ಗುಮಾಸ್ತರ ಹುದ್ದೆಗೆ ಇಂಜಿನಿಯರ್’ಗಳಿಂದ ಅಪ್ಲಿಕೇಷನ್, ಶಿವಮೊಗ್ಗ ಡಿಸಿಸಿ ಬ್ಯಾಂಕ್’ನ 80 ಹುದ್ದೆಗಳಿಗೆ ಬಂದಿರುವ ಅರ್ಜಿಗಳೆಷ್ಟು ಗೊತ್ತಾ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

ಶಿವಮೊಗ್ಗ ಲೈವ್.ಕಾಂ | SHIMOGA | 2 ಅಕ್ಟೋಬರ್ 2019

ಗುಮಾಸ್ತನ ಹುದ್ದೆಗೆ ಎಂಜಿನಿಯರ್’ಗಳಿಂದ ಅಪ್ಲಿಕೇಷನ್. ಬೆರಳೆಣಿಕೆಯಷ್ಟು ಹುದ್ದೆಗಳಿಗೆ ಬಂದಿವೆ 5 ಸಾವಿರ ಅರ್ಜಿಗಳು.

70578780 2398489037062520 5710410120999993344 n.jpg? nc cat=106& nc oc=AQlcQaWnXOtOAJW K4IN7psaayK 6T8A7hhEXxzoF3imelWmbIpxD0gNqxxlmrhSWeIBTdyPLABJyJ1 YhLM7Tc5& nc ht=scontent.fblr1 3

ಶಿವಮೊಗ್ಗ ಜಿಲ್ಲಾ ಸಹಕಾರ ಬ್ಯಾಂಕ್’ನಲ್ಲಿ (ಡಿಸಿಸಿ) ಖಾಲಿ ಇದ್ದ 53 ದ್ವಿತೀಯ ದರ್ಜೆ ಸಹಾಯಕರು, 22 ಜವಾನರು, 5 ಚಾಲಕರ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿತ್ತು. ಈ ಪೈಕಿ ಎಸ್’ಡಿಸಿ ಕೇಡರ್’ನ ಗುಮಾಸ್ತ, ನಗದು ಗುಮಾಸ್ತ ಮತ್ತು ಕ್ಷೇತ್ರಾಧಿಕಾರಿ ಹುದ್ದೆಗಳಿಗೆ ಇಂಜಿನಿಯರಿಂಗ್, ಎಂಬಿಎ, ಎಂಎಸ್ಸಿ, ಎಂಕಾಂ, ಎಂಎ ಪದವೀಧರರು ಅರ್ಜಿ ಹಾಕಿದ್ದಾರೆ.

ಬೆರಳೆಣಿಕೆಯಷ್ಟು ಹುದ್ದೆಗಳು, ಸಾವಿರಾರು ಅರ್ಜಿಗಳು

ಡಿಸಿಸಿ ಬ್ಯಾಂಕ್’ನಲ್ಲಿ 80 ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿದೆ. ಇದಕ್ಕೆ 5 ಸಾವಿರ ಅರ್ಜಿಗಳು ಬಂದಿವೆ. ಈ ಪೈಕಿ ಸುಮಾರು 2 ಸಾವಿರ ಅಭ್ಯರ್ಥಿಗಳು ತಾಂತ್ರಿಕ ಶಿಕ್ಷಣ ಮತ್ತು ಸ್ನಾತಕೋತ್ತರ ಪದವಿ ಪಡೆದವರಾಗಿದ್ದಾರೆ. ಬಹುತೇಕರು ಸ್ನಾತಕೋತ್ತರ ಪದವಿ ಜೊತೆಗೆ ಬಿ.ಎಡ್ ಪದವಿಯನ್ನು ಪಡೆದುಕೊಂಡಿದ್ದಾರೆ.

ಉದ್ಯೋಗ ಭದ್ರತೆಗಾಗಿ ಬರುತ್ತಿದ್ದಾರೆ

ಎಸ್ಸೆಸ್ಸೆಲ್ಸಿ ಮತ್ತು ಪದವಿ ಉತ್ತೀರ್ಣರಾದವರಿಗೆ ಅರ್ಜಿ ಅಹ್ವಾನಿಸಿದ್ದರು, ಸ್ನಾತಕೋತ್ತರ ಪದವೀಧರರು ಅರ್ಜಿ ಸಲ್ಲಿಸಿದ್ದಾರೆ. ಇವರಲ್ಲಿ ಬಹುತೇಕರು ಉದ್ಯೋಗ ಭದ್ರತೆಗಾಗಿ ಅರ್ಜಿ ಸಲ್ಲಿಸಿರುವ ಸಾಧ್ಯತೆ ಇದೆ ಅನ್ನುತ್ತಾರೆ ಅಧಿಕಾರಿಗಳು. ಕೆಲವು ಸಂದರ್ಭ ಇಲ್ಲಿ ಉದ್ಯೋಗ ಮಾಡಿ, ತಮ್ಮ ವಿದ್ಯಭ್ಯಾಸಕ್ಕೆ ಅನುಗುಣವಾದ ಉದ್ಯೋಗ ಸಿಕ್ಕರೆ ಈ ಕೆಲಸ ತೊರೆಯುವ ಸಾಧ್ಯತೆಯೆ ಇದೆಯಂತೆ.

https://www.facebook.com/ckdcinternational/videos/2433592173582988/?t=1

ಖಾಸಗಿ ಕ್ಷೇತ್ರದಲ್ಲಿ ಉದ್ಯೋಗದ ಅನಿಶ್ಚಿತತೆ ಮತ್ತು ಉದ್ಯೋಗ ಕಡಿತದ ಪರಿಣಾಮದಿಂದಲು ಹಲವರು ಗುಮಾಸ್ತ ಹುದ್ದೆಗು ಅರ್ಜಿ ಸಲ್ಲಿಸರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಆದರೆ ಗುಮಾಸ್ತ ಹುದ್ದೆಗೆ ಎಂಜಿನಿಯರಿಂಗ್ ಮತ್ತು ಸ್ನಾತಕೋತ್ತರ ಪದವೀಧರರು ಅರ್ಜಿ ಸಲ್ಲಿಸಿರುವುದು ಕುತೂಹಲ ಮೂಡಿಸಿದೆ. ಉದ್ಯೋಗ ಲಭ್ಯತೆ ಪ್ರಮಾಣ ಕುಸಿತವು ಇದಕ್ಕೆ ಕಾರಣವಾಗಿರುವ ಸಾಧ್ಯತೆ ಇದೆ.

Prashanth GPS copy

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200

ಸುದ್ದಿಗಾಗಿ ಕರೆ ಮಾಡಿ – 9964634494

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 2, 2019

ಊರಗಡೂರಿನ ಸಂಕೇತ್‌ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

ಊರಗಡೂರಿನ ಸಂಕೇತ್‌ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಭದ್ರಾವತಿಯ ಭದ್ರಾ ನದಿಗೆ ರಾಶಿ ರಾಶಿ ತ್ಯಾಜ್ಯ, ವೈಜ್ಞಾನಿಕ ಕ್ರಮಕ್ಕೆ ಒತ್ತಾಯ

ಭದ್ರಾವತಿಯ ಭದ್ರಾ ನದಿಗೆ ರಾಶಿ ರಾಶಿ ತ್ಯಾಜ್ಯ, ವೈಜ್ಞಾನಿಕ ಕ್ರಮಕ್ಕೆ ಒತ್ತಾಯ

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಶಿವಮೊಗ್ಗ ಜಿಲ್ಲೆಯ ಮನೆ ಮನೆಗೂ ಭೇಟಿ ನೀಡ್ತಾರೆ ಗಣತಿದಾರರು, ಏನೇನು ಮಾಹಿತಿ ಕೊಡಬೇಕು?

ಶಿವಮೊಗ್ಗ ಜಿಲ್ಲೆಯ ಮನೆ ಮನೆಗೂ ಭೇಟಿ ನೀಡ್ತಾರೆ ಗಣತಿದಾರರು, ಏನೇನು ಮಾಹಿತಿ ಕೊಡಬೇಕು?

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

Leave a Comment