ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 20 JULY 2024
SHIMOGA : ಪ್ರಮುಖ ರಸ್ತೆಗಳ ಬದಿಯಲ್ಲಿ ಭಾರಿ ವಾಹನಗಳನ್ನು (heavy vehicles ) ನಿಲ್ಲಿಸಿದ್ದವರಿಗೆ ಸಂಚಾರ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಶಿವಮೊಗ್ಗ ನಗರದ ವಿವಿಧೆಡೆ ದಿಢೀರ್ ಕಾರ್ಯಾಚರಣೆ ನಡೆಸಿದ ಸಂಚಾರ ಪೊಲೀಸರು, ಎಲ್ಲೆಂದರಲ್ಲಿ ನಿಲ್ಲಿಸಿದ್ದ ಲಾರಿ, ಬಸ್ಸುಗಳನ್ನು ತೆರವು ಮಾಡಿಸಿದರು. ಅಲ್ಲದೆ ಮೋಟರ್ ವಾಹನ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಿದ್ದಾರೆ.
ಸಂಚಾರ ಠಾಣೆ ಇನ್ಸ್‌ಪೆಕ್ಟರ್ ಸಂತೋಷ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಸಾಗರ ರಸ್ತೆ, ಹೊನ್ನಾಳಿ ರಸ್ತೆ, ತೀರ್ಥಹಳ್ಳಿ ರೋಡ್, ಸವಳಂಗ ರಸ್ತೆ ಮತ್ತು ಸಿಟಿಯ ಪ್ರಮುಖ ರಸ್ತೆಗಳಲ್ಲಿ ದಿಢೀರ್ ಕಾರ್ಯಾಚರಣೆ ನಡೆಸಲಾಯಿತು.

ರಸ್ತೆ ಬದಿಯಲ್ಲಿ ಎಲ್ಲೆಂದರಲ್ಲಿ ಭಾರಿ ವಾಹನಗಳ ಪಾರ್ಕಿಂಗ್ ಮಾಡುವುದರಿಂದ ಅಪಘಾತ ಸಂಭವಿಸಲಿದೆ. ಭಾರಿ ಮಳೆ ಹಿನ್ನೆಲೆ ಅಪಘಾತಗಳ ಸಾಧ್ಯತೆ ಹೆಚ್ಚು. ಆದ್ದರಿಂದ ರಸ್ತೆ ಬದಿ ನಿಲ್ಲಿಸಿದ್ದ ಭಾರಿ ವಾಹನಗಳನ್ನು ತೆರವು ಮಾಡಿಸಲಾಯಿತು.
ಇದನ್ನೂ ಓದಿ ⇓
ಸಿಟಿ ಸೆಂಟರ್‌ನಿಂದ ಹೊರ ಬಂದ ಹೊನ್ನಾಳಿ ವ್ಯಕ್ತಿಗೆ ಕಾದಿತ್ತು ಆಘಾತ | ಭದ್ರಾವತಿಯಲ್ಲಿ ಸಿಕ್ಕಿಬಿದ್ದ ವೈರ್ ವಂಚಕ
LATEST NEWS
- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

- ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

About The Editor
ನಿತಿನ್ ಆರ್.ಕೈದೊಟ್ಲು














