ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ಜೂನ್ 2020
ಸುಮಾರು ನಾಲ್ಕು ತಿಂಗಳ ಬಳಿಕ ಶಿವಮೊಗ್ಗದ ತುಂಗಾ ನದಿ ಹಳೆ ಸೇತುವೆ ವಾಹನ ಸಂಚಾರಕ್ಕೆ ಮುಕ್ತವಾಗಿದೆ. ದುರಸ್ಥಿ ಹಿನ್ನೆಲೆಯಲ್ಲಿ ಸೇತುವೆಯನ್ನು ಬಂದ್ ಮಾಡಲಾಗಿತ್ತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಈಗ ಸೇತುವೆ ಮೇಲೆ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶವಿದೆ. ಕಾರು, ಆಟೋ, ದ್ವಿಚಕ್ರ ವಾಹನಗಳಷ್ಟೆ ಹಳೆ ಸೇತುವೆ ಮೇಲೆ ಸಂಚರಿಸುತ್ತಿವೆ.
ಕಳೆದ ಮಳೆಗಾಲದಲ್ಲಿ ತುಂಗಾ ಜಲಾಶಯದಲ್ಲಿ ಲಕ್ಷ ಕ್ಯೂಸೆಕ್‍ಗೂ ಹೆಚ್ಚು ನೀರು ಹೊರ ಬಿಡಲಾಗಿತ್ತು. ಇದರಿಂದ ಸೇತುವೆ ಎರಡು ಬದಿಯಲ್ಲಿ ರಸ್ತೆ ಮೇಲೆ ಬಿರುಕು ಕಾಣಿಸಿಕೊಂಡಿತ್ತು. ಆ ಬಳಿಕ ಸೇತುವೆ ಮೇಲೆ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು. ನಂತರ ಲಘು ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಇತ್ತೀಚೆಗೆ ದುರಸ್ಥಿ ಕಾರಣಕ್ಕೆ ಪುನಃ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]