ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 18 APRIL 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
RAILWAY NEWS : ಭದ್ರಾವತಿ ರೈಲ್ವೆ ಅಂಡರ್ ಪಾಸ್ನಲ್ಲಿ ಲಾರಿ ಅಪಘಾತ ಸಂಭವಿಸಿ ಹಳಿಗಳು ಏರುಪೇರಾಗಿತ್ತು. ಹಾಗಾಗಿ ಎರಡು ರೈಲುಗಳು ಸುಮಾರು ಎರಡು ಗಂಟೆ ತಡವಾಗಿ ಸಂಚಾರ ಆರಂಭಸಿವೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಅಪಘಾತ ಸಂಭವಿಸಿದ್ದು ಹೇಗೆ?
ಭದ್ರಾವತಿ ಪಟ್ಟಣದ ರೈಲ್ವೆ ಅಂಡರ್ಪಾಸ್ ಮುಂದೆ ನಿಗದಿಗಿಂತಲೂ ಎತ್ತರದ ವಾಹನಗಳು ಸಂಚರಿಸದಂತೆ ತಡೆಯಲು ಕಬ್ಬಿಣದ ಬ್ಯಾರಿಕೇಡ್ ಹಾಕಲಾಗಿದೆ. ಕಳೆದ ರಾತ್ರಿ ಈ ಬ್ಯಾರಿಕೇಡ್ಗೆ ಲಾರಿ ಡಿಕ್ಕಿ ಹೊಡೆದಿದೆ. ಬ್ಯಾರಿಕೇಡ್ ಮುರಿದು ರೈಲ್ವೆ ಹಳಿಗೆ ತಾಗಿತ್ತು. ಇದರಿಂದ ಹಳಿಗಳು ಎರುಪೇರಾಗಿ ತಾಂತ್ರಿಕ ದೋಷ ಉಂಟಾಗಿತ್ತು. ಕೂಡಲೆ ರೈಲ್ವೆ ಸಿಬ್ಬಂದಿ ಹಳಿ ರಿಪೇರಿ ಕಾಮಗಾರಿ ಆರಂಭಿಸಿದ್ದರು. ಇದರಿಂದ ಶಿವಮೊಗ್ಗ – ಭದ್ರಾವತಿ ನಡುವೆ ರೈಲು ಸಂಚಾರ ರದ್ದುಗೊಳಿಸಲಾಗಿತ್ತು.
ಕಾದು ಕಾದು ಹೈರಾಣಾದ ಪ್ರಯಾಣಿಕರು
ಹಳಿ ರಿಪೇರಿ ಕಾರ್ಯದ ಹಿನ್ನೆಲೆ ಎರಡು ರೈಲುಗಳು ವಿಳಂಬವಾಗಿ ಸಂಚರಿಸುತ್ತಿವೆ. ಬೆಳಗ್ಗೆ 4.45ಕ್ಕೆ ಶಿವಮೊಗ್ಗ ತಲುಪಬೇಕಿದ್ದ ಮೈಸೂರು – ತಾಳಗುಪ್ಪ ಎಕ್ಸ್ಪ್ರೆಸ್ ರೈಲು ಬೆಳಗ್ಗೆ 6.45ಕ್ಕೆ ತಲುಪಿದೆ. ಅಲ್ಲಿಯವರೆಗೂ ಈ ರೈಲು ಭದ್ರಾವತಿ ನಿಲ್ದಾಣದಲ್ಲಿ ನಿಂತಿತ್ತು.
ಇನ್ನು, ಶಿವಮೊಗ್ಗದಿಂದ ಬೆಳಗ್ಗೆ 5.15ಕ್ಕೆ ಹೊರಡಬೇಕಿದ್ದ ಬೆಂಗಳೂರು ಜನಶತಾಬ್ದಿ ರೈಲು ಸುಮಾರು ಬೆಳಗ್ಗೆ 6.355ಕ್ಕೆ ಹೊರಟಿದೆ. ವಿಳಂಬಕ್ಕೆ ಕಾರಣ ಗೊತ್ತಾಗದೆ ಪ್ರಯಾಣಿಕರು ಗೊಂದಲಕ್ಕೀಡಾಗಿದ್ದರು.
ಇದನ್ನೂ ಓದಿ – ಮೈಸೂರು – ತಾಳಗುಪ್ಪ ಎಕ್ಸ್ಪ್ರೆಸ್ ಸೇರಿ ಎರಡು ರೈಲುಗಳ ಸಮಯ ಮರು ಹೊಂದಾಣಿಕೆ, ಕಾರಣವೇನು? ಯಾವ್ಯಾವ ದಿನ?