ಶಿವಮೊಗ್ಗದಲ್ಲಿ ದುಡ್ಡು ಕೊಟ್ಟರಷ್ಟೆ ಮಂಟಪ ಮುಳುಗಿರುವುದು ನೋಡಲು ಅವಕಾಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 16 JULY 2024

SHIMOGA : ತುಂಗಾ ಜಲಾಶಯದಿಂದ ಭಾರಿ ಪ್ರಮಾಣದ ನೀರು ಹೊಳೆಗೆ ಹರಿಸಲಾಗುತ್ತಿದೆ. ಹಾಗಾಗಿ ಕೋರ್ಪಲಯ್ಯ ಛತ್ರ ಮಂಟಪ (Mantapa) ಮುಳುಗಿದೆ. ಇದನ್ನು ಕಣ್ತುಂಬಿಕೊಳ್ಳಲು ನಗರದ ವಿವಿಧೆಡೆಯಿಂದ ಜನರು ನಿರಾಸೆಯಿಂದ ಹಿಂತಿರುಗುವಂತಾಗಿದೆ.

66 ಕ್ಯೂಸೆಕ್‌ ನೀರು

ಹಿನ್ನೀರು ಭಾಗದಲ್ಲಿ ಮಳೆ ಹೆಚ್ಚಾದ ಹಿನ್ನೆಲೆ ತುಂಗಾ ಜಲಾಶಯ ಭರ್ತಿಯಾಗಿದೆ. ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಹಾಗಾಗಿ ಶಿವಮೊಗ್ಗದಲ್ಲಿ ತುಂಗಾ ನದಿಯ ಮೈದುಂಬಿ ಹರಿಯುತ್ತಿದೆ. ತುಂಗಾ ನದಿ ದಂಡೆ ಮೇಲಿರುವ ಕೋರ್ಪಲಯ್ಯ ಛತ್ರ ಮಂಟಪ ಸಂಪೂರ್ಣ ಭರ್ತಿಯಾಗಿದೆ.

ಕಣ್ತುಂಬಿಕೊಳ್ಳಲು ಬಂದವರಿಗೆ ನಿರಾಸೆ

ಪ್ರತಿ ಮಳೆಗಾಲದಲ್ಲಿ ಜಲಾಶಯದಿಂದ ನೀರು ಹೊರ ಬಿಡುತ್ತಿದ್ದಂತೆ ಶಿವಮೊಗ್ಗದ ಜನರು ಮಂಟಪದತ್ತ ಕಣ್ಣು ಹಾಯಿಸುವುದು ಸಾಮಾನ್ಯ. ಜಗತ್ತಿನ ಯಾವುದೇ ಮೂಲೆಯಲ್ಲಿದ್ದರು ‘ಶಿವಮೊಗ್ಗದವರು ಮಂಟಪ ಮುಳುಗಿತಾ’ ಎಂಬ ಕುತೂಹಲದಿಂದ ಕೇಳುತ್ತಾರೆ. ಮಂಟಪ ಮುಳುಗಿದಾಗ ನಗರದ ವಿವಿಧೆಡೆಯಿಂದ ಜನರು ನದಿ ದಂಡೆಗೆ ಬರುವುದು ಸಾಮಾನ್ಯ. ಮಂಟಪದ ಬಳಿ ಪೂಜೆ ಸಲ್ಲಿಸಿ, ಫೋಟೊ, ಸೆಲ್ಫಿ ಕ್ಲಿಕ್ಕಿಸಿಕೊಂಡು ಖುಷಿ ಪಡುತ್ತಾರೆ. ಆದರೆ ಈ ಬಾರಿ ಪರಿಸ್ಥಿತಿ ಭಿನ್ನವಾಗಿದೆ. ಮಂಟಪ ಮುಳುಗಿರುವುದನ್ನು ನೋಡಲು ಟಿಕೆಟ್‌ ಖರೀದಿಸಬೇಕಿದೆ.

Shimoga-Mantapa-in-Tunga-river

ಗೇಟ್‌ ಬಳಿ ಬಂದು ಜನರ ಆಕ್ರೋಶ

ಅಯ್ಯಪ್ಪ ಸ್ವಾಮಿ ಶಾಲೆ ಸಮೀಪದಲ್ಲಿ ಮಂಟಪದ ಬಳಿ ತೆರಳಲು ಇರುವ ಗೇಟ್‌ ಬಂದ್‌ ಮಾಡಲಾಗಿದೆ. ಹಿಂದಿ ಭಾಷಿಕ ಸೆಕ್ಯೂರಿಟಿಯನ್ನು ಇಲ್ಲಿ ನಿಲ್ಲಿಸಲಾಗಿದ್ದು ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಎದುರಿಗೆ ಕಾಂಪೌಂಡ್‌ ನಿರ್ಮಿಸಲಾಗಿದೆ. ಹಾಗಾಗಿ ಮಂಟಪ ನೋಡಲು ಸಾಧ್ಯವಿಲ್ಲ. ಬೆಕ್ಕಿನ ಕಲ್ಮಠದ ಸಮೀಪ ವಿದ್ಯಾರ್ಥಿನಿಯರ ಸರ್ಕಾರಿ ಹಾಸ್ಟೆಲ್‌ ಕಡೆಯಿಂದ ಒಳ ಹೋಗಲು ಅವಕಾಶವಿದೆ. ಆದರೆ ಹಣ ತೆತ್ತು ಟಿಕೆಟ್‌ ಖರೀದಿಸಿ ಒಳ ಹೋಗಬೇಕಿದೆ.

[su_quote cite=”ಲಕ್ಷ್ಮಮ್ಮ, ಶಿವಮೊಗ್ಗದ ನಿವಾಸಿ“]ಮಕ್ಕಳಿಗೆ ರಜೆ ಇದೆ. ಮಂಟಪ ಮುಳುಗಿದೆ ಅಂದರು. ಮೊಮ್ಮಕ್ಕಳನ್ನು ಕರೆದುಕೊಂಡು ಬಂದೆ. ಇಲ್ಲಿ ಗೇಟ್‌ ತೆಗೆಯುತ್ತಿಲ್ಲ. ಆ ಕಡೆಯಿಂದ ಬನ್ನಿ ಅಂತಿದ್ದಾರೆ. ಮಳೆ ಬರುತ್ತಿದೆ. ಈ ಮಕ್ಕಳನ್ನು ಹಿಡಿದುಕೊಂಡು ಇಲ್ಲಿಂದ ಆ ಗೇಟ್‌ವರೆಗೆ ನಡೆದುಕೊಂಡು ಹೋಗಲು ಆಗುತ್ತಾ? ಎರಡು ಹೆಜ್ಜೆ ಒಳಗೆ ಬಿಟ್ಟರೆ ನೋಡಕೊಂಡು ಹೋಗುತ್ತೇವೆ. ಪ್ರತಿ ವರ್ಷ ನೋಡುತ್ತಿದ್ದ ಮಂಟಪಕ್ಕೆ ಈಗ ಟಿಕೆಟ್‌ ತೆಗೆದುಕೊಂಡು ನೋಡಿ ಅಂತಿರೋದು ಸರಿನಾ?[/su_quote]

ಗೇಟ್‌ನಲ್ಲಿಯೇ ನಿಂತು ಜನರು ಮಂಟಪ ವೀಕ್ಷಿಸಲಾಗದೆ ಸ್ಮಾರ್ಟ್‌ ಸಿಟಿ, ಮಹಾನಗರ ಪಾಲಿಕೆಗೆ ಹಿಡಿಶಾಪ ಹಾಕಿ ಹಿಂತಿರುಗುತ್ತಿದ್ದಾರೆ.

Tunga river Mantapa

ಮಂಟಪ ನೋಡಲು ಅವಕಾಶ ಕಲ್ಪಿಸಬೇಕಿತ್ತು

ಮಳೆಗಾಲದಲ್ಲಿ ಒಂದೆರಡು ಬಾರಿ ಮಂಟಪ ಮುಳುಗಬಹುದು. ಮೊದಲ ಬಾರಿ ಮುಳುಗಿದಾಗ ಜನರು ಕುತೂಹಲದಿಂದ ಮಂಟಪದ ಬಳಿ ಬರುತ್ತಾರೆ. ತುಂಗೆಗೆ ಪೂಜೆ ಸಲ್ಲಿಸುತ್ತಾರೆ. ಕನಿಷ್ಠ ಮಂಟಪ ನೋಡಲು ಅವಕಾಶ ನೀಡಬೇಕಿತ್ತು ಎಂದು ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ ⇓

ಮಾಸ್ತಿಕಟ್ಟೆಯಲ್ಲಿ ಅತ್ಯಧಿಕ ಮಳೆ, ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ಎಷ್ಟಾಗಿದೆ ವರ್ಷಧಾರೆ? ಇಲ್ಲಿದೆ ಡಿಟೇಲ್ಸ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 16, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment