ಶಿವಮೊಗ್ಗ ಸಿಟಿಯಲ್ಲಿ ಶಾಲಾ ವಾಹನಗಳ ದಿಢೀರ್‌ ತಪಾಸಣೆ, ನಾಲ್ಕು ಡ್ರಂಕ್‌ ಅಂಡ್‌ ಡ್ರೈವ್‌ ಕೇಸ್‌ ಪತ್ತೆ

FREE NEWS

ನಿಮ್ಮ ಊರಿನ ಸುದ್ದಿಗಳನ್ನು ನಮಗೆ ವಾಟ್ಸಪ್ ಮಾಡಿ

7411700200

ಶಿವಮೊಗ್ಗ: ನಗರದ ವಿವಿಧೆಡೆ ಸಂಚಾರ ಪೊಲೀಸರು ಶಾಲಾ ವಾಹನಗಳನ್ನು (School Vans) ತಡೆದು ದಿಢೀರ್‌ ತಪಾಸಣೆ ನಡೆಸಿದರು. ಈ ವೇಳೆ ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿದ್ದ ನಾಲ್ಕು ಪ್ರಕರಣಗಳು ಬೆಳಕಿಗೆ ಬಂದಿವೆ.

ಸೋಮವಾರ ಬೆಳಗ್ಗೆ ನಗರದ ವಿವಿಧೆಡೆ ಸಂಚಾರ ಠಾಣೆ ಪೊಲೀಸರು ಏಕಕಾಲಕ್ಕೆ ತಪಾಸಣೆ ನಡೆಸಿದರು. ಶಾಲೆ, ಕಾಲೇಜು ವಿದ್ಯಾರ್ಥಿಗಳನ್ನು ಕರೆದೊಯ್ಯುವ ವಾಹನಗಳನ್ನು ತಡೆದು ಪರಿಶೀಲಿಸಿದರು.

Traffic-Police-checks-School-vans-in-Shimoga-city

ನಿಗದಿಗಿಂತಲು ಹೆಚ್ಚು ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ 17 ಪ್ರಕರಣಗಳು ದಾಖಲು ಮಾಡಲಾಗಿದೆ. ವಾಹನದ ಫಿಟ್ನೆಸ್‌ ಅವಧಿ ಮುಕ್ತಾಯಗೊಂಡಿದ್ದ 3 ಪ್ರಕರಣಗಳು ಪತ್ತೆಯಾಗಿವೆ. ನಾಲ್ಕು ಡ್ರಂಕ್‌ ಅಂಡ್‌ ಡ್ರೈವ್‌ ಪ್ರಕರಣಗಳು ಬೆಳಕಿಗೆ ಬಂದಿವೆ. ಇವುಗಳ ವಿರುದ್ಧವು ಪ್ರಕರಣ ದಾಖಲು ಮಾಡಲಾಗಿದೆ. ವಿದ್ಯಾರ್ಥಿಗಳನ್ನು ಕರೆದೊಯ್ಯುವ ವಾಹನಗಳಲ್ಲಿ (School Vans) ವಿಮೆ, ಎಮಿಷನ್‌ ರಿಪೋರ್ಟ್‌, ಫಿಟ್ನೆಸ್‌ ಸರ್ಟಿಫಿಕೇಟ್‌ ಚಾಲ್ತಿಯಲ್ಲಿ ಇರಬೇಕು. ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಚಾಲಕರಿಗೆ ಜಾಗೃತಿ ಮೂಡಿಸಲಾಗಿದೆ.

ಡಿವೈಎಸ್‌ಪಿ ಸಂಜೀವ್‌ ಕುಮಾರ್‌, ಸಂಚಾರ ಠಾಣೆ ಇನ್ಸ್‌ಪೆಕ್ಟರ್‌ ದೇವರಾಜ್‌, ಪಿಎಸ್‌ಐಗಳಾದ ನವೀನ್‌ ಮಠಪತಿ, ತಿರುಮಲೇಶ್‌ ಸೇರಿದಂತೆ ಸಂಚಾರ ಠಾಣೆಗಳ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ » ಭದ್ರಾ ಜಲಾಶಯದ ಎಡದಂಡೆ ಸುತ್ತಲು ನಿಷೇಧಾಜ್ಞೆ ಜಾರಿ, ಡ್ಯಾಮ್‌ ಬಳಿ ಬಿಗಿ ಪೊಲೀಸ್‌ ಬಂದೋಬಸ್ತ್‌

ಹೆಚ್ಚಿನ Shimoga News, Shivamogga News ಮತ್ತು SHIVAMOGGA CITY ಸುದ್ದಿಗಳಿಗಾಗಿ ಶಿವಮೊಗ್ಗ ಲೈವ್ ನೋಡಿ.

© ಶಿವಮೊಗ್ಗ ಲೈವ್‌ : ಜೂನ್ 23, 2025

Leave a Comment