ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 31 DECEMBER 2020
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಆಯ್ಕೆಯಾಗಿರುವ ರಾಜ್ಯದ ಎಲ್ಲಾ 92,131 ಸದಸ್ಯರಿಗೆ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ ವತಿಯಿಂದ ತರಬೇತಿ ನೀಡಲಾಗುವುದು ಅಂತಾ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಈಶ್ವರಪ್ಪ, ಜನವರಿ 19 ರಿಂದ ಮಾರ್ಚ್ 26ರವರೆಗೆ ತಾಲೂಕು ಹಂತದಲ್ಲಿ, ಹತ್ತು ತಂಡಗಳಲ್ಲಿ ತರಬೇತಿ ನೀಡಲಾಗುವುದು ಎಂದು ತಿಳಿಸಿದರು.
ಹೇಗಿರುತ್ತೆ ತರಬೇತಿ ಕಾರ್ಯ?
- ರಾಜ್ಯದ 176 ತಾಲೂಕುಗಳ 285 ಕೇಂದ್ರಗಳಲ್ಲಿ ತರಬೇತಿ ನಡೆಯಲಿದೆ. ಕೆಲವು ತಾಲೂಕುಗಳಲ್ಲಿ 2 ಕೇಂದ್ರಗಳನ್ನು ತರಬೇತಿಗೆ ಗುರುತಿಸಲಾಗಿದೆ.
- 900 ಸಂಪನ್ಮೂಲ ವ್ಯಕ್ತಿಗಳನ್ನು ಈಗಾಗಲೇ ನಿಯೋಜಿಸಲಾಗಿದ್ದು, ಪ್ರತಿ ತಂಡಕ್ಕೆ 5 ದಿನಗಳ ಮುಖಾಮುಖಿ ತರಬೇತಿ ನೀಡಲಾಗುವುದು.
- ಪ್ರತಿ ತಂಡದಲ್ಲಿ 40 ಸದಸ್ಯರಿಗೆ ತರಬೇತಿ ನೀಡಲಾಗುವುದು.
- ಪ್ರತಿ ದಿನ ಬೆಳಿಗ್ಗೆ 10.30 ರಿಂದ ಸಂಜೆ 4 ರವರೆಗೆ ತರಬೇತಿ ನಡೆಯಲಿದೆ.
- ತರಬೇತಿ ಅವಧಿಯಲ್ಲಿ 15 ವಿವಿಧ ವಿಷಯಾಧಾರಿತ ಅಧಿವೇಶನಗಳು ಮತ್ತು ಕೌಶಲ್ಯಾಧಾರಿತ ಮಾಹಿತಿಗಳನ್ನು ನೀಡಲಾಗುವುದು.
- ಪ್ರತಿ ಅಧಿವೇಶನದಲ್ಲಿ ವಿಡಿಯೊ ಮೂಲಕ ವಿಷಯ ತಜ್ಞರಿಂದ ಮಾಹಿತಿ, ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ಮತ್ತು ಗುಂಪು ಚರ್ಚೆ ಇತ್ಯಾದಿ ಚಟುವಟಿಕೆ ನಡೆಸಲಾಗುವುದು.
- ಪ್ರತಿ ದಿನ ರಾಜ್ಯಮಟ್ಟದ ಹಿರಿಯ ಅಧಿಕಾರಿಗಳೊಂದಿಗೆ ಸಂವಾದ ಮತ್ತು ಪ್ರಶ್ನೋತ್ತರಕ್ಕೆ ಅವಕಾಶ ನೀಡಲಾಗುವುದು.
- ಸದಸ್ಯರಿಗೆ ಪ್ರಯಾಣ ಭತ್ಯೆ ಮತ್ತು ಗ್ರಾಮ ಪಂಚಾಯತ್ ವತಿಯಿಂದ ಪ್ರತಿದಿನದ ಭಾಗವಹಿಸುವಿಕೆ ಭತ್ಯೆಯನ್ನು ನೀಡಲಾಗುವುದು.
- ತರಬೇತಿಗೆ ಅಂದಾಜು 27.16 ಕೋಟಿ ರೂ. ವೆಚ್ಚವಾಗಲಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರ 60:40 ಅನುಪಾತದಲ್ಲಿ ಭರಿಸಲಿದೆ.
ಇನ್ನೊಂದು ತಿಂಗಳಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರ ಆಯ್ಕೆ
ಒಂದು ತಿಂಗಳ ಒಳಗಾಗಿ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಆಯ್ಕೆ ಬಳಿಕ ಅವರಿಗೆ ಕ್ರಿಯಾ ಯೋಜನೆ ಸಿದ್ಧಪಡಿಸುವಿಕೆ ಇತ್ಯಾದಿಗಳ ಕುರಿತು ತರಬೇತಿ ನೀಡಲಾಗುವುದು. ಗ್ರಾಮ ಪಂಚಾಯತ್ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ತರಬೇತಿ ಪ್ರಕ್ರಿಯೆಯನ್ನು ನಿರಂತರವಾಗಿ ನಡೆಸಲಾಗುವುದು ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಪ್ರಮುಖರಾದ ಬಿ.ಕೆ.ಶ್ರೀನಾಥ್, ಶಿವರಾಜ್,ಕೆ.ವಿ.ಅಣ್ಣಪ್ಪ ಸೇರಿದಂತೆ ಹಲವರಿದ್ದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]