
ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಜುಲೈ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಶಿವಮೊಗ್ಗದಲ್ಲಿ ಇವತ್ತು ಲಾಕ್ ಡೌನ್ಗೆ ಜನ ಡೋಂಟ್ ಕೇರ್. ಕರೋನ ಸೋಂಕು ವ್ಯಾಪಕವಾಗಿ ಹರಡುತ್ತಿದ್ದರೂ ಜನ ಮತ್ತು ವಾಹನ ಸಂಚಾರ ತಗ್ಗಿಲ್ಲ.
ಮೂರನೇ ಸಂಡೆ ಕರ್ಫ್ಯೂ ಮತ್ತು ಶಿವಮೊಗ್ಗ ಜಿಲ್ಲೆಯಲ್ಲೂ ನಿರ್ಬಂಧವಿದೆ. ಹೀಗಿದ್ದೂ ಇವತ್ತು ಜನ ಸಂಚಾರ ಹೇರಳವಾಗಿತ್ತು. ನಗರದ ಪ್ರಮುಖರ ರಸ್ತೆಗಳಲ್ಲಿ ವಾಹನ ಸಂಚಾರ ಎಂದಿನಂತೆ ಇತ್ತು.

ಪೊಲೀಸರಿಗೂ ಡೋಂಟ್ ಕೇರ್
ಒಂದೆಡೆ ಕರೋನ ಆತಂಕವಿಲ್ಲ. ಮತ್ತೊಂದೆಡೆ ಪೊಲೀಸರ ಭಯವು ಇಲ್ಲ. ನಗರದ ವಿವಿಧೆಡೆ ಪೊಲೀಸರು ಬ್ಯಾರಿಕೇಡ್ ಹಾಕಿದ್ದಾರೆ. ಅನಗತ್ಯವಾಗಿ ಓಡಾಡುವುದು ಮತ್ತು ಗುಂಪು ಸೇರದಂತೆ ಪೊಲೀಸರು ಮೈಕ್ ಮೂಲಕ ಅನೌನ್ಸ್ ಮಾಡುತ್ತಿದ್ದಾರೆ. ಆದರೂ ಜನರು ಡೋಂಟ್ ಕೇರ್ ಎಂದು ಓಡಾಡುತ್ತಿದ್ದಾರೆ.

ಅಗತ್ಯ ವಸ್ತುಗಳ ಖರೀದಿ ಜೋರು
ಹೊರಗೆ ಓಡಾಡುತ್ತಿರುವ ಪ್ರತಿಯೊಬ್ಬರೂ ಅಗತ್ಯ ವಸ್ತುಗಳ ಖರೀದಿಯ ನೆಪ ಹೇಳುತ್ತಿದ್ದಾರೆ. ಮೀನು, ಮಾಂಸ ಖರೀದಿ ಭರಾಟೆಯು ಜೋರಿದೆ. ಅಂಗಡಿಗಳ ಮುಂದೆ ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ಪೊಲೀಸರು ಮತ್ತು ಅಂಗಡಿ ಮಾಲೀಕರು ಮನವಿ ಮಾಡುತ್ತಿದ್ದಾರೆ.
ನಗರದ ಎಲ್ಲಾ ಪ್ರಮುಖ ರಸ್ತೆಗಳಲ್ಲೂ ವಾಹನ ದಟ್ಟಣೆ ಹೆಚ್ಚಿದೆ. ಕೆಲವು ಕಡೆ ಟ್ರಾಫಿಕ್ ಜಾಮ್ ಕೂಡ ಆದ ಮಾಹಿತಿ ಇದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

- MRPಗಿಂತಲು ಹೆಚ್ಚು ವಸೂಲಿ, ಫ್ಲಿಪ್ಕಾರ್ಟ್ ಸಂಸ್ಥೆಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ

- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

About The Editor
ನಿತಿನ್ ಆರ್.ಕೈದೊಟ್ಲು






