
ಶಿವಮೊಗ್ಗ ಲೈವ್.ಕಾಂ |SHIMOGA NEWS | 9 NOVEMBER 2020
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ತೀವ್ರ ಕುತೂಹಲ ಕೆರಳಿಸಿರುವ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನದ ಚುನಾವಣೆಗೆ ಮೂವರು ನಾಮಪತ್ರ ಸಲ್ಲಿಸಿದ್ದಾರೆ. ಮಧ್ಯಾಹ್ನ ಚುನಾವಣೆ ನಡೆಯುವ ಸಾಧ್ಯತೆ ಇದೆ.
ಯಾರೆಲ್ಲ ನಾಮಪತ್ರ ಸಲ್ಲಿಸಿದ್ದಾರೆ?
- ಚನ್ನವೀರಪ್ಪ | ಉಪಾಧ್ಯಕ್ಷರಾಗಿದ್ದ ಚನ್ನವೀರಪ್ಪ ಅವರು ಮಂಜುನಾಥಗೌಡ ಅವರಿಂದ ತೆರವಾದ ಸ್ಥಾನಕ್ಕೆ ಪ್ರಭಾರ ಅಧ್ಯಕ್ಷರಾಗಿದ್ದಾರೆ.
- ಜೆ.ಪಿ.ಯೋಗೇಶ್ | ಡಿಸಿಸಿ ಬ್ಯಾಂಕ್ ನಿರ್ದೇಶಕ. ಜಿಲ್ಲಾ ಪಂಚಾಯಿತಿಯ ಜೆಡಿಎಸ್ ಸದಸ್ಯರು.
- ಎಸ್.ಎಲ್.ಷಡಾಕ್ಷರಿ | ಡಿಸಿಸಿ ಬ್ಯಾಂಕ್ ನಿರ್ದೇಶಕರು.

ಮಧ್ಯಾಹ್ನ ನಡೆಯುತ್ತೆ ಚುನಾವಣೆ
ನಾಮಪತ್ರ ಹಿಂಪಡೆಯಲು ಕಾಲವಕಾಶ ನೀಡಲಾಗಿದೆ. ಮಧ್ಯಾಹ್ನ 1 ಗಂಟೆಯ ಬಳಿಕ ಅಗತ್ಯಬಿದ್ದರೆ ಚುನಾವಣೆ ಪ್ರಕ್ರಿಯೆ ನಡೆಯಲಿದೆ ಎಂದು ಚುನಾವಣಾಧಿಕಾರಿ ನಾಗೇಂದ್ರ ಎಫ್.ಹೊನ್ನಳ್ಳಿ ಅವರು ಶಿವಮೊಗ್ಗ ಲೈವ್.ಕಾಂಗೆ ತಿಳಿಸಿದ್ದಾರೆ.
ಚುನಾವಣೆ ಪ್ರಕ್ರಿಯೆಯ ವಿಡಿಯೋ ರಿಪೋರ್ಟ್
ಪ್ರತಿಷ್ಠೆಯಾದ ಅಧ್ಯಕ್ಷ ಸ್ಥಾನ
ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನದ ಚುನಾವಣೆ ಬಿಜೆಪಿ ಮತ್ತು ಜೆಡಿಎಸ್, ಕಾಂಗ್ರೆಸ್ ಮೈತ್ರಿಕೂಟಕ್ಕೆ ಪ್ರತಿಷ್ಠೆಯಾಗಿದೆ. ಎಂ.ಬಿ.ಚನ್ನವೀರಪ್ಪ, ಬಿ.ಡಿ.ಭೂಕಾಂತ್, ಎನ್.ಹೆಚ್.ಶ್ರೀಪಾದ್ ರಾವ್, ಅಗಡಿ ಆಶೋಕ್ ಅವರು ಬಿಜೆಪಿ ಬೆಂಬಲಿತ ಸದಸ್ಯರು.
ಹೆಚ್.ಎಲ್.ಷಡಾಕ್ಷರಿ, ಜಿ.ಎನ್.ಸುಧೀರ್, ಎಸ್.ಪಿ.ದಿನೇಶ್, ಜೆ.ಪಿ.ಯೋಗೇಶ್, ಹೆಚ್.ಕೆ.ವೆಂಕಟೇಶ್, ಬಸವಾನಿ ವಿಜಯದೇವ್, ಕೆ.ಪಿ.ದುಗ್ಗಪ್ಪಗೌಡ, ಎಂ.ಎಂ.ಪರಮೇಶ್ ಅವರು ಜೆಡಿಎಸ್, ಕಾಂಗ್ರೆಸ್ ಬೆಂಬಲಿತ ನಿರ್ದೇಶಕರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






