ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA NEWS, 23 SEPTEMBER 2024 : ಅರ್ಹರಲ್ಲದೆ ಇದ್ದರು ಪಡಿತರ ಚೀಟಿ (Ration Card) ಹೊಂದಿದ್ದವರ ಕಾರ್ಡುಗಳನ್ನು ರದ್ದುಗೊಳಿಸಲಾಗಿದೆ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಬಿ.ಕಾವೇರಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಆಹಾರ ಇಲಾಖೆ ಅಧಿಕಾರಿಗಳು ಈ ಕುರಿತು ಮಾಹಿತಿ ನೀಡಿದರು.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಆಹಾರ ಇಲಾಖೆ ಉಪನಿರ್ದೇಶಕ ಅವಿನ್, ಕಾರ್ಡ್ ರದ್ಧತಿ ಕುರಿತು ಮಾಹಿತಿ ತಿಳಿಸಿದರು.
ಆಹಾರ ಇಲಾಖೆ ಅಧಿಕಾರಿ ಹೇಳಿದ್ದೇನು?
ಆರು ತಿಂಗಳು ಸತತವಾಗಿ ಪಡಿತರ ಪಡೆಯದ 8 ಸಾವಿರ ಕಾರ್ಡ್‌ಗಳನ್ನು ರದ್ದು ಮಾಡಲಾಗಿದೆ. ಇ-ಜನ್ಮ ಪೋರ್ಟಲ್ ಮಾಹಿತಿ ಆಧಾರದಲ್ಲಿ ಮರಣ ಹೊಂದಿದ 5 ಸಾವಿರ ಕಾರ್ಡುದಾರರ ಹೆಸರನ್ನು ತೆಗೆಯಲಾಗಿದೆ. 58 ಸರಕಾರಿ ನೌಕರರ ಬಿಪಿಎಲ್ ಕಾರ್ಡ್ ರದ್ದು ಮಾಡಿ, ದಂಡ ವಿಧಿಸಲಾಗಿದೆ. ಕುಟುಂಬದ ವಾರ್ಷಿಕ ವರಮಾನ 1.20 ಲಕ್ಷ ರೂ. ಮೀರಿರುವ 2,400 ಕಾರ್ಡ್‌ಗಳ ರದ್ದತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಅದ್ಧೂರಿ ಈದ್ ಮೆರವಣಿಗೆ, ಹೇಗಿತ್ತು? ಏನೇನಿತ್ತು?