ಗುಡ್ಡೇಕಲ್‌ನಲ್ಲಿ ತೈಪೂಸಂ ಜಾತ್ರೆ, ಹಾಲಿನ ಕುಂಭ ಹೊತ್ತು ಮಹಿಳೆಯರ ಮೆರವಣಿಗೆ, ಜಾತ್ರೆಯ ವಿಶೇಷವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಗುಡ್ಡೇಕಲ್‌ನ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ 7ನೇ ವರ್ಷದ ತೈಪೂಸಂ ಜಾತ್ರಾ ಮಹೋತ್ಸವ (Thaipoosam festival) ವಿಜೃಂಭಣೆಯಿಂದ ನೆರವೇರಿತು. ಸಾವಿರಾರು ಜನರು ಹಾಲಿನ ಕುಂಭ ಹೊತ್ತು ಬಂದು ದೇವರಿಗೆ ಅಭಿಷೇಕ ಮಾಡಿ ಪುನೀತರಾದರು.

ಬೆಳಗ್ಗೆಯಿಂದಲೇ ಪೂಜೆ, ಆರಾಧನೆ

ಪುಷ್ಯ ಮಾಸದ ಪ್ರಯುಕ್ತ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ತೈಪೂಸಂ ಜಾತ್ರಾ ಮಹೋತ್ಸವ ನಡೆಯಿತು. ದೇಗುಲದಲ್ಲಿ ಬೆಳಗೆಯಿಂದಲೆ ನಿರಂತರ ಪೂಜೆ ನಡೆಯುತ್ತಿದೆ. ಇಂದು ದೀಪಾರಾಧನೆ ನೆರವೇರಿಸಲಾಯಿತು. ಬಳಿಕ ಹಾಲಿನ ಕುಂಭ ಹೊತ್ತು ಬಂದ ಭಕ್ತರು ದೇವರಿಗೆ ಅಭಿಷೇಕ ಮಾಡಿದರು.

Guddekal-temple-taipusam-festival-in-shimoga

ನಗರದ ವಿವಿಧೆಡೆಯಿಂದ ಮೆರವಣಿಗೆ

ವಿನೋಬನಗರದ ಶುಭಮಂಗಳ ಕಲ್ಯಾಣ ಮಂಟಪ ಮತ್ತು ಗಾಂಧಿ ಬಜಾರ್‌ನ ಶ್ರೀ ರೇಣುಕಾಂಬ ದೇವಸ್ಥಾನದಿಂದ ಹಾಲಿನ ಕುಂಭ ಹೊತ್ತು ಮಹಿಳೆಯರು ಮೆರವಣಿಗೆ ನಡೆಸಿದರು. ಶಿವಪ್ಪನಾಯಕ ಪ್ರತಿಮೆ ಬಳಿ ಎರಡು ಕಡೆಯಿಂದ ಕುಂಭ ಹೊತ್ತು ಬಂದವರು ಸಂಗಮವಾಗಿ ಅಲ್ಲಿಂದ ಗುಡ್ಡೇಕಲ್‌ಗೆ ಮೆರವಣಿಗೆ ನಡೆಸಿದರು. ದೇವರಿಗೆ ಪೂಜೆ ಸಲ್ಲಿಸಿ, ಬಳಿಕ ಶ್ರೀ ಬಾಲಸುಬ್ರಹ್ಮಣ್ಯ ದೇವರಿಗೆ ಹಾಲಿನ ಅಭಿಷೇಕ ಮಾಡಲಾಯಿತು.

ಸಾವಿರ ಸಾವಿರ ಭಕ್ತರು ಭಾಗಿ

ಜಾತ್ರೆ ಅಂಗವಾಗಿ ಗುಡ್ಡೇಕಲ್‌ನ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇಗುಲಕ್ಕೆ ಸಾವಿರಾರು ಭಕ್ತರು ಆಗಮಿಸಿದ್ದರು. ವಿವಿಧ ಹರಕೆ ತೀರಿಸಿ ಪೂಜೆ ಸಲ್ಲಿಸಿದರು. ಇನ್ನು, ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಟ್ರಸ್ಟ್‌ ವತಿಯಿಂದ ಭಕ್ತರಿಗೆ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.

Total-Readers-of-Shivamogga-Live

ಇದನ್ನೂ ಓದಿ – ಶಿವಮೊಗ್ಗದಲ್ಲಿ ಡಿ.ಕೆ.ಶಿವಕುಮಾರ್‌, ಕಾರ್ಯಕರ್ತರ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 1, 2026

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment