ಶಿವಮೊಗ್ಗ : ಅಭಿವೃದ್ಧಿಯ ದಾರಿಯಲ್ಲಿ ಜ್ಞಾನದ ಬಗೆಗಿನ ಪ್ರಶ್ನೆ ಗಳನ್ನು ಮುಕ್ತವಾಗಿ ಚರ್ಚಿಸಲು ಫೆ.20ರಿಂದ ಮೂರು ದಿನ ಕುವೆಂಪು ವಿಶ್ವವಿದ್ಯಾಲಯದ ಬಸವ ಸಭಾ ಭವನದಲ್ಲಿ ‘ಸಮಾಜದಲ್ಲಿ ಜ್ಞಾನ’ ಸಮಾವೇಶ (conference) ಹಮ್ಮಿಕೊಳ್ಳಲಾಗಿದೆ ಎಂದು ವಿವಿ ಕುಲಪತಿ ಪ್ರೊ .ಶರತ್ ಅನಂತಮೂರ್ತಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಿ ಜರ್ನಲ್ಸ್ ಆಫ್ ಡೈಲಾಗ್ಸ್ ಆನ್ ನಾಲೆಜ್ ಇನ್ ಸೊಸೈಟಿ ಸಹಯೋಗದಲ್ಲಿ ಸಮಾವೇಶ ಆಯೋಜಿಸಲಾಗಿದೆ. ರಾಜ್ಯದ ವಿಶ್ವವಿದ್ಯಾಲಯಗಳ ಮಟ್ಟದಲ್ಲಿ ನಡೆಯುತ್ತಿರುವ ಈ ಮಾದರಿಯ ಮೊದಲ ಸಮಾವೇಶವಾಗಿದೆ ಎಂದರು.
ವಿವಿಧ ಕ್ಷೇತ್ರಗಳ ಬಗ್ಗೆ ಸಂಪನ್ಮೂಲ ವ್ಯಕ್ತಿಗಳು ಮುಕ್ತವಾಗಿ ಚರ್ಚಿಸಲಿದ್ದಾರೆ. ತಂತ್ರಜ್ಞಾನ ದೇಶಕ್ಕೆ ಬರುವ ಮೊದಲು ಹಲವು ಜ್ಞಾನದ ಶಾಖೆಗಳಿದ್ದವು. ಆದರೆ, ಅವುಗಳನ್ನು ಇಂದು ಸೀಮಿತ ಮಾಡಲಾಗುತ್ತಿದೆ. ಸಮಾಜದ ಹಲವು ವಿಷಯಗಳನ್ನು ಪೂರ್ವಾಗ್ರಹ ಪೀಡಿತವಾಗಿ ಮಾತನಾಡುತ್ತಿದ್ದೇವೆಯೇ ಹೊರತು ಸತ್ಯದ ಬಗ್ಗೆ ಮಾತನಾಡುತ್ತಿಲ್ಲ. ಈ ವಿಷಯಗಳ ಬಗ್ಗೆ ಸಮಾನವಾಗಿ ಮಾತನಾಡುವವರ ನಡುವೆ ಸಂವಾದ ನಡೆಯಲಿದೆ
ಪ್ರೊ. ಶರತ್ ಅನಂತಮೂರ್ತಿ, ಕುವೆಂಪು ವಿವಿ ಕುಲಪತಿ
ಫೆ.20ರಂದು ಬೆಳಿಗ್ಗೆ 10ಕ್ಕೆ ಸಾಂಸ್ಕೃತಿಕ ಚಿಂತಕ ಪ್ರೊ.ಜಿ.ಎನ್.ದೇವಿ ಸಮಾವೇಶ ಉದ್ಘಾಟಿಸಲಿದ್ದಾರೆ. ವಾರಣಾಸಿ ವಿದ್ಯಾಶ್ರಮದ ಸುನಿಲ್ ಸಹಸ್ರಬುದ್ಧೆ ಆಶಯ ಭಾಷಣ ಮಾಡಲಿದ್ದಾರೆ.
ಪ್ರೊ. ರಾಮಪ್ರಸಾದ್, ಸಮಾವೇಶ ಸಂಯೋಜಕ
65 ವಿದ್ವಾಂಸರು, ವಿವಿಧ ರಾಜ್ಯಗಳ ಪ್ರೊಫೆಸರ್‌ಗಳು, ಕಲಾವಿದರು, ತತ್ವಜ್ಞಾನಿಗಳು ಸಮಾವೇಶದಲ್ಲಿ ಸಂವಾದ ನಡೆಸಲಿದ್ದಾರೆ. ಮೂರು ದಿನ ಒಟ್ಟು ಎಂಟು ಗೋಷ್ಠಿಗಳು ನಡೆಯಲಿವೆ. ಒಂದೇ ವಿಷಯದ ಬಗ್ಗೆ ವಿವಿಧ ಕ್ಷೇತ್ರಗಳ ತಜ್ಞರು ವಿಚಾರ ವಿನಿಮಯ ಮಾಡಿಕೊಳ್ಳಲಿದ್ದಾರೆ. 120 ಜನ ಪ್ರತಿಕ್ರಿಯೆ ನೀಡಲಿದ್ದಾರೆ. ಇಲ್ಲಿ ಸಂಗ್ರಹವಾದ ಪ್ರಬಂಧಗಳನ್ನು ಪುಸ್ತಕ ರೂಪದಲ್ಲಿ ಪ್ರಕಟಿಸಲಾಗುತ್ತದೆ. ರೈತರು, ತಳ ಸಮುದಾಯ, ಆದಿವಾಸಿಗಳ ಬಗ್ಗೆ ಅಧ್ಯಯನ ಮಾಡಿದವರು ಮುಕ್ತ ವೇದಿಕೆಯಲ್ಲಿ ವಿಚಾರ ಮಂಡಿಸಲಿದ್ದಾರೆ.
ಪ್ರೊ. ಮೇಟಿ ಮಲ್ಲಿಕಾರ್ಜುನ್, ಸಮಾವೇಶದ ಸಂಯೋಜಕ
ಕುವೆಂಪು ವಿವಿ ಕುಲಪತಿ ಎಲ್.ಎಲ್.ಮಂಜುನಾಥ್, ಸಹ್ಯಾದ್ರಿ ವಾಣಿಜ್ಯ ಕಾಲೇಜು ಪ್ರಾಂಶುಪಾಲ ಟಿ.ಅವಿನಾಶ್, ಕುವೆಂಪು ವಿವಿ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ. ಎಂ.ಆರ್.ಸತ್ಯಪ್ರಕಾಶ್ ಸುದ್ದಿಗೋಷ್ಠಿಯಲ್ಲಿದ್ದರು.
ಇದನ್ನೂ ಓದಿ » ಬಂಗಾರಪ್ಪ ಹೆಸರಿನಲ್ಲಿ ಶಿವಮೊಗ್ಗದಲ್ಲಿ ಗ್ರಂಥಾಲಯ, 5 ಲಕ್ಷದ ಚೆಕ್ ನೀಡಿದ ಸಚಿವ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200