SHIVAMOGGA LIVE NEWS | 26 MARCH 2024
SHIMOGA : ವಿಶ್ವ ರಂಗಭೂಮಿ ದಿನಾಚರಣೆ ಅಂಗವಾಗಿ ಹವ್ಯಾಸಿ ರಂಗತಂಡಗಳ ಕಲಾವಿದರ ಸಂಘದ ವತಿಯಿಂದ ಮಾರ್ಚ್ 26 ರಿಂದ 28ರ ವರೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಶಿವಮೊಗ್ಗ ರಂಗಹಬ್ಬ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಕಾಂತೇಶ್ ಕದರಮಂಡಲಗಿ ಹೇಳಿದರು.
![]() |
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂತೇಶ್ ಕದರಮಂಡಲಗಿ, ಮೂರು ದಿನಗಳು ನಾಟಕೋತ್ಸವ ನಡೆಯಲಿದೆ. ಸಂಘದ ವತಿಯಿಂದ ಆಯೋಜಿಸುತ್ತಿರುವ 20ನೇ ನಾಟಕೋತ್ಸವ ಇದಾಗಿದೆ ಎಂದರು.
ಯಾವೆಲ್ಲ ನಾಟಕ ಪ್ರದರ್ಶನವಾಗಲಿದೆ?
ಮಾರ್ಚ್ 26 ರಂದು ಸಂಜೆ 6.45ಕ್ಕೆ ನಾ. ಶ್ರೀನಿವಾಸ್ ಅವರು ರಚಿಸಿರುವ ಗಾಂಧಿ ಕನ್ನಡಕ ನಾಟಕವನ್ನು ಲವ ಜಿ.ಆರ್. ನಿರ್ದೇಶನದಲ್ಲಿ ಸಹ್ಯಾದ್ರಿ ಕಲಾತಂಡವು ಪ್ರದರ್ಶಿಸಲಿದೆ.
ಮಾ. 27ರಂದು ಸಂಜೆ 6.45ಕ್ಕೆ ರಂಗಬೆಳಕು ತಂಡವು ಶಿವಕುಮಾರ್ ಮಾವಲಿ ಅವರ ಪ್ರೇಮಪತ್ರದ ಆಫೀಸು ಮತ್ತು ಇತರೆ ಕತೆಗಳು ಹಾಗೂ ಷೇಕ್ಸ್ ಪಿಯರ್ ಅವರ ಕೃತಿ ಆಧರಿಸಿದ ಒಲವಿನ ಜಂಕ್ಷನ್ ನಾಟಕವನ್ನು ಅಜಯ್ ನೀನಾಸಂ ಅವರ ನಿರ್ದೇಶನದಲ್ಲಿ ಅಭಿನಯಿಸಲಿದೆ.
ಮಾ. 28ರಂದು ಸಂಜೆ 6.45ಕ್ಕೆ ಹೊಂಗಿರಣ ತಂಡವು ಸಾಸ್ವೆಹಳ್ಳಿ ಸತೀಶ್ ಅವರ ನಿರ್ದೇಶನದಲ್ಲಿ ಮಹಿಳಾ ಭಾರತ ನಾಟಕ ಪ್ರದರ್ಶಿಸಲಿದೆ. ಈ ನಾಟಕ ಫ್ರೆಂಚ್ ಮೂಲ ಕೆ. ಮಾಧವನ್ ಅವರದ್ದಾಗಿದೆ. ಕನ್ನಡಕ್ಕೆ ಅಭಿಲಾಷಾ ಎಸ್. ಅನುವಾದಿಸಿದ್ದಾರೆ
ಒಂದು ನಾಟಕಕ್ಕೆ ಒಬ್ಬರಿಗೆ 50 ರೂ. ಪ್ರವೇಶ ಶುಲ್ಕ ನಿಗದಿಪಡಿಸಲಾಗಿದೆ. ರಂಗಗೀತೆಗಳ ಗಾಯನ ಕಾರ್ಯಕ್ರಮವೂ ಇರಲಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಹೊನ್ನಾಳಿ ಚಂದ್ರಶೇಖರ್, ಡಾ.ಸಾಸ್ವೆಹಳ್ಳಿ ಸತೀಶ್, ಎಸ್.ಹೆಚ್.ಸುರೇಶ್, ಡಾ. ಜಿ.ಆರ್.ಲವ ಇದ್ದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಫ್ಯಾಷನ್ ಶೋ | ಇಸ್ಕಾನ್‌ನಿಂದ ಬೇಸಿಗೆ ಶಿಬಿರ | ವಾಣಿಜ್ಯ ಮತ್ತು ಕೈಗಾರಿಕೆ ಸಂಘದ ಮಹಾಸಭೆಗೆ ದಿನಾಂಕ ಫಿಕ್ಸ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200