ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | DACOITY | 08 ಮೇ 2022
ಮಟ ಮಟ ಮಧ್ಯಾಹ್ನ ನಡು ರಸ್ತೆಯಲ್ಲಿ ವ್ಯಕ್ತಿಯೊಬ್ಬರಿಗೆ ಚಾಕು ತೋರಿಸಿ ಹಣ ಕಿತ್ತುಕೊಂಡು ಹೋಗಿರುವ ಸಂಬಂಧ ಪ್ರಕರಣ ದಾಖಲಾಗಿದೆ.
ಶಿವಮೊಗ್ಗದ ಆರ್.ಎಂ.ಎಲ್ ನಗರದಲ್ಲಿ ಘಟನೆ ಸಂಭವಿಸಿದೆ. ಕಾರ್ ಡೀಲರ್ ಸದ್ದಾಂ ಹುಸೇನ್ ಅವರು ಕೆಲಸ ಮುಗಿಸಿ ಮಧ್ಯಾಹ್ನ ಮನೆಗೆ ತೆರಳುತ್ತಿದ್ದರು. ಈ ವೇಳೆ ಮುಖ್ಯ ರಸ್ತೆಯಲ್ಲಿ ಹೋಗುತ್ತಿದ್ದಾಗ ಬೈಕಿನಲ್ಲಿ ಬಂದ ಇಬ್ಬರು ಅಡ್ಡಗಟ್ಟಿದ್ದಾರೆ.
ಬೈಕಿನ ಹಿಂಭಾಗದಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬ ಕೆಳಗಿಳಿದು ಬಂದು ಸದ್ದಾ ಹುಸೇನ್ ಅವರನ್ನು ಅಡ್ಡಗಟ್ಟಿದ್ದಾನೆ. ಚಾಕು ತೋರಿಸಿ ಜೇಬಿನಲ್ಲಿರುವ ಹಣ ಕೊಡುವಂತೆ ಬೆದರಿಸಿದ್ದಾನೆ. ಸದ್ದಾಂ ಹುಸೇನ್ ಅವರು ತಮ್ಮ ಜೇಬಿನಲ್ಲಿದ್ದ 8 ಸಾವಿರ ರೂ. ಹಣವನ್ನು ತೆಗೆದು ಕೊಟ್ಟಿದ್ದಾರೆ.
ಬೈಕಿನಲ್ಲಿದ್ದ ಓರ್ವ ಆರೋಪಿಯ ಗುರುತು ಪತ್ತೆಯಾಗಿದ್ದು, ಸಯ್ಯದ್ ಖುರೇಷಿ ಎಂದು ಗುರುತಿಸಲಾಗಿದೆ. ಚಾಕು ತೋರಿಸಿ ಬೆದರಿಸಿ, ಹಣ ಕಿತ್ತುಕೊಂಡು ಹೋದ ಸಯ್ಯದ್ ಖುರೇಷಿ ಮತ್ತು ಇನ್ನೊಬ್ಬನ ವಿರುದ್ಧ ಸದ್ದಾಂ ಹುಸೇನ್ ದೂರು ನೀಡಿದ್ದಾರೆ.
ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ಇದನ್ನೂ ಓದಿ – ಸೂಳೆಬೈಲ್ ಮುಖ್ಯರಸ್ತೆಯಲ್ಲಿ ಗೃಹ ಸಚಿವರಿಂದ ವಾರ್ನಿಂಗ್, ಏನಂದರು ಹೋಂ ಮಿನಿಸ್ಟರ್?
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















