ಲಾರಿ ಡಿಕ್ಕಿ, ಭದ್ರಾವತಿಯಲ್ಲಿ ರೈಲ್ವೆ ಹಳಿ ಏರುಪೇರು, ಜನಶತಾಬ್ದಿ ಸೇರಿ 2 ರೈಲು ಎರಡು ಗಂಟೆ ವಿಳಂಬ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 18 APRIL 2024

RAILWAY NEWS : ಭದ್ರಾವತಿ ರೈಲ್ವೆ ಅಂಡರ್‌ ಪಾಸ್‌ನಲ್ಲಿ ಲಾರಿ ಅಪಘಾತ ಸಂಭವಿಸಿ ಹಳಿಗಳು ಏರುಪೇರಾಗಿತ್ತು. ಹಾಗಾಗಿ ಎರಡು ರೈಲುಗಳು ಸುಮಾರು ಎರಡು ಗಂಟೆ ತಡವಾಗಿ ಸಂಚಾರ ಆರಂಭಸಿವೆ.

ಅಪಘಾತ ಸಂಭವಿಸಿದ್ದು ಹೇಗೆ?

ಭದ್ರಾವತಿ ಪಟ್ಟಣದ ರೈಲ್ವೆ ಅಂಡರ್‌ಪಾಸ್‌ ಮುಂದೆ ನಿಗದಿಗಿಂತಲೂ ಎತ್ತರದ ವಾಹನಗಳು ಸಂಚರಿಸದಂತೆ ತಡೆಯಲು ಕಬ್ಬಿಣದ ಬ್ಯಾರಿಕೇಡ್‌ ಹಾಕಲಾಗಿದೆ. ಕಳೆದ ರಾತ್ರಿ ಈ ಬ್ಯಾರಿಕೇಡ್‌ಗೆ ಲಾರಿ ಡಿಕ್ಕಿ ಹೊಡೆದಿದೆ. ಬ್ಯಾರಿಕೇಡ್‌ ಮುರಿದು ರೈಲ್ವೆ ಹಳಿಗೆ ತಾಗಿತ್ತು. ಇದರಿಂದ ಹಳಿಗಳು ಎರುಪೇರಾಗಿ ತಾಂತ್ರಿಕ ದೋಷ ಉಂಟಾಗಿತ್ತು. ಕೂಡಲೆ ರೈಲ್ವೆ ಸಿಬ್ಬಂದಿ ಹಳಿ ರಿಪೇರಿ ಕಾಮಗಾರಿ ಆರಂಭಿಸಿದ್ದರು. ಇದರಿಂದ ಶಿವಮೊಗ್ಗ – ಭದ್ರಾವತಿ ನಡುವೆ ರೈಲು ಸಂಚಾರ ರದ್ದುಗೊಳಿಸಲಾಗಿತ್ತು.

ಕಾದು ಕಾದು ಹೈರಾಣಾದ ಪ್ರಯಾಣಿಕರು

ಹಳಿ ರಿಪೇರಿ ಕಾರ್ಯದ ಹಿನ್ನೆಲೆ ಎರಡು ರೈಲುಗಳು ವಿಳಂಬವಾಗಿ ಸಂಚರಿಸುತ್ತಿವೆ. ಬೆಳಗ್ಗೆ 4.45ಕ್ಕೆ ಶಿವಮೊಗ್ಗ ತಲುಪಬೇಕಿದ್ದ ಮೈಸೂರು – ತಾಳಗುಪ್ಪ ಎಕ್ಸ್‌ಪ್ರೆಸ್‌ ರೈಲು ಬೆಳಗ್ಗೆ 6.45ಕ್ಕೆ ತಲುಪಿದೆ. ಅಲ್ಲಿಯವರೆಗೂ ಈ ರೈಲು ಭದ್ರಾವತಿ ನಿಲ್ದಾಣದಲ್ಲಿ ನಿಂತಿತ್ತು.

ಇನ್ನು, ಶಿವಮೊಗ್ಗದಿಂದ ಬೆಳಗ್ಗೆ 5.15ಕ್ಕೆ ಹೊರಡಬೇಕಿದ್ದ ಬೆಂಗಳೂರು ಜನಶತಾಬ್ದಿ ರೈಲು ಸುಮಾರು ಬೆಳಗ್ಗೆ 6.355ಕ್ಕೆ ಹೊರಟಿದೆ. ವಿಳಂಬಕ್ಕೆ ಕಾರಣ ಗೊತ್ತಾಗದೆ ಪ್ರಯಾಣಿಕರು ಗೊಂದಲಕ್ಕೀಡಾಗಿದ್ದರು.

ಇದನ್ನೂ ಓದಿ – ಮೈಸೂರು – ತಾಳಗುಪ್ಪ ಎಕ್ಸ್‌ಪ್ರೆಸ್‌ ಸೇರಿ ಎರಡು ರೈಲುಗಳ ಸಮಯ ಮರು ಹೊಂದಾಣಿಕೆ, ಕಾರಣವೇನು? ಯಾವ್ಯಾವ ದಿನ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment