ಶಿವಮೊಗ್ಗ ಸಿಟಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಚಾಲಕರಿಗೆ ಬಿಸಿ ಮುಟ್ಟಿಸಿದ ಟ್ರಾಫಿಕ್‌ ಪೊಲೀಸ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಭಾರಿ ವಾಹನ ಸಂಚಾರ ನಿಷೇಧವಿದ್ದರು ಶಿವಮೊಗ್ಗ ಸಿಟಿಯೊಳಗೆ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸುಗಳನ್ನು ಸಂಚಾರ ಪೊಲೀಸರು ತಡೆದಿದ್ದಾರೆ. ಈ ಸಂದರ್ಭ ಟ್ರಾಫಿಕ್‌ ಪೊಲೀಸರ ಜೊತೆಗೆ ಕೆಎಸ್‌ಆರ್‌ಟಿಸಿ ಬಸ್‌ ಸಿಬ್ಬಂದಿ, ಪ್ರಯಾಣಿಕರು ವಾಗ್ವಾದ ನಡೆಸಿದರು.

ಇಂದು ಗೋಪಿ ವೃತ್ತದಲ್ಲಿ ಸಂಚಾರ ಠಾಣೆ ಪೊಲೀಸರು ಕೆಎಸ್‌ಆರ್‌ಟಿಸಿ ಬಸ್ಸುಗಳನ್ನು ತಡೆದರು. ನಗರದ ಒಳಗೆ ಭಾರಿ ವಾಹನ ಸಂಚಾರ ನಿಷೇಧವಿದ್ದರು ಬಸ್ಸುಗಳು ನಗರದ ಒಳಗೆ ಸಂಚರಿಸುತ್ತಿರುವುದೇಕೆ ಎಂದು ಪ್ರಶ್ನಿಸಿದರು. ಈ ಸಂದರ್ಭ ವಾಗ್ವಾದ ನಡೆಯಿತು. ಕೆಎಸ್‌ಆರ್‌ಟಿಸಿ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಂಚಾರ ಪೊಲೀಸರ ಜೊತೆಗೆ ಚರ್ಚೆ ನಡೆಸಿದರು.

traffic-police-stops-ksrtc-buses-in-Shimoga-city.- ಕೆಎಸ್‌ಆರ್‌ಟಿಸಿ ಬಸ್‌

ಇನ್ಮುಂದೆ ಬೆಳಗಿನ ಹೊತ್ತು ನಗರದ ಒಳಗೆ ಕೆಎಸ್‌ಆರ್‌ಟಿಸಿ ಬಸ್ಸುಗಳು ಸಂಚರಿಸುವಂತಿಲ್ಲ ಎಂದು ಸಂಚಾರ ಪೊಲೀಸರು ಸೂಚಿಸಿದರು. ಕೆಎಸ್‌ಆರ್‌ಟಿಸಿ ಹಿರಿಯ ಅಧಿಕಾರಿಗಳು ಒಪ್ಪಿದ್ದರಿಂದ ಬಸ್ಸುಗಳನ್ನು ಬಿಟ್ಟು ಕಳುಹಿಸಲಾಯಿತು.

traffic-police-stops-ksrtc-buses-in-Shimoga-city.- ಕೆಎಸ್‌ಆರ್‌ಟಿಸಿ ಬಸ್‌

ಇದನ್ನೂ ಓದಿ » ಶಿವಮೊಗ್ಗ ಸಿಟಿಯ ಹಲವೆಡೆ ನಾಳೆ ಅರ್ಧ ದಿನ ವಿದ್ಯುತ್‌ ವ್ಯತ್ಯಯ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment