ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗ: ವಕ್ಫ್ ಕಾಯ್ದೆಗೆ ತಿದ್ದುಪಡಿ ವಿರೋಧಿಸಿ ಶಿವಮೊಗ್ಗದಲ್ಲಿ ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಆದ್ದರಿಂದ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ (Traffic) ನಿರ್ಬಂಧಿಸಲಾಗಿತ್ತು. ಇದರಿಂದ ವಿವಿಧೆಡೆ ಸಂಚಾರ ದಟ್ಟಣೆ ಉಂಟಾಗಿತ್ತು.
ಇದನ್ನೂ ಓದಿ » ರಾಷ್ಟ್ರಧ್ವಜ ಹಿಡಿದು ಘೋಷಣೆ ಮೊಳಗಿಸುತ್ತ ಶಿವಮೊಗ್ಗದಲ್ಲಿ ಬೀದಿಗಿಳಿದ ಮುಸ್ಲಿಂ ಸಮುದಾಯ, ಹೇಗಿತ್ತು ಮೆರವಣಿಗೆ?
ಪ್ರತಿಭಟನಾ ಮೆರವಣಿಗೆ ಸಾಗುವ ಮಾರ್ಗವಾದ್ದರಿಂದ ವೀರಭದ್ರೇಶ್ವರ ಚಿತ್ರಮಂದಿರದಿಂದ ಶಿವಮೂರ್ತಿ ಸರ್ಕಲ್‌ವರೆಗೆ ರಸ್ತೆ ಸಂಪೂರ್ಣ ಬಂದ್ ಮಾಡಲಾಗಿತ್ತು. ಮಹಾವೀರ ವೃತ್ತ ಸಂಪರ್ಕಿಸುವ ಕಾರಣಕ್ಕೆ ಮಥುರಾ ಪ್ಯಾರಡೈಸ್‌ನಿಂದ ಡಿಸಿಸಿ ಬ್ಯಾಂಕ್ ಸಮೀಪದ ಸರ್ಕಲ್‌ವರೆಗೆ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು.

ಈ ರಸ್ತೆಗಳಲ್ಲಿ ಪೊಲೀಸರು ಬ್ಯಾರಿಕೇಡ್‌ಗಳನ್ನು ಅಳವಡಿಸಿ, ವಾಹನ ಸಂಚಾರ ನಿರ್ಬಂಧಿಸಿದ್ದರು. ಹಾಗಾಗಿ ವಾಹನಗಳು ಬದಲಿ ಮಾರ್ಗಗಳಲ್ಲಿ ಸಂಚರಿಸಿದವು. ಇದರಿಂದ ವಾಹನ ಹಲವು ಕಡೆ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಬಿಗಿ ಪೊಲೀಸ್ ಬಂದೋಬಸ್ತ್
ಇನ್ನು, ಮೆರವಣಿಗೆ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಶಿವಮೊಗ್ಗ ಜಿಲ್ಲೆ ಮತ್ತು ನೆರೆ ಹೊರೆಯ ಜಿಲ್ಲೆಗಳಿಂದಲು ಪೊಲೀಸರನ್ನು ಇಲ್ಲಿ ನಿಯೋಜನೆ ಮಾಡಲಾಗಿತ್ತು. ಆಯಕಟ್ಟಿನ ಜಾಗದಲ್ಲಿ ಹೆಚ್ಚಿನ ಸಿಬ್ಬಂದಿ ನಿಯೋಜಿಸಲಾಗಿತ್ತು. ಅಲ್ಲದೆ, ಮೆರವಣಿಗೆ ಸಾಗುವ ಮಾರ್ಗ, ಪ್ರತಿಭಟನಾ ಸಭೆ ನಡೆಯುವ ಸ್ಥಳದ ಸುತ್ತಲು ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

ಈದ್ಗಾ ಮೈದಾನ ಸಂಪೂರ್ಣ ಬಂದ್
ಈದ್ಗಾ ಮೈದಾನದ ಸುತ್ತಲು ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಇವತ್ತು ವಾಹನ ನಿಲುಗಡೆ ನಿರ್ಬಂಧಿಸಲಾಗಿತ್ತು. ಇನ್ನು, ಈದ್ಗಾ ಮೈದಾನಕ್ಕೆ ಹೊಂದಿಕೊಂಡಂತೆ ಇರುವ ಅಂಗಡಿ, ಮುಂಗಟ್ಟುಗಳನ್ನು ಪೊಲೀಸರು ಬಂದ್ ಮಾಡಿಸಿದ್ದರು. ಪ್ರತಿಭಟನಾ ಸಭೆ ಮುಗಿಯುವವರೆಗೆ ಇಲ್ಲಿ ವ್ಯಾಪಾರ ವಹಿವಾಟು ಸ್ಥಗಿತವಾಗಿತ್ತು.









