ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 24 FEBRUARY 2024
SHIMOGA : ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಜಿಲ್ಲಾಮಟ್ಟದ ಸಮಾವೇಶದಲ್ಲಿ ಇವತ್ತು ಮಹಿಳೆಯರು ದೊಡ್ಡ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಹಾಡುಗಳಿಗೆ ಹೆಜ್ಜೆ ಹಾಕಿದರು. ಘೋಷಣೆಗಳನ್ನು ಕೂಗಿದರು.
ದೊಡ್ಡ ಸಂಖ್ಯೆಯಲ್ಲಿ ಸೇರಿದ್ದ ಮಹಿಳೆಯರು
ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶದಲ್ಲಿ ಜಿಲ್ಲೆಯ ವಿವಿಧೆಡೆಯ ದೊಡ್ಡ ಸಂಖ್ಯೆಯ ಮಹಿಳೆಯರು ಭಾಗವಹಿಸಿದ್ದರು. ಕಾರ್ಯಕ್ರಮದ ಪೆಂಡಾಲ್ನಲ್ಲಿ ಹಾಕಲಾಗಿದ್ದ ಚೇರುಗಳು ಭರ್ತಿಯಾಗಿ, ಕ್ರೀಡಾಂಗಣದ ಆವರಣದಲ್ಲಿ ಮಹಿಳೆಯರು ನಿಂತು ಕಾರ್ಯಕ್ರಮ ವೀಕ್ಷಿಸಿದರು.

ಡಾ.ರಾಜ್, ಅಪ್ಪು ಹಾಡಿಗೆ ಮಹಿಳೆಯರ ಡಾನ್ಸ್
ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಆರಂಭಕ್ಕು ಮುನ್ನ ಗಾಯಕರು ವಿವಿಧ ಚಿತ್ರಗೀತೆ ಹಾಡಿದರು. ಈ ವೇಳೆ ಡಾ. ರಾಜ್ ಕುಮಾರ್ ಮತ್ತು ಪುನೀತ್ ರಾಜ್ಕುಮಾರ್ ಅವರ ಹಾಡುಗಳಿಗೆ ಮಹಿಳೆಯರು, ಯುವತಿಯರು ನರ್ತಿಸಿದರು. ಪುನೀತ್ ಅವರನ್ನು ಸ್ಮರಿಸಲು ಮೊಬೈಲ್ ಟಾರ್ಚ್ ಆನ್ ಮಾಡಿ ಪ್ರದರ್ಶಿಸಿದರು.

ಗ್ಯಾರಂಟಿ ಯೋಜನೆಗೆ ಸ್ಥಳದಲ್ಲೆ ನೋಂದಣಿ
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳ ನೋಂದಣಿಗೆ ಸಮಾವೇಶದ ಸ್ಥಳದಲ್ಲಿ ಕೌಂಟರ್ ಸ್ಥಾಪಿಸಲಾಗಿತ್ತು. ಫಲಾನುಭವಿಗಳು ಆಯಾ ಯೋಜನೆಯ ಕೌಂಟರ್ಗೆ ತೆರಳಿ ಮಾಹಿತಿ ಪಡೆದರು. ಕೆಲವರು ತಮ್ಮ ಹೆಸರು ನೋಂದಣಿ ಮಾಡಿಸಿದರು. ಶನಿವಾರ ಸಂಜೆವರೆಗು ನೋಂದಣಿ ಪ್ರಕ್ರಿಯೆ ನಡೆಯಿತು.



ಇದನ್ನೂ ಓದಿ – ಶಿವಮೊಗ್ಗಕ್ಕೆ ಹತ್ತು ಅಶ್ವಮೇಧ ಬಸ್, ಟೇಪ್ ಕತ್ತರಿಸಿದರು ಡಿಸಿಎಂ
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






