ಮದುವೆ ಸಮಾರಂಭದಿಂದ ಮನೆಗೆ ಹಿಂತಿರುಗಿದ ಕುಟುಂಬಕ್ಕೆ ಕಾದಿತ್ತು ಶಾಕ್‌, ಆಗಿದ್ದೇನು?

ಶಿವಮೊಗ್ಗ: ಕುಟುಂಬದವರೆಲ್ಲ ಮದುವೆ ಸಮಾರಂಭಕ್ಕೆ (Marriage) ತೆರಳಿದ್ದಾಗ ಮನೆಯ ಬಾಗಿಲಿನ ಬೀಗ ಮುರಿದು ಚಿನ್ನಾಭರಣ ಕಳ್ಳತನ ಮಾಡಲಾಗಿದೆ. ಶಿವಮೊಗ್ಗದ ಅಣ್ಣಾನಗರದ ನಾಜೀಮಾ ಬಾನು ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ.

ನಾಜೀಮಾ ಬಾನು ಅವರು ಸಂಬಂಧಿಯ ಮದುವೆ ಸಮಾರಂಭಕ್ಕೆ ತೆರಳಿದ್ದರು. ಮರುದಿನ ಮನೆಗೆ ಮರಳಿದಾಗ ಬಾಗಿಲಿನ ಬೀಗ ಮುರಿಯಲಾಗಿತ್ತು. ಒಳಗೆ ವಸ್ತುಗಳು ಚೆಲ್ಲಾಪಿಲ್ಲಿಯಾಗಿದ್ದವು. ಪರಿಶೀಲಿಸಿದಾಗ 1.40 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನವಾಗಿರುವುದು ಗೊತ್ತಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಶಿವಮೊಗ್ಗ – ಹೊಳೆಹೊನ್ನೂರು ರಸ್ತೆಯಲ್ಲಿ ಭೀಕರ ಅಪಘಾತ, ಫೋಟೊಗ್ರಾಫರ್‌ ಕೊನೆಯುಸಿರು

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ
Crime-News-General-Image

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

Leave a Comment