ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 27 JUNE 2021
ವೀಕೆಂಡ್ ಲಾಕ್ ಡೌನ್ ಮರುದಿನ ಶಿವಮೊಗ್ಗ ನಗರದಲ್ಲಿ ವಾಹನ ದಟ್ಟಣೆ ಹೆಚ್ಚಾಗಿದೆ. ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.
ಬಿ.ಹೆಚ್.ರಸ್ತೆಯಲ್ಲಿ ಟ್ರಾಫಿಕ್ ಜಾಮ್‍ನಿಂದಾಗಿ ವಾಹನಗಳು ನಿಧಾನಗತಿಯಲ್ಲಿ ಸಂಚರಿಸುತ್ತಿವೆ. ಇವತ್ತಿನ ಟ್ರಾಫಿಕ್ ಜಾಮ್ ಬೆಂಗಳೂರು ನಗರದ ರಸ್ತೆಗಳನ್ನು ನೆನಪು ಮಾಡುವಂತಿದೆ.
ಎಲ್ಲೆಲ್ಲಿ ಟ್ರಾಫಿಕ್ ಸಮಸ್ಯೆ ಆಗಿದೆ?
ಶಿವಮೊಗ್ಗ ನಗರದ ಬಿ.ಹೆಚ್.ರಸ್ತೆಯಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗಿದೆ. ಇದರ ಪರಿಣಾಮ ಅಕ್ಕಪಕ್ಕ ರಸ್ತೆಗಳಲ್ಲೂ ವಾಹನ ದಟ್ಟಣೆ ಉಂಟಾಗಿದೆ. ಗಾರ್ಡನ್ ಏರಿಯಾ, ಎಲ್.ಎಲ್.ಆರ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.
ಟ್ರಾಫಿಕ್ ಜಾಮ್‍ಗೆ ಕಾರಣವೇನು?
ವೀಕೆಂಡ್ ಲಾಕ್ ಡೌನ್ ಮರುದಿನವಾದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಶಿವಮೊಗ್ಗ ನಗರಕ್ಕೆ ಆಗಮಿಸಿದ್ದಾರೆ. ಬಹುತೇಕರು ಕಾರುಗಳನ್ನು ತಂದಿರುವುದರಿಂದ ಟ್ರಾಫಿಕ್ ಜಾಮ್ ಉಂಟಾಗಿದೆ.
ಗಾಂಧಿ ಬಜಾರ್, ನೆಹರೂ ರಸ್ತೆ, ಬಿ.ಹೆಚ್.ರಸ್ತೆಯ ವಿವಿಧ ಅಂಗಡಿಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಖರೀದಿಗೆ ಜನರು ಬಂದಿರುವುದು.
ಅಮೀರ್ ಅಹಮದ್ ಸರ್ಕಲ್‍ನಲ್ಲಿ ಬ್ಯಾರಿಕೇಡ್ ಹಾಕಲಾಗಿದೆ. ತಾತ್ಕಾಲಿಕವಾಗಿ ಅರ್ಧ ಸರ್ಕಲ್ ಬಂದ್ ಮಾಡಲಾಗಿದೆ. ಬಿ.ಹೆಚ್.ರಸ್ತೆಯಲ್ಲಿ ಬರುವವರು ನೇರವಾಗಿ ಬಸ್ ನಿಲ್ದಾಣದ ಕಡೆಗೆ ತೆರಳುವಂತೆ ಮಾಡಲಾಗಿದೆ.
ಬಹುತೇಕರು ಕಾರು ಸೇರಿದಂತೆ ದೊಡ್ಡ ವಾಹನಗಳನ್ನು ಸಿಟಿಗೆ ತಂದಿರುವುದರಿಂದ ಪಾರ್ಕಿಂಗ್ ಸಮಸ್ಯೆ ಉಂಟಾಗಿದೆ. ಪಾರ್ಕಿಂಗ್‍ಗಾಗಿ ಸ್ಥಳ ಹುಡುಕಾಟಕ್ಕಾಗಿ ನಿಧಾನಕ್ಕೆ ಸಂಚರಿಸುವುದು ಕೂಡ ಟ್ರಾಫಿಕ್ ಸಮಸ್ಯೆಗೆ ಕಾರಣವಾಗಿದೆ.
ಟ್ರಾಫಿಕ್ ನಿಯಂತ್ರಣಕ್ಕೆ ಫೀಲ್ಡಿಗಿಳಿದ ಎಸ್‍ಪಿ
ಸಿಟಿಯಲ್ಲಿ ಟ್ರಾಫಿಕ್ ಜಾಮ್ ವಿಚಾರ ತಿಳಿಯುತ್ತಿದ್ದಂತೆ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮಿ ಪ್ರಸಾದ್ ಫೀಲ್ಡಿಗಿಳಿದರು. ಅಮೀರ್ ಅಹಮದ್ ಸರ್ಕಲ್‍ನಲ್ಲಿ ಎಸ್.ಪಿ ಅವರೆ ಟ್ರಾಫಿಕ್ ಕಂಟ್ರೋಲ್‍ಗೆ ಮುಂದಾದರು. ಆದರೆ ವಾಹನಗಳ ಸಂಖ್ಯೆ ಹೆಚ್ಚಿದ್ದರಿಂದ ತಕ್ಷಣಕ್ಕೆ ಟ್ರಾಫಿಕ್ ಜಾಮ್ ನಿಯಂತ್ರಣಕ್ಕೆ ಬರದಾಯಿತು.
ಸಾಮಾಜಿಕ ಜಾಲತಾಣದಲ್ಲಿ ವೈರಲ್
ಬಿ.ಹೆಚ್.ರಸ್ತೆ, ನೆಹರೂ ರಸ್ತೆ, ಗಾರ್ಡನ್ ಏರಿಯಾದಲ್ಲಿ ಕೆಲಹೊತ್ತು ಉಂಟಾಗಿದ್ದ ಟ್ರಾಫಿಕ್ ಜಾಮ್ ವಿಚಾರ, ಸಾಮಾಜಿಕ ಜಾಲತಾಣದಲ್ಲೂ ಸದ್ದು ಮಾಡುತ್ತಿದೆ. ಹಲವರು ಟ್ರಾಫಿಕ್ ಜಾಮ್ ವಿಡಿಯೋಗಳನ್ನು ಫೇಸ್ ಬುಕ್, ವಾಟ್ಸಪ್‍ನಲ್ಲಿ ಹಂಚಿಕೊಂಡಿದ್ದಾರೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422