‘ಈ ಕೆಲಸ ಮಾಡದಿದ್ದರೆ ಯಡಿಯೂರಪ್ಪ ಅವರನ್ನು ಶಿಕಾರಿಪುರದ ಹುಚ್ಚರಾಯ ಸ್ವಾಮಿ ಕ್ಷಮಿಸುವುದಿಲ್ಲ’

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 24 NOVEMBER 2022

SHIMOGA | ಶರಾವತಿ ಮುಳುಗಡೆ ಸಂತ್ರಸ್ಥರ ಸಮಸ್ಯೆ ಬಗೆಹರಿಸದಿದ್ದರೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಶಿಕಾರಿಪುರದ ಶ್ರೀ ಹುಚ್ಚುರಾಯಸ್ವಾಮಿ ದೇವರು ಕ್ಷಮಿಸುವುದಿಲ್ಲ ಎಂದು ಮಲೆನಾಡು ರೈತ ಹೋರಾಟ ಸಮಿತಿಯ ಸಂಚಾಲಕ ತೀ.ನ.ಶ್ರೀನಿವಾಸ್ ಹೇಳಿದರು. (hucharaya swamy temple)

Atiyas Motors Shimoga

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ತೀ.ನ.ಶ್ರೀನಿವಾಸ್ ಅವರು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಾಗುವಳಿದಾರರ ಬಗ್ಗೆ ಅಪಾರ ಪ್ರೇಮ ಇಟ್ಟುಕೊಂಡವರು. ಬಗರ್ ಹುಕುಂ ಚಾಂಪಿಯನ್ ಎಂದು ಘೋಷಿಸಿಕೊಂಡವರು. ಅರಣ್ಯ ಭೂಮಿ ಸಾಗುವಳಿದಾರರ ಪರ ಪಾದಯಾತ್ರೆ ಮಾಡಿದವರು. ಈಗ ಶರಾವತಿ ಸಂತ್ರಸ್ತರ ಸಮಸ್ಯೆ ಬಗೆಹರಿಸದಿದ್ದರೆ ಶಿಕಾರಿಪುರದ ಶ್ರೀ ಹುಚ್ಚರಾಯಸ್ವಾಮಿ ಅವರನ್ನ ಕ್ಷಮಿಸುವುದಿಲ್ಲ ಎಂದು ಹೇಳಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿವಮೊಗ್ಗ ಜಿಲ್ಲೆಗೆ ಬಂದಾಗ ಸಂತ್ರಸ್ತರು ಹಾಗೂ ಜಿಲ್ಲೆಯ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿ ಹೋಗಿದ್ದರು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೂಡ 15-20 ದಿನಗಳಲ್ಲಿ ಸಂತ್ರಸ್ತರ ಸಮಸ್ಯೆ ಬಗೆಹರಿಸುವುದಾಗಿ ಮಾತು ಕೊಟ್ಟಿದ್ದಾರೆ. ಮಾತು ಕೊಟ್ಟು ಒಂದು ವಾರವಾದರೂ ಮುಖ್ಯಮಂತ್ರಿ ಅವರು ಯಾವುದೆ ಭರವಸೆ ನೀಡಿಲ್ಲ. ಮುಖ್ಯಮಂತ್ರಿಗಳಿಗೂ ಕೂಡ ಆ ಬಗ್ಗೆ ಮನಸ್ಸಿಲ್ಲ. ಜೊತೆಗೆ ಬಿಜೆಪಿ ಶಾಸಕರುಗಳಿಗು ಆಸಕ್ತಿ ಇಲ್ಲ. ಸಂಸದರು ಸುಮ್ಮನಿದ್ದಾರೆ. ಇಡೀ ಸರ್ಕಾರವೇ ಬೇಜವಾಬ್ದಾರಿಯಿಂದ ವರ್ತಿಸುತ್ತಿದೆ ಎಂದು ದೂರಿದರು

(hucharaya swamy temple)

15 ದಿನದಲ್ಲಿ ಪರಿಹಾರ ಕೊಡಿಸಬೇಕು

ಕಾಗೋಡು ತಿಮ್ಮಪ್ಪ ಅವರು ಸಾವಿರ ಜನರಿಗೆ ಹಕ್ಕುಪತ್ರ ನೀಡಿದ್ದರು. ಆದರೆ ಬಿಜೆಪಿ ಸರ್ಕಾರ ಯಾವುದೋ ಒಂದೆರಡು ಕೇಸುಗಳಲ್ಲಿ ನ್ಯಾಯಾಲಯದ ತೀರ್ಪು ಬಂದಿರುವುದನ್ನೇ ಗಮನದಲ್ಲಿಟ್ಟುಕೊಂಡು ಎಲ್ಲಾ ಸಂತ್ರಸ್ತರಿಗೂ ಅನ್ವಯಿಸುವಂತೆ  ಸುತ್ತೋಲೆ ಹೊರಡಿಸಿದೆ. ಈ ಸುತ್ತೋಲೆಯಿಂದ  ಹಕ್ಕುಪತ್ರ ಪಡೆದಿರುವವರು ಕೂಡ ಸಂಕಟ ಅನುಭವಿಸುತ್ತಿದ್ದಾರೆ. ಕೇಂದ್ರದ ಗಮನ ಸೆಳೆಯುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಮುಖ್ಯಮಂತ್ರಿ, ಸಚಿವರುಗಳು ಮಾತಿಗೆ ಬದ್ಧರಾಗಿ ಇನ್ನು 15 ದಿನದಲ್ಲಿ ಸಂತ್ರಸ್ತರ ಸಮಸ್ಯೆ ಬಗೆಹರಿಸಿ ಅವರಿಗೆ ಹಕ್ಕುಪತ್ರ ನೀಡಬೇಕು ಎಂದರು.

(hucharaya swamy temple)

14 ತಿಂಗಳ ಹಿಂದಿನ ಸಭೆಯ ನಿರ್ಣಯವೇನು?

14 ತಿಂಗಳ ಹಿಂದೆ ಮುಖ್ಯಮಂತ್ರಿಗಳು ಸಂತ್ರಸ್ತರ ಕುರಿತ ಸಭೆಯನ್ನು ವಿಧಾನಸೌಧದಲ್ಲಿಯೇ ಆಯೋಜಿಸಿದ್ದರು. ಈ ಸಭೆಯಲ್ಲಿ ಸಚಿವ ಆರಗ ಜ್ಞಾನೇಂದ್ರ, ಶಾಸಕ ಹರತಾಳು ಹಾಲಪ್ಪ, ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವರಿದ್ದರು. ಜೊತೆಗೆ 150 ಸಂತ್ರಸ್ತರನ್ನು ವಿಧಾನಸೌಧಕ್ಕೆ ಕರೆಸಿಕೊಂಡಿದ್ದರು. ಆದರೆ ಸಭೆಯಲ್ಲಿ ಏನು ನಿರ್ಣಯ ತೆಗೆದುಕೊಂಡರು ಎಂಬುದೇ ತಿಳಿಯಲಿಲ್ಲ ಎಂದು ವ್ಯಂಗ್ಯವಾಡಿದರು.

ಕ್ಲಿಕ್ ಮಾಡಿ ಇದನ್ನೂ ಓದಿ ಅಡಕೆ ಬೆಳೆಗಾರನ ಮನ ಗೆದ್ದರೆ ಎಂಎಲ್ಎ ಆಗುವುದು ಖಚಿತ, ಯಾಕೆ? ಇಲ್ಲಿದೆ 4 ಕಾರಣ

ಇತ್ತೀಚೆಗೆ ಆನವಟ್ಟಿಯಲ್ಲಿ ಬಿಜೆಪಿಯವರು ನಡೆಸಿರುವ ಜನಸ್ಪಂದನಾ ಸಭೆ ಬೋಗಸ್ ಕಾರ್ಯಕ್ರಮವಾಗಿದೆ. ಸಿಎಂ ನೇತೃತ್ವದ ತಂಡ ಶರಾವತಿ ಮುಳುಗಡೆ ಸಂತ್ರಸ್ಥರ ಸಮಸ್ಯೆ ಆಲಿಸಲು ಶಿವಮೊಗ್ಗಕ್ಕೆ ಬರುತ್ತಿಲ್ಲ. ಬದಲು ಚುನಾವಣಾ ಸಮಾಲೋಚನೆ ಮಾಡಲು ಬರುತ್ತಿದ್ದಾರೆ ಎಂದು ದೂರಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಧರ್ಮೇಂದ್ರ ಶಿರುವಾಳ, ಶ್ರೀಧರ್ ನಾಡಗೋಡು ಮುಂತಾದವರಿದ್ದರು.

Shimoga Nanjappa Hospital

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment