ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಜೂನ್ 2020
ಬೆಂಗಳೂರಿನ ಪಾದರಾಯನಪುರದಲ್ಲಿ ಬಂದೋಬಸ್ತ್ ಡ್ಯೂಟಿಗೆ ತೆರಳಿದ್ದ ಪೊಲೀಸರಿಂದ ಮತ್ತೆ ಮೂವರಿಗೆ ಕರೋನ ಸೋಂಕು ತಗುಲಿದೆ. ಇದು ಪೊಲೀಸ್ ವಲಯದಲ್ಲಿ ಮತ್ತಷ್ಟು ಆತಂಕ ಸೃಷ್ಟಿಸಿದೆ.

ಪ್ರಾಥಮಿಕ ಸಂಪರ್ಕಕ್ಕೆ ಸೋಂಕು
ಪಾದರಾಯನಪುರದಲ್ಲಿ ಡ್ಯೂಟಿ ಮಾಡಿ ಶಿವಮೊಗ್ಗಕ್ಕೆ ಹಿಂತಿರುಗಿದ್ದ ಪೊಲಿಸರ ಪ್ರಾಥಮಿಕ ಸಂಪರ್ಕದಲ್ಲಿ ಇದ್ದವರಿಗೆ ಕರೋನ ಸೋಂಕು ತಗುಲಿದೆ. ಪಿ5823 ಸಂಪರ್ಕದಲ್ಲಿದ್ದ ಪಿ7211, ಪಿ5824 ಸಂಪರ್ಕದಲ್ಲಿದ್ದ ಪಿ7212, ಪಿ2830 ಸಂಪರ್ಕದಲ್ಲಿದ್ದ ಪಿ7213ಗೆ ಸೋಂಕು ತಗುಲಿದೆ. ಇವರೆಲ್ಲ ಶಿವಮೊಗ್ಗದ ಕೆಎಸ್ಆರ್ಪಿ ಬಟಾಲಿಯನ್ ಪೊಲೀಸರು.
ಹೆಚ್ಚುತ್ತಲೇ ಇದೆ ಸೋಂಕಿತ ಪೊಲೀಸರ ಸಂಖ್ಯೆ
ಜಿಲ್ಲೆಯಲ್ಲಿ ಈವರೆಗೂ ಒಟ್ಟು ಸೋಂಕಿತರ ಸಂಖ್ಯೆ 94ಕ್ಕೆ ಏರಿಕೆಯಾಗಿದೆ. ಈ ಪೈಕಿ ಕೆಎಸ್ಆರ್ಪಿ ಪೊಲೀಸರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಪೊಲೀಸರಿಗೆ ಸೋಂಕು ತಗುಲುತ್ತಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






