ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ನಗರದ ವಿವಿಧೆಡೆ ಸಂಚಾರ ಪೊಲೀಸರು ಶಾಲಾ ವಾಹನಗಳನ್ನು (School Vans) ತಡೆದು ದಿಢೀರ್ ತಪಾಸಣೆ ನಡೆಸಿದರು. ಈ ವೇಳೆ ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿದ್ದ ನಾಲ್ಕು ಪ್ರಕರಣಗಳು ಬೆಳಕಿಗೆ ಬಂದಿವೆ.
ಸೋಮವಾರ ಬೆಳಗ್ಗೆ ನಗರದ ವಿವಿಧೆಡೆ ಸಂಚಾರ ಠಾಣೆ ಪೊಲೀಸರು ಏಕಕಾಲಕ್ಕೆ ತಪಾಸಣೆ ನಡೆಸಿದರು. ಶಾಲೆ, ಕಾಲೇಜು ವಿದ್ಯಾರ್ಥಿಗಳನ್ನು ಕರೆದೊಯ್ಯುವ ವಾಹನಗಳನ್ನು ತಡೆದು ಪರಿಶೀಲಿಸಿದರು.

ನಿಗದಿಗಿಂತಲು ಹೆಚ್ಚು ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ 17 ಪ್ರಕರಣಗಳು ದಾಖಲು ಮಾಡಲಾಗಿದೆ. ವಾಹನದ ಫಿಟ್ನೆಸ್ ಅವಧಿ ಮುಕ್ತಾಯಗೊಂಡಿದ್ದ 3 ಪ್ರಕರಣಗಳು ಪತ್ತೆಯಾಗಿವೆ. ನಾಲ್ಕು ಡ್ರಂಕ್ ಅಂಡ್ ಡ್ರೈವ್ ಪ್ರಕರಣಗಳು ಬೆಳಕಿಗೆ ಬಂದಿವೆ. ಇವುಗಳ ವಿರುದ್ಧವು ಪ್ರಕರಣ ದಾಖಲು ಮಾಡಲಾಗಿದೆ. ವಿದ್ಯಾರ್ಥಿಗಳನ್ನು ಕರೆದೊಯ್ಯುವ ವಾಹನಗಳಲ್ಲಿ (School Vans) ವಿಮೆ, ಎಮಿಷನ್ ರಿಪೋರ್ಟ್, ಫಿಟ್ನೆಸ್ ಸರ್ಟಿಫಿಕೇಟ್ ಚಾಲ್ತಿಯಲ್ಲಿ ಇರಬೇಕು. ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಚಾಲಕರಿಗೆ ಜಾಗೃತಿ ಮೂಡಿಸಲಾಗಿದೆ.
ಡಿವೈಎಸ್‌ಪಿ ಸಂಜೀವ್ ಕುಮಾರ್, ಸಂಚಾರ ಠಾಣೆ ಇನ್ಸ್‌ಪೆಕ್ಟರ್ ದೇವರಾಜ್, ಪಿಎಸ್‌ಐಗಳಾದ ನವೀನ್ ಮಠಪತಿ, ತಿರುಮಲೇಶ್ ಸೇರಿದಂತೆ ಸಂಚಾರ ಠಾಣೆಗಳ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಇದನ್ನೂ ಓದಿ » ಭದ್ರಾ ಜಲಾಶಯದ ಎಡದಂಡೆ ಸುತ್ತಲು ನಿಷೇಧಾಜ್ಞೆ ಜಾರಿ, ಡ್ಯಾಮ್ ಬಳಿ ಬಿಗಿ ಪೊಲೀಸ್ ಬಂದೋಬಸ್ತ್
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು





