ಶಿವಮೊಗ್ಗದಲ್ಲಿ KSRTC ಬಸ್ಸಿನಲ್ಲಿ ಟಿಕೆಟ್ ಮಾಡಿಸಲು ವ್ಯಾನಿಟಿ ಬ್ಯಾಗ್ ತೆಗೆದ ಮಹಿಳೆಗೆ ಆಘಾತ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 8 APRIL 2023

SHIMOGA : ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗಿನಲ್ಲಿದ್ದ (Vanity Bag) ಚಿನ್ನದ ಸರ ಮತ್ತು ನಗದು ಕಳ್ಳತನ ಮಾಡಲಾಗಿದೆ. ಶಿವಮೊಗ್ಗದಲ್ಲಿ ಕೆಎಸ್‌ಆರ್‌ಟಿಸಿ  ಬಸ್ಸಿನಲ್ಲಿ ಟಿಕೆಟ್ ಮಾಡಿಸಲು ವ್ಯಾನಿಟಿ ಬ್ಯಾಗ್ ತೆಗೆದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.

KSRTC-Bus-General-Image-Shimoga-Bangalore

ಏನಿದು ಪ್ರಕರಣ?

ಉಡುಪಿಯಲ್ಲಿ ಮನೆ ದೇವರ ಪೂಜೆ ಮುಗಿಸಿ ಪದ್ಮಾವತಿ ರಾವ್ ಎಂಬುವವರು ಖಾಸಗಿ ಬಸ್ಸಿನಲ್ಲಿ ಶಿವಮೊಗ್ಗಕ್ಕೆ ಬಂದಿದ್ದರು. ಇಲ್ಲಿಂದ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ತಮ್ಮೂರು ಹಾವೇರಿ ಜಿಲ್ಲೆ ಹಿರೇಕೆರೂರಿನ ಹಂಸಬಾವಿಗೆ ಹೊರಟಿದ್ದರು. ಬಸ್ಸಿನಲ್ಲಿ ಟಿಕೆಟ್ ಮಾಡಿಸಲು ತಮ್ಮ ವ್ಯಾನಿಟಿ ಬ್ಯಾಗ್ (Vanity Bag) ತೆಗೆದಾಗ ಕಳ್ಳತನವಾಗಿದೆ ಎಂಬುದು ಅವರ ಅರಿವಿಗೆ ಬಂದಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ನಡುರಾತ್ರಿ ಚೆಕ್‌ಪೋಸ್ಟ್‌ ಬಳಿ ಕಾರು ಬಿಟ್ಟು ಇಬ್ಬರು ಎಸ್ಕೇಪ್, ಡೋರ್ ತೆಗೆದ ಪೊಲೀಸರಿಗೆ ಶಾಕ್

ವ್ಯಾನಿಟಿ ಬ್ಯಾಗಿನಲ್ಲಿ 15 ಸಾವಿರ ರೂ. ನಗದು, 33 ಗ್ರಾಂ ತೂಕದ ಬಂಗಾರದ ಅವಲಕ್ಕಿ ಸರ ಕಳ್ಳತನವಾಗಿತ್ತು. ಸರದ ಅಂದಾಜು ಮೌಲ್ಯ 1.32 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಎಲ್ಲೆಡೆ ಹುಡುಕಾಡಿದ ಪದ್ಮಾವತಿ ರಾವ್ ಅವರು ಬಳಿಕ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Creative Gifts ripponpete Shimoga

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment