ಶಿವಮೊಗ್ಗಕ್ಕೆ ಜೂ.21ರಂದು ಸಚಿವ ಮಧು ಬಂಗಾರಪ್ಪ ಭೇಟಿ, ಮಹತ್ವದ ಮೀಟಿಂಗ್‌ನಲ್ಲಿ ಭಾಗಿ

SHIVAMOGGA LIVE NEWS | 20 JUNE 2024 (ಈ ಸುದ್ದಿಯನ್ನು ಇನ್ನು 35 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

SHIMOGA : ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಜೂ.21ರಂದು ಶಿವಮೊಗ್ಗ ಪ್ರವಾಸ (Tour) ಕೈಗೊಂಡಿದ್ದಾರೆ. ಬೆಳಗ್ಗೆ 4.45ಕ್ಕೆ ಬೆಂಗಳೂರಿನಿಂದ ಹೊರಟು ಬೆಳಗ್ಗೆ 10ಕ್ಕೆ ಸಚಿವ ಮಧು ಬಂಗಾರಪ್ಪ ಶಿವಮೊಗ್ಗ ತಲುಪಲಿದ್ದಾರೆ.

ಬೆಳಗ್ಗೆ 10.30ಕ್ಕೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾಮಟ್ಟದ ಉನ್ನತ ಅಧಿಕಾರಿಗಳ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 12ಕ್ಕೆ ಶಿವಮೊಗ್ಗ ಪ್ರೆಸ್‌ ಟ್ರಸ್ಟ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಮತ್ತೂರಿಗೆ ತೆರಳಿ ವಿಧಾನ ಪರಿಷತ್‌ ಮಾಜಿ ಸದಸ್ಯ ಎಂ.ಬಿ.ಭಾನಪ್ರಕಾಶ್‌ ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಲಿದ್ದಾರೆ. ಸಂಜೆ 6 ಗಂಟೆಗೆ ಶಿವಮೊಗ್ಗದಿಂದ ಹೊರಟು ರಾತ್ರಿ 11ಕ್ಕೆ ಬೆಂಗಳೂರು ತಲುಪಲಿದ್ದಾರೆ.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

ಇದನ್ನೂ ಓದಿ – ಶಿಕಾರಿಪುರದ 23 ವರ್ಷದ ಯುವಕನಿಗೆ 20 ವರ್ಷ ಜೈಲು ಶಿಕ್ಷೆ, 50 ಸಾವಿರ ದಂಡ, ಏನಿದು ಪ್ರಕರಣ?

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Minister-Madhu-Bangarappa

Leave a Comment