ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 2 OCTOBER 2023
SHIMOGA : ರಾಗಿಗುಡ್ಡದಲ್ಲಿ ಗಲಾಟೆ ಹಿನ್ನೆಲೆ ಶಿವಮೊಗ್ಗ ನಗರದಾದ್ಯಂತ ನಿಷೇಧಾಜ್ಞೆ ವಿಧಿಸಲಾಗಿದೆ. ಪ್ರಮುಖ ವಾಣಿಜ್ಯ ಕೇಂದ್ರ ಗಾಂಧಿ ಬಜಾರ್‌ನಲ್ಲಿ (Gandhi Bazaar) ಅಂಗಡಿ ಮುಂಗಟ್ಟು ಮುಚ್ಚಿಸಲಾಗಿದೆ. ಇದರಿಂದ ವ್ಯಾಪಾರಿಗಳು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ.
ಹತ್ತು ಕೋಟಿ ರೂ. ನಷ್ಟ
ಗಾಂಧಿ ಬಜಾರ್‌ನಲ್ಲಿ ದಿನಸಿ, ಜವಳಿ, ಚಿನ್ನಾಭರಣ ಸೇರಿದಂತೆ ಎಲ್ಲಾ ಬಗೆಯ ವ್ಯಾಪಾರ ವಹಿವಾಟು ನಡೆಯಲಿದೆ. ಹೋಲ್‌ಸೇಲ್ ಮತ್ತು ರಿಟೇಲ್ ವ್ಯಾಪಾರಿಗಳು ಇಲ್ಲಿದ್ದಾರೆ. ಪ್ರತಿ ದಿನ ಸಾವಿರಾರು ರೂ. ನಿಂದ ಲಕ್ಷಾಂತರ ರೂ. ವಹಿವಾಟು ನಡೆಸುವವರು ಇಲ್ಲಿದ್ದಾರೆ. ಒಂದು ಅಂದಾಜಿನ ಪ್ರಕಾರ ಗಾಂಧಿ ಬಜಾರ್‌ನಲ್ಲಿ (Gandhi Bazaar) ಪ್ರತಿನಿತ್ಯ ಹತ್ತು ಕೋಟಿ ರೂ. ವಹಿವಾಟು ನಡೆಯಲಿದೆ. ಇವತ್ತು ಗಾಂಧಿ ಬಜಾರ್‌ನಲ್ಲಿ ಅಂಗಡಿ ಮುಂಗಟ್ಟು ಬಂದ್ ಮಾಡಿಸಿರುವುದರಿಂದ ಹತ್ತು ಕೋಟಿ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.
ಇದನ್ನೂ ಓದಿ- ಶಿವಮೊಗ್ಗದ ಗಾಂಧಿ ಬಜಾರ್, ನೆಹರೂ ರಸ್ತೆ ಬಂದ್, ವ್ಯಾಪಾರ, ವಹಿವಾಟು ಸ್ಥಗಿತ
ಮೂರ್ನಾಲ್ಕು ದಿನ ಬಂದ್
ಕಳೆದ ಐದು ದಿನದಲ್ಲಿ ಗಾಂಧಿ ಬಜಾರ್‌ನಲ್ಲಿ ವ್ಯಾಪಾರ ವಹಿವಾಟು ನಾಲ್ಕು ದಿನ ಸ್ಥಗಿತವಾಗಿದೆ. ಇದರಿಂದ ಕೋಟ್ಯಂತರ ರೂ. ನಷ್ಟವಾಗಿದೆ. ಸೆ.28ರಂದು ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಹಿನ್ನೆಲೆ ಅಂಗಡಿ ಮುಂಗಟ್ಟು ಬಂದ್ ಮಾಡಲಾಗಿತ್ತು. ಸೆ.30ರಂದು ಓಂ ಗಣಪತಿ ಮೆರವಣಿಗೆ, ಅ.1ರಂದು ಭಾನುವಾರ, ಅ.2ರಂದು ನಿಷೆಧಾಜ್ಞೆ ಹಿನ್ನೆಲೆ ಬಂದ್. ಇದರಿಂದ ಕೋಟ್ಯಂತರ ರೂ. ನಷ್ಟವಾಗಿದೆ. ಅಲ್ಲದೆ ಗ್ರಾಹಕರು ಮತ್ತೆ ಮಾರುಕಟ್ಟೆಯತ್ತ ಬರಲು ಸಮಯ ಹಿಡಿಯಲಿದೆ. ಹಾಗಾಗಿ ನಷ್ಟ ಮತ್ತಷ್ಟು ಹೆಚ್ಚಳವಾಗಲಿದೆ.
ಎಲ್ಲೋ ಗಲಾಟೆಯಾರೆ ಗಾಂಧಿ ಬಜಾರ್‌ನಲ್ಲಿ ಬಂದ್ ಮಾಡಿಸುವುದು ಸರಿಯಾದ ಕ್ರಮವಲ್ಲ. ಈ ಕುರಿತು ಜಿಲ್ಲಾಧಿಕಾರಿಯವರನ್ನು ಭೇಟಿಯಾಗಿ ಮನವರಿಕೆ ಮಾಡಿಕೊಟ್ಟಿದ್ದೇವೆ. ರಾಗಿಗುಡ್ಡಕ್ಕೆ ಸೀಮಿತವಾಗಿ ನಿಷೇಧಾಜ್ಞೆ ಮಾಡಿ ಎಂದು ಮನವಿ ಮಾಡಿದ್ದೇವೆ ಅನ್ನುತ್ತಾರೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೆ ಸಂಘದ ಅಧ್ಯಕ್ಷ ಎನ್.ಗೋಪಿನಾಥ್.
ಇದನ್ನೂ ಓದಿ- ರಾಗಿಗುಡ್ಡದಲ್ಲಿ ಕಲ್ಲು ತೂರಿ ಅಡಗಿ ಕುಳಿತಿದ್ದವರನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದ ಪೊಲೀಸರು
ಎತ್ತಿಗೆ ಜ್ವರ, ಎಮ್ಮೆಗೆ ಬರೆ ಸ್ಥಿತಿ
ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದರು ಎಂಬಂತಾಗಿದೆ ಗಾಂಧಿ ಬಜಾರ್ ವರ್ತಕರ ಪರಿಸ್ಥಿತಿ. ಶಿವಮೊಗ್ಗ ನಗರದ ಯಾವುದೆ ಭಾಗದಲ್ಲಿ ಗೊಂದಲ, ಗದ್ದಲ ಉಂಟಾದರು ಗಾಂಧಿ ಬಜಾರ್‌ನಲ್ಲಿ ಅಂಗಡಿ, ಮುಂಗಟ್ಟು ಬಂದ್ ಮಾಡಿಸಲಾಗುತ್ತದೆ. ಇದರಿಂದ ವ್ಯಾಪಾರಿಗಳು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಬಾಡಿಗೆ, ಸಿಬ್ಬಂದಿ ವೇತನ, ಭವಿಷ್ಯದ ವ್ಯಾಪಾರಕ್ಕೆ ಹಣ, ಜೀವನ ನಿರ್ವಹಣೆ ಕಷ್ಟವಾಗಿದೆ ಎಂದು ಅಲವತ್ತುಕೊಳ್ಳುತ್ತಿದ್ದಾರೆ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















