BREAKING NEWS | ಕಲ್ಲು ಹೊಡೆದು, ಅವಾಚ್ಯವಾಗಿ ಕೂಗುತ್ತ ಹೋದ ಮೂವರು ಅರೆಸ್ಟ್, ಯಾರದು, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಕಳೆದ ರಾತ್ರಿ ಭರ್ಮಪ್ಪ ನಗರದಲ್ಲಿ ಯುವಕನ ತಲೆಗೆ ಕಲ್ಲು ಹೊಡೆದು, ಅವಾಚ್ಯ ಶಬ್ದಗಳನ್ನು ಕೂಗುತ್ತ ಬೈಕಿನಲ್ಲಿ ಸಾಗಿದ ಮೂವರನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ಇಬ್ಬರು ತಲೆ ಮರೆಸಿಕೊಂಡಿದ್ದು ಅವರ ಪತ್ತೆ ಕಾರ್ಯ ನಡೆಯುತ್ತಿದೆ. (THREE ARREST)

Shimoga Nanjappa Hospital

ಮಾರ್ಕೆಟ್ ಫೌಜಾನ್, ಅಜರ್ ಅಲಿಯಾಸ್ ಅಜ್ಜು, ಫರಾಜ್ ಪೊಲೀಸ್ ಬಂಧಿತರು. ಘಟನೆ ಬೆನ್ನಿಗೆ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. (THREE ARREST)

(THREE ARREST)

ಪ್ರಕಾಶ್ ತಲೆಗೆ ಕಲ್ಲು ಹೊಡೆದಿದ್ದೇಕೆ?

ಭರ್ಮಪ್ಪ ನಗರದ ಪ್ರಕಾಶ್ (25) ತಲೆಗೆ ಕಲ್ಲು ಹೊಡೆದು ಈ ಮೂವರು ಆರೋಪಿಗಳು ಪರಾರಿಯಾಗಿದ್ದರು. ಪ್ರಕಾಶ್ ನನ್ನು ಕೂಡಲೆ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಈ ಮಧ್ಯೆ, ಘಟನೆಯಿಂದಾಗಿ ಸೀಗೆಹಟ್ಟಿಯಲ್ಲಿ ಕೆಲ ಹೊತ್ತು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಈಗ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಹಲ್ಲೆಗೆ ಕಾರಣ ಬಾಯಿ ಬಿಟ್ಟಿದ್ದಾರೆ.

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗದ ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಚೆಕ್ ಪೋಸ್ಟ್, ಹೇಗಿದೆ ಬಂದೋಬಸ್ತ್? ಎಸ್.ಪಿ. ಹೇಳಿದ್ದೇನು?

ಮಾರ್ಕೆಟ್ ಫೌಜಾನ್, ಅಜರ್ ಅಲಿಯಾಸ್ ಅಜ್ಜು, ಫರಾಜ್ ಹಾಗೂ ಇನ್ನಿಬ್ಬರು ಎರಡು ಬೈಕುಗಳಲ್ಲಿ ಕಳೆದ ರಾತ್ರಿ 11 ಗಂಟೆಗೆ ಸೀಗೆಹಟ್ಟಿಗೆ ತೆರಳಿದ್ದರು. ಪ್ರವೀಣ್ ಅಲಿಯಾಸ್ ಕುಲ್ಡಾ ಪ್ರವೀಣ್ ಎಂಬಾತನ ವಿರುದ್ಧ ಅವಾಚ್ಯ ಶಬ್ದಗಳನ್ನು ಕೂಗಿ ಸ್ಥಳದಿಂದ ಪರಾರಿಯಾಗಿದ್ದಾರೆ. ಇಬ್ಬರು ಕ್ಲಾರ್ಕ್ ಪೇಟೆಯಲ್ಲಿ ಬಿಟ್ಟು ಮಾರ್ಕೆಟ್ ಫೌಜಾನ್, ಅಜರ್, ಫರಾಜ್ ಕೂಡಲೆ ಭರ್ಮಪ್ಪ ನಗರಕ್ಕೆ ಬಂದಿದ್ದಾರೆ. ಪ್ರಕಾಶ್ ವಿರುದ್ಧ ಜೋರಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಆತ ಎದುರಿಗೆ ಸಿಗುತ್ತಿದ್ದಂತೆ ಕಲ್ಲಿನಿಂದ ಹೊಡೆದಿದ್ದಾರೆ.

ಪ್ರಕಾಶ್, ಪ್ರವೀಣ್ ವಿರುದ್ಧ ಸಿಟ್ಟೇಕೆ?

ಕೆಲವು ದಿನದ ಹಿಂದೆ ಪ್ರಕಾಶ್ ಮತ್ತು ಪ್ರವೀಣ್, ಮಾರ್ಕೆಟ್ ಫೌಜಾನ್ ಗೆ ನಿಂದಿಸಿದ್ದರು. ಇದೆ ಕಾರಣಕ್ಕೆ ಇಬ್ಬರಿಗು ಎಚ್ಚರಿಕೆ ನೀಡುವ ಉದ್ದೇಶದಿಂದ ಆರೋಪಿಗಳು ತೆರಳಿದ್ದರು. ಈ ವೇಳೆ ಘಟನೆ ಸಂಭವಿಸಿದೆ ಎಂದು ವಿಚಾರಣೆ ವೇಳೆ ಬಾಯಿ ಬಿಟ್ಟಿರುವುದಾಗಿ ಪೊಲೀಸ್ ಇಲಾಖೆ ತಿಳಿಸಿದೆ.

ಘಟನೆ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

jnnce college shimoga

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment