SHIVAMOGGA LIVE NEWS | 21 JANUARY 2023
SHIMOGA | ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ್ ಹಾಗೂ ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದ ಪ್ರಾಣಿ ತಳಿ ಅನುವಂಶೀಯತೆ ಹಾಗೂ ತಳಿ ಶಾಸ್ತ್ರ ವಿಭಾಗದ ವತಿಯಿಂದ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಗ್ರಾಮೀಣ ಪ್ರದೇಶದ ರೈತರಿಗೆ (farmers) ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ರೈತರು (farmers), ರೈತ ಮಹಿಳೆಯರು, ನಿರುದ್ಯೋಗಿಗಳಿಗೆ ಜ.23 ರಂದು ಶಿವಮೊಗ್ಗದ ವಿನೋಬನಗರದಲ್ಲಿರುವ ಪಶುವೈದ್ಯಕೀಯ ಮಹಾವಿದ್ಯಾಲಯದ ಪ್ರಾಣಿ ಅನುವಂಶೀಯತೆ ಹಾಗೂ ತಳಿಶಾಸ್ತ್ರ ವಿಭಾಗದಲ್ಲಿ ಮೇವು ಬೆಳೆಗಳ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಏನೆಲ್ಲ ಹೇಳಿಕೊಡಲಾಗುತ್ತದೆ?
ಈ ತರಬೇತಿಯಲ್ಲಿ ಹಸಿರು ಮೇವಿನ ಬೆಳೆಗಳ ಬೇಸಾಯ ಕ್ರಮಗಳು, ಮೇವು ಬೆಳೆಗಳ ತಾಕುಗಳಿಗೆ ಭೇಟಿ, ಮೇವು ಬೀಜಗಳ ಸಂಸ್ಕರಣೆ ಹಾಗೂ ಮೇವಿನ ತಳಿಗಳ ಪಸರಣೆ-ಪ್ರಾಯೋಗಿಕ ತರಬೇತಿ, ಹುಲ್ಲುಗಾವಲು ನಿರ್ವಹಣೆಯ ಅಗತ್ಯತೆಯ ಕುರಿತಾದ ವಿವಿಧ ವಿಷಯಗಳನ್ನು ತಿಳಿಸಲಾಗುವುದು.
ಆಸಕ್ತರು ತಮ್ಮ ಹೆಸರನ್ನು ಡಾ. ಆರ್. ಜಯಶ್ರೀ, ಸಹ ಪ್ರಾಧ್ಯಾಪಕರು ಹಾಗೂ ರಾ.ಕೃ.ವಿಕಾಸ ಯೋಜನಾ ಸಂಯೋಜಕರು, ಪ್ರಾಣಿ ಅನುವಂಶೀಯತೆ ಹಾಗೂ ತಳಿಶಾಸ್ತ್ರ ವಿಭಾಗ, ಪಶುವೈದ್ಯಕೀಯ ಮಹಾವಿದ್ಯಾಲಯ, ವಿನೋಬನಗರ, ಶಿವಮೊಗ್ಗ, ಮೊ.ಸಂ.: 9916918909 / 8310384135 ಗಳಿಗೆ ಎಸ್.ಎಂ.ಎಸ್ / ವಾಟ್ಸಾಪ್ ಅಥವಾ ನೇರ ಸಂಪರ್ಕಿಸಿ ನೋಂದಾಯಿಸಿಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿಲಾಗಿದೆ.
ಇದನ್ನೂ ಓದಿ – ಅಡಕೆ ಧಾರಣೆ | 21 ಜನವರಿ 2023 | ಇವತ್ತು ಯಾವ್ಯಾವ ಮಾರುಕಟ್ಟೆಗಳಲ್ಲಿ ಎಷ್ಟಿದೆ ಅಡಕೆ ರೇಟ್?