ್ಯಾಗಾರದ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ವಹಿಸಲಿದ್ದು, ಕೈಮಗ್ಗ ಮತ್ತು ಜವಳಿ ಇಲಾಖೆಯ ಜವಳಿ ಅಭಿವೃದ್ಧಿ ಆಯುಕ್ತ ಹಾಗೂ ನಿರ್ದೇಶಕ ಎ.ಬಿ. ಬಸವರಾಜು ಉದ್ಘಾಟಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ರಿಷಿ ಆನಂದ್ ಆಗಮಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೈಮಗ್ಗ ಮತ್ತು ಜವಳಿ ಇಲಾಖೆಯ ಅಪರ ನಿರ್ದೇಶಕ ಸಿ.ಎಸ್. ಯೋಗೇಶ್, ಜಂಟಿ ನಿರ್ದೇಶಕರಾದ ಸುಮಲತಾ ಡಿ. ಹಾಗೂ ಆರ್. ಗಣೇಶ್ ಪಾಲ್ಗೊಳ್ಳಲಿದ್ದಾರೆ. ಕಾರ್ಯಾಗಾರದಲ್ಲಿ ಅರವಿಂದ್ ಭಟ್, ಲೋಕೇಶ್ವರಿ ಗೌಡ, ಸಂಕೇತ್ ಕೂಗೆ, ವಿಕಾಸಕುಮಾರ ಪ್ರಸಾದ, ದೊರೆಬಾಬು, ಸುಂದರೇಶ್ ಬಿ.ಜೆ. ಹಾಗೂ ಸುರೇಶ್ ಎ. ಅವರು ಜವಳಿ ರಫ್ತು ಹಾಗೂ ಪ್ರೋತ್ಸಾಹಕ ವಿಷಯಗಳ ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.