ಶಿವಮೊಗ್ಗದಲ್ಲಿ ಕಾರಿನ ಮೇಲೆ ಬಿತ್ತು ಮರದ ರೆಂಬೆ, ಸ್ವಲ್ಪದರಲ್ಲಿ ತಪ್ಪಿತು ಅಪಾಯ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

131951794 1031215290691714 4061890617426774129 n.jpg? nc cat=108&ccb=2& nc sid=730e14& nc ohc=FkyaIRRMuUEAX9p7CwQ& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 06 JANUARY 2021

ಮರದ ರೆಂಬೆ ತುಂಡಾಗಿ ಕಾರಿನ ಮೇಲೆ ಬಿದ್ದಿದ್ದು, ಸ್ವಲ್ಪದರಲ್ಲಿ ಅಪಾಯ ತಪ್ಪಿದೆ. ಶಿವಮೊಗ್ಗದ ಜೆಪಿಎನ್ ರಸ್ತೆಯಲ್ಲಿ ಘಟನೆ ಸಂಭವಿಸಿದೆ.

ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಮೇಲೆ ರೆಂಬೆ ತುಂಡಾಗಿ ಬಿದ್ದಿದೆ. ಅದೃಷ್ಟವಶಾತ್ ಯಾವುದೆ ಅಪಾಯವಾಗಿಲ್ಲ. ಕಾರು ನಿಲ್ಲಿಸಿ ಮನೆಯೊಳಗೆ ಹೋಗಿದ್ದ ವೇಳೆ ಘಟನೆಯಾಗಿದೆ.

ಜೆಪಿಎನ್ ರಸ್ತೆಯಲ್ಲಿ ವಾಹನ ಮತ್ತು ಜನ ದಟ್ಟಣೆ ಹೆಚ್ಚು. ಸ್ಮಾರ್ಟ್ ಸಿಟಿ ಕಾಮಗಾರಿಯಿಂದಾಗಿ ಟ್ರಾಫಿಕ್ ಜಾಮ‍್ ಕೂಡ ಆಗಿರುತ್ತದೆ. ಆದರೆ ಮರದ ರೆಂಬೆ ತುಂಡಾಗಿ ಬಿದ್ದಾಗ ಅದೃಷ್ಟವಶಾತ್ ಜನ, ವಾಹನ ಸಂಚಾರವಿರಲಿಲ್ಲ.

ಪಾಲಿಕೆ ಅಧಿಕಾರಿಗಳು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ರೆಂಬೆ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment