ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 9 ಫೆಬ್ರವರಿ 2022
ಶಿವಮೊಗ್ಗ ಬಾಪೂಜಿ ನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇವತ್ತು ರಾಷ್ಟ್ರ ಧ್ವಜಾರೋಹಣ ನೆರವೇರಿಸಲಾಯಿತು. NSUI ವಿದ್ಯಾರ್ಥಿ ಸಂಘಟನೆ ವತಿಯಿಂದ ಬೆಳಗ್ಗೆ ತ್ರಿವರ್ಣ ಧ್ವಜಾರೋಹಣ ಮಾಡಿ, ಗೌರವ ಸಲ್ಲಿಸಲಾಯಿತು.
NSUI ಸಂಘಟನೆ ಕಾರ್ಯಕರ್ತರು ಬೆಳಗ್ಗೆ ಧ್ವಜ ಹಾರಿಸಿ, ರಾಷ್ಟ್ರಗೀತೆಯನ್ನು ಹಾಡಿದರು.
ಕೇಸರಿ ಧ್ವಜ ಹಾರಿಸಲಾಗಿತ್ತು
ಬಾಪೂಜಿನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಮಂಗಳವಾರ ಹಿಜಾಬ್, ಕೇಸರಿ ಶಾಲು ಸಂಘರ್ಷ ತಾರಕಕ್ಕೇರಿತ್ತು. ಕಲ್ಲು ತೂರಟವಾಗಿತ್ತು. ಈ ಸಂದರ್ಭ ವಿದ್ಯಾರ್ಥಿಯೊಬ್ಬ ಧ್ವಜ ಸ್ತಂಭ ಹತ್ತಿ ಕೇಸರಿ ಧ್ವಜ ಹಾರಿಸಿದ್ದ. ಇದು ವಿವಾದಕ್ಕೆ ಕಾರಣವಾಗಿತ್ತು.
ತ್ರಿವರ್ಣ ಧ್ವಜವೇ ಶ್ರೇಷ್ಠ
‘ರಾಜಕೀಯ ಹಿತಾಸಕ್ತಿ, ಕಾಣದ ಕೈಗಳ ಕುಮ್ಮಕ್ಕಿನಿಂದಾಗಿ ಹಿಜಾಬ್, ಕೇಸರಿ ಶಾಲು ವಿವಾದ ಸೃಷ್ಟಿಯಾಗಿದೆ. ಇದನ್ನು NSUI ಸಂಘಟನೆ ತೀವ್ರವಾಗಿ ಖಂಡಿಸುತ್ತದೆ. ದೇಶದಲ್ಲಿ ಹಿಜಾಬ್ ಅಥವಾ ಕೇಸರಿ ಶಾಲು ಮುಖ್ಯವಲ್ಲ. ತ್ರಿವರ್ಣ ಧ್ವಜವೇ ಸರ್ವಶ್ರೇಷ್ಠ. ಆದ್ದರಿಂದ ಶಿವಮೊಗ್ಗದಲ್ಲಿ ರಾಷ್ಟ್ರಧ್ವಜ ಹಾರಿಸುವ ಮೂಲಕ ವಿದ್ಯಾರ್ಥಿಗಳು ಹಿಜಾಬ್, ಕೇಸರಿ ಶಾಲು ವಿಚಾರ ಕೈಬಿಡಬೇಕು. ಹಿಂದಿನಂತೆ ತರಗತಿಗಳಲ್ಲಿ ಸಹೋದರ ಭಾವನೆಯಿಂದ ಇರಬೇಕು. ವಿದ್ಯಾರ್ಥಿಗಳು ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಬೇಕು’ ಎಂದು NSUI ಕಾರ್ಯಕರ್ತರು ಮನವಿ ಮಾಡಿದ್ದಾರೆ.
ಇದನ್ನೂ ಓದಿ | ವೈರಲ್ ಹಿಂದಿನ ಸತ್ಯ, ರಾಷ್ಟ್ರಧ್ವಜ ತೆರವು ಮಾಡಿ ಕೇಸರಿ ಧ್ವಜ ಹಾರಿಸಿದ್ದು ನಿಜಾನಾ?
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422