ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 19 JANUARY 2023
SHIMOGA : ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಡಿ.30 ಮತ್ತು ಜ.17ರಂದು ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ರಸಪ್ರಶ್ನೆ ಮತ್ತು ಪ್ರಬಂಧ ಸ್ಪರ್ಧೆಗಳಲ್ಲಿ (competition) ಶಿವಮೊಗ್ಗ ಜಿಲ್ಲೆಯ ಪ್ರೌಢಶಾಲೆ ಮತ್ತು ಪಿಯುಸಿ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಪ್ರೌಢಶಾಲಾ ವಿಭಾಗದ ರಸಪ್ರಶ್ನೆ ಸ್ಪರ್ಧೆಯಲ್ಲಿ ತೀರ್ಥಹಳ್ಳಿ ತಾಲ್ಲೂಕಿನ ಗುಡ್ಡೆಕೇರಿಯ ಸರ್ಕಾರಿ ಪ್ರೌಢಶಾಲೆಯ ಶ್ರೀರಾಂ ಭಟ್ ಹೆಚ್.ಎಸ್ ಮತ್ತು ಅಭಿಜ್ಞ ಓ.ಎ ಅವರು ಪ್ರಥಮ ಸ್ಥಾನ ಪಡೆದಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಪದವಿಪೂರ್ವ ಕಾಲೇಜು ವಿಭಾಗದಲ್ಲಿ ಶಿವಮೊಗ್ಗದ ಕಸ್ತೂರಿಬಾ ಪಿಯು ಕಾಲೇಜಿನ ಅರ್ಫಾ ರೀಮ್ ತಾಜ್ ಆಂಗ್ಲ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ (competition) ಚಂದನ ಹೊಸೂರ್ ಇವರು ದ್ವಿತೀಯ ಸ್ಥಾನ ಪಡೆದಿರುತ್ತಾರೆ.
ವಿವಿಧ ಸ್ಪರ್ಧೆಗಳಲ್ಲಿ ಸ್ಥಾನ ಗಳಿಸಿ ಜಿಲ್ಲೆಗೆ ಹೆಮ್ಮೆ ತಂದಿರುವ ಈ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಜಿ.ಪಂ ಸಿಇಓ ಎನ್.ಡಿ.ಪ್ರಕಾಶ್, ಸ್ವೀಪ್ ನೋಡಲ್ ಅಧಿಕಾರಿ ನವೀನ್ ಕುಮಾರ್, ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ನವೀದ್ ಅಹ್ಮದ್, ಡಿಡಿಪಿಯು ಕೃಷ್ಣಪ್ಪ, ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ ಡಿಸಿಸಿ ಬ್ಯಾಂಕ್ ನೇಮಕಾತಿ ಪರೀಕ್ಷೆ, ಫಲಿತಾಂಶ ಪ್ರಕಟ